CORONA LOCKDOWN HEROESCORONA VIRUSlock down

ಸಿನಿಮಾ ತಂತ್ರಜ್ಞರಿಗೆ ಯಶ್​ ದೊಡ್ಡ ಸಹಾಯ; 1.5 ಕೋಟಿ ರೂ. ನೆರವು ನೀಡುತ್ತಿರುವ ರಾಕಿಂಗ್​ ಸ್ಟಾರ್​..

ಕೊರೊನಾ ವೈರಸ್​ ಹಾವಳಿ ಹೆಚ್ಚಿದೆ. ಸಿನಿಮಾ ಕಲಾವಿದರು ಕೆಲಸವಿಲ್ಲದೆ, ತೊಂದರೆಗೆ ಸಿಲುಕಿದ್ದಾರೆ. ಇವರಿಗೆ ಸಹಾಯ ಮಾಡೋಕೆ ಅನೇಕ ಕಲಾವಿದರು ಮುಂದೆ ಬಂದಿದ್ದಾರೆ. ಈಗ ಯಶ್​ ಕೂಡ ಕಷ್ಟದಲ್ಲಿರುವ ಸಿನಿಮಾ ತಂತ್ರಜ್ಞರ ಸಹಾಯಕ್ಕೆ ಮುಂದಾಗಿದ್ದಾರೆ. 3000 ತಂತ್ರಜ್ಞರಿಗೆ ತಮ್ಮದೇ ಹಣದಿಂದ ತಲಾ 5000 ರೂಪಾಯಿ ನೀಡುತ್ತಿದ್ದಾರೆ.

ಈ ಬಗ್ಗೆ ಪತ್ರ ಬರೆದಿರುವ ಯಶ್​, ಕಣ್ಣಿಗೆ ಕಾಣದ ವೈರಸ್ ಮನುಷ್ಯನ ಬದುಕನ್ನು ಹೆಚ್ಚು ಕಮ್ಮಿ ಬುಡಮೇಲು ಮಾಡಿದೆ. ಅದರಲ್ಲೂ ಕಳೆದೊಂದು ವರ್ಷದಿಂದ ನನ್ನ ಸಿನಿಮಾ ಕುಟುಂಬ ಅಸಹಾಯಕತೆಯಿಂದ ಕೈ ಕಟ್ಟಿ ಕುಳಿತಿದೆ. ಹೌದು ಇದು ಬರೀ ಮಾತನಾಡುವ ಸಮಯವಲ್ಲ.. ಸಂಕಷ್ಟದಲ್ಲಿರುವ ಸಿನಿಮಾ ಕುಟುಂಬದ ಜೊತೆ ನಿಲ್ಲುವ ಸಮಯ..

ಹಾಗಾಗಿ ಸುಮಾರು 3000ಕ್ಕೂ ಹೆಚ್ಚಿರುವ ನಮ್ಮ ಸಿನಿಮಾ ಕಲಾವಿದರು, ತಂತ್ರಜ್ಞರು, ಕಾರ್ಮಿಕರ ಅಧಿಕೃತ ಖಾತೆಗಳಿಗೆ ತಲಾ 5000 ರೂಪಾಯಿಗಳನ್ನು ನನ್ನ ಸಂಪಾದನೆಯ ಹಣದಿಂದ ಭರಿಸಲು ನಿರ್ಧರಿಸಿದ್ದೇನೆ. ಈ ಬಗ್ಗೆ ಈಗಾಗಲೇ ನಮ್ಮ ಒಕ್ಕೂಟದ ಅಧ್ಯಕ್ಷರಾದ ಸಾ.ರಾ. ಗೋವಿಂದು ಮತ್ತು ಪ್ರಧಾನ ಕಾರ್ಯದರ್ಶಿಗಳಾದ ರವೀಂದ್ರನಾಥ್ ಅವರೊಂದಿಗೆ ಚರ್ಚಿಸಿದ್ದೇನೆ.

ನಮ್ಮ ಕಲಾವಿದರು,ತಂತ್ರಜ್ಞರು ಮತ್ತು ಕಾರ್ಮಿಕರ ಅಧಿಕೃತ ಬ್ಯಾಂಕ್ ವಿವರ ತಲುಪಿದ ತಕ್ಷಣವೇ ಇದು ಕಾರ್ಯರೂಪಕ್ಕೆ ಬರಲಿದೆ. ಈ ಸಣ್ಣ ಸಹಾಯ ಈಗ ಎದುರಾಗಿರುವ ಎಲ್ಲಾ ಕಷ್ಟಗಳಿಗೂ ಪರಿಹಾರ ಎಂಬುದು ನನ್ನ ಭಾವನೆಯಲ್ಲ..

ಬದಲಿಗೆ ಶಕ್ತಿ ಇರುವ ಹೃದಯವಂತರು.. ತಮ್ಮ ತಮ್ಮ ಕ್ಷೇತ್ರಗಳಲ್ಲಿ ಸಂಕಷ್ಟದಲ್ಲಿರುವ ಜನಸಮುದಾಯದ ಜೊತೆ ಹೆಗಲಿಗೆ ಹೆಗಲು ಕೊಟ್ಟು ನಿಂತು ಸಹಾಯ ಮಾಡಿದರೆ.. ನಾನು ಮಾಡಿದ ಪ್ರಯತ್ನಕ್ಕೂ ಸಾರ್ಥಕತೆ ಬರುತ್ತದೆ ಎಂಬುದು ನನ್ನ ಆಶಯ ಎಂದು ಯಶ್​ ತಿಳಿಸಿದ್ದಾರೆ.

Spread the love

Related Articles

Leave a Reply

Your email address will not be published.

Back to top button
Flash News