CORONA VIRUSlock downMoreScrollTop NewsUncategorizedರಾಜ್ಯ-ರಾಜಧಾನಿ

ರಾಜ್ಯದ ಎಂಟು ಜಿಲ್ಲೆಗಳಲ್ಲಿ ಒಂದು ವಾರ ಲಾಕ್‌ಡೌನ್ ಕಂಟಿನ್ಯೂ: ಸಿಎಂ ಯಡಿಯೂರಪ್ಪ..

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಇಂದು ಕೋವಿಡ್ ಸೋಂಕು ತೀವ್ರವಾಗಿರುವ ಎಂಟು ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ನಡೆಸಿ ಸೋಂಕು ನಿಯಂತ್ರಣ ಕುರಿತಂತೆ ಚರ್ಚಿಸಿದರು. ರಾಜ್ಯದ 8 ಜಿಲ್ಲೆಗಳಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಕೊರೊನಾ ಇಳಿಕೆಯಾಗುತ್ತಿಲ್ಲ. ಹೀಗಾಗಿ ಆ 8 ಜಿಲ್ಲೆಗಳಲ್ಲಿ ಒಂದು ವಾರ ಲಾಕ್‌ಡೌನ್ ಮುಂದುವರೆಸಲು ಸಿಎಂ ಬಿಎಸ್ ಯಡಿಯೂರಪ್ಪ ಸೂಚಿಸಿದ್ದಾರೆ.

ರಾಜ್ಯದಲ್ಲಿ ಜೂನ್ 14ರ ಬಳಿಕ ಅನ್ಲಾಕ್ ಆದರೂ ಆ 8 ಜಿಲ್ಲೆಗಳಲ್ಲಿ ಲಾಕ್ಡೌನ್ ಇರಲಿದೆ. ಮೈಸೂರು, ಹಾಸನ, ತುಮಕೂರು, ಶಿವಮೊಗ್ಗ, ಮಂಡ್ಯ, ದಕ್ಷಿಣ ಕನ್ನಡ, ಬೆಳಗಾವಿ, ಚಿಕ್ಕಮಗಳೂರು ಡಿಸಿಗಳ ಜೊತೆ ಸಭೆ ನಡೆಸಿದ ಸಿಎಂ ಬಿಎಸ್ ಯಡಿಯೂರಪ್ಪ 8 ಜಿಲ್ಲೆಗಳಲ್ಲಿ ಕೊರೊನಾ ಹೆಚ್ಚಳಕ್ಕೆ ಕಳವಳ ವ್ಯಕ್ತಪಡಿಸಿದ್ದಾರೆ.

ರಾಜ್ಯದ ಒಟ್ಟು ಪ್ರಕರಣಗಳಲ್ಲಿ 65 ಸಾವಿರ ಸಕ್ರಿಯ ಪ್ರಕರಣಗಳು ಈ ಎಂಟು ಜಿಲ್ಲೆಗಳಲ್ಲಿವೆ. ಈ ಜಿಲ್ಲೆಗಳಲ್ಲಿ ಸೋಂಕಿನ ಇಳಿಕೆಯ ಪ್ರಮಾಣ ಕಡಿಮೆ ಇದೆ. ಆದ್ದರಿಂದ ಪಾಸಿಟಿವಿಟಿ ದರವನ್ನು ಶೇ.5ಕ್ಕಿಂತ ಕಡಿಮೆಗೊಳಿಸುವ ನಿಟ್ಟಿನಲ್ಲಿ ಕ್ರಮ ವಹಿಸುವಂತೆ ಸೂಚಿಸಿದರು.

ಇಂದು ಜಿಲ್ಲಾಡಳಿತಗಳ ಡಿಸಿಗಳ ಜೊತೆ ನಡೆಸಿದ ಸಭೆಯಲ್ಲಿ ಸಿಎಂ ಬಿಎಸ್‌ವೈ, ರಾಜ್ಯದ 8 ಜಿಲ್ಲೆಗಳಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಕೊರೊನಾ ಇಳಿಕೆಯಾಗುತ್ತಿಲ್ಲ. ಹೀಗಾಗಿ ಆ 8 ಜಿಲ್ಲೆಗಳಲ್ಲಿ ಒಂದು ವಾರ ಲಾಕ್‌ಡೌನ್ ಮುಂದುವರೆಸಲು ಸೂಚಿಸಿದ್ದಾರೆ. ಆ ಜಿಲ್ಲೆಗಳಲ್ಲಿ ಜನರು ಕೊವಿಡ್ ನಿಯಮ ಉಲ್ಲಂಘಿಸದಂತೆ ಕ್ರಮಕೈಗೊಳ್ಳಿ. ಈ ಹಿಂದೆ 8 ಜಿಲ್ಲೆಗಳಲ್ಲಿ ಲಾಕ್‌ಡೌನ್ ಮುಂದುವರಿಸಲು ಹೇಳಿದ್ದೀರಿ. ಅದರಂತೆ ಸೋಂಕು ಕಡಿಮೆಯಾಗದ ಕಾರಣ ಒಂದು ವಾರ ಲಾಕ್​ಡೌನ್ ಮುಂದುವರಿಸೋಣ ಆದ್ರೆ ಲಾಕ್‌ಡೌನ್ ಜತೆಗೆ ಏನು ವಿನಾಯಿತಿ ನೀಡಬೇಕಾಗಿದೆ. ಈ ಬಗ್ಗೆ ನೀವೇ ಚರ್ಚೆ ಮಾಡಿ ತಿಳಿಸಿ ಎಂದು ಸಿಎಂ ಬಿಎಸ್ವೈ ಆದೇಶಿಸಿದ್ದಾರೆ.

Spread the love

Related Articles

Leave a Reply

Your email address will not be published.

Back to top button
Flash News