MoreScrollUncategorizedಸಿನೆಮಾ ಹಂಗಾಮ

ಕನ್ನಡ ಚಿತ್ರರಂಗದ ಹಿರಿಯ ನಟಿ ಸುರೇಖಾ ಇನ್ನಿಲ್ಲ..!

ಕನ್ನಡ ಚಿತ್ರರಂಗದ ಹಿರಿಯ ನಟಿ ಬಿ. ಜಯಾ ಅವರು ನಿಧನರಾದ ಸುದ್ದಿ ಕೇಳಿಬಂದ ಬೆನ್ನಲ್ಲೇ ಮತ್ತೋರ್ವ ಹಿರಿಯ ನಟಿ ಸುರೇಖಾ ಮೃತರಾಗಿದ್ದಾರೆ. ಡಾ. ರಾಜ್​ಕುಮಾರ್​ ಸೇರಿದಂತೆ ಅನೇಕ ಸ್ಟಾರ್​ ನಟರ ಜೊತೆ ನಟಿಸುವ ಮೂಲಕ ಜನಪ್ರಿಯರಾಗಿದ್ದ ಅವರು ಹಲವು ವರ್ಷಗಳ ಕಾಲ ಚಂದನವನದಲ್ಲಿ ಸಕ್ರಿಯರಾಗಿದ್ದರು. ತ್ರಿಮೂರ್ತಿ ಸಿನಿಮಾದಲ್ಲಿ ಡಾ. ರಾಜ್‌ಕುಮಾರ್ ಜೊತೆ ನಟಿಸಿದ್ದ ನಟಿ ಸುರೇಖಾ ಹೃದಯಾಘಾತದಿಂದ ಬೆಂಗಳೂರಿನಲ್ಲಿ ಮೃತಪಟ್ಟಿದ್ದಾರೆ. ಸುರೇಖಾ ಅವರು ಸೆನ್ಸಾರ್ ಬೋರ್ಡ್ ಸದಸ್ಯೆ ಹಾಗೂ ಸ್ಟೇಟ್ ಅವಾರ್ಡ್ ಕಮಿಟಿಯ ಸದಸ್ಯೆಯಾಗಿದ್ದರು. ತ್ರಿಮೂರ್ತಿ ಸಿನಿಮಾ 1975ರಲ್ಲಿ ಬಿಡುಗಡೆಯಾಗಿತ್ತು. ಸಿವಿ ರಾಜೇಂದ್ರ ಅವರು ಈ ಸಿನಿಮಾ ನಿರ್ದೇಶನ ಮಾಡಿದ್ದರು. ಜಿ.ಕೆ. ವೆಂಕಟೇಶ್ ಸಂಗೀತ ಒದಗಿಸಿದ್ದರು. ಪಾರ್ವತಮ್ಮ ರಾಜ್ ಕುಮಾರ್ ಈ ಸಿನಿಮಾ ನಿರ್ಮಿಸಿದ್ದರು

ಸುರೇಖಾ ಅವರಿಗೆ 66 ವರ್ಷ ವಯಸ್ಸಾಗಿತ್ತು. ಹೃದಯಾಘಾತವಾದ ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಆದರೂ ಸುರೇಖಾ ಬದುಕುಳಿಯಲಿಲ್ಲ. ಬನಶಂಕರಿ ಚಿತಾಗಾರದಲ್ಲಿ ಇಂದು ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬದ ಸದಸ್ಯರು ತಿಳಿಸಿದ್ದಾರೆ. ಸುಮಾರು 160ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದ ಸುರೇಖಾ 6 ಸಿನಿಮಾಗಳಲ್ಲಿ ಡಾ. ರಾಜ್‌ಕುಮಾರ್‌ಗೆ ಜೋಡಿಯಾಗಿದ್ದರು.

ಸುರೇಖಾ ಭರತನಾಟ್ಯ ಮತ್ತು ಕೂಚುಪುಡಿ ನೃತ್ಯ ಕಲಾವಿದೆ ಆಗಿದ್ದರು. ಹಲವು ದೇಶಗಳಲ್ಲಿ ನೃತ್ಯ ಪ್ರದರ್ಶನ ನೀಡಿದ್ದ ಅವರಿಗೆ ಅಪಾರ ಅಭಿಮಾನಿಗಳಿದ್ದರು. ಮಾಯಾ ಮನುಷ್ಯ, ನಾನು ಬಾಳಬೇಕು, ನಾನು ಅವನಿಲ್ಲೈ ಮುಂತಾದ ಸಿನಿಮಾಗಳಲ್ಲಿ ಅವರು ನಾಯಕಿ ಆಗಿದ್ದರು. ಆಪರೇಷನ್ ಜಾಕ್ ಪಾಟ್​ನಲ್ಲಿ ಸಿಐಡಿ 999, ತ್ರಿಮೂರ್ತಿ, ಒಲವು ಗೆಲುವು, ಗಿರಿ ಕನ್ಯೆ, ಸಾಕ್ಷಾತ್ಕಾರ, ಕಸ್ತೂರಿ ನಿವಾಸ, ಹುಲಿಯ ಹಾಲಿನ ಮೇವು ಮುಂತಾದ ಸಿನಿಮಾಗಳಲ್ಲಿ ಅವರು ಬಣ್ಣ ಹಚ್ಚಿದ್ದರು. ಶಿವಕನ್ಯೆ, ಕಾವೇರಿ, ಕೆಸರಿನ ಕಮಲ, ಬ್ಯಾಂಕರ್ ಮಾರ್ಗಯ್ಯ, ಆಲೆಮನೆ, ನಾಗರಹೊಳೆ, ತಾಯಿ ದೇವರು, ಭಕ್ತ ಸಿರಿಯಾಳ ಮುಂತಾದ ಚಿತ್ರಗಳಲ್ಲಿ ಸುರೇಖಾ ಮುಖ್ಯಭೂಮಿಕೆ ನಿಭಾಯಿಸಿದ್ದರು.

Spread the love

Related Articles

Leave a Reply

Your email address will not be published.

Back to top button
Flash News