CORONA VIRUSlock downMoreScrollTop NewsUncategorizedಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ(BMTC-KSRTC)ರಾಜ್ಯ-ರಾಜಧಾನಿ

ಕರ್ನಾಟಕ ಅನ್ ಲಾಕ್: ಮೆಟ್ರೊ ರೈಲು, ಬಸ್ ಸಂಚಾರಕ್ಕೆ ಅನುಮತಿ ಇಲ್ಲ.. ಆಟೊ, ಟ್ಯಾಕ್ಸಿ ಓಡಾಡಬಹುದು..

ಬೆಂಗಳೂರು: ಕರ್ನಾಟಕದ 11 ಜಿಲ್ಲೆಗಳಲ್ಲಿ ಲಾಕ್​ಡೌನ್ ಮುಂದುವರಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಬೆಂಗಳೂರು ನಗರ ಸೇರಿದಂತೆ ಉಳಿದ ಜಿಲ್ಲೆಗಳಲ್ಲಿ ಸೋಮವಾರದಿಂದ  ಅನ್​ಲಾಕ್​ ಪ್ರಕ್ರಿಯೆ ಆರಂಭವಾಗಲಿದೆ. ಅಂತರ ಜಿಲ್ಲಾ ಸಂಚಾರಕ್ಕೂ ಅವಕಾಶ ನೀಡಲಾಗಿದೆ. ಆದರೆ ರಾಜ್ಯದಲ್ಲಿ ಅನ್​ಲಾಕ್ ಪ್ರಕ್ರಿಯೆ ಆರಂಭವಾಗುವ ಜಿಲ್ಲೆಗಳೂ ಸೇರಿದಂತೆ ಎಲ್ಲಾ ಜಿಲ್ಲೆಗಳಲ್ಲಿ ಬಸ್ ಸಂಚಾರಕ್ಕೆ ನಿರ್ಬಂಧ ಎಂದಿನಂತೆ ಮುಂದುವರಿಯಲಿದೆ. ರಾಜ್ಯಾದ್ಯಂತ KSRTC, BMTC, ಖಾಸಗಿ ಬಸ್ ಸಂಚಾರಕ್ಕೆ ಅವಕಾಶವಿಲ್ಲ. ಬೆಂಗಳೂರಿನಲ್ಲಿ ಮೆಟ್ರೊ ರೈಲುಗಳ ಸಂಚಾರವೂ ಇರುವುದಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸ್ಪಷ್ಟಪಡಿಸಿದರು.

ಆಟೊ, ಟ್ಯಾಕ್ಸಿಗಳ ಸಂಚಾರಕ್ಕೆ ಅವಕಾಶ ನೀಡಲಾಗಿದೆ. ಆದರೆ ಆಟೊ, ಟ್ಯಾಕ್ಸಿಗಳಲ್ಲಿ ಇಬ್ಬರು ಪ್ರಯಾಣಿಕರು ಮಾತ್ರ ಇರಬೇಕು ಎಂಬ ನಿರ್ಬಂಧ ವಿಧಿಸಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು. ಮದ್ಯದ ಪಾರ್ಸೆಲ್ ಪಡೆಯಲು ಮಧ್ಯಾಹ್ನ 2ರವರೆಗೆ ಬಾರ್ ರೆಸ್ಟೋರೆಂಟ್​, ವೈನ್​ ಸ್ಟೋರ್​ಗಳಲ್ಲಿ ಅವಕಾಶ ಸಿಗಲಿದೆ. ಎಂಎಸ್​ಐಎಲ್​ಗಳಲ್ಲಿ ​ಮಧ್ಯಾಹ್ನ 2ರವರೆಗೆ ಪಾರ್ಸೆಲ್​ ಸಿಗಲಿದೆ ಎಂದು ತಿಳಿಸಿದರು.

ರಾಜ್ಯದಲ್ಲಿ ಪಾಸಿಟಿವಿಟಿ ರೇಟ್ ಹೆಚ್ಚಿರುವ ಮಂಡ್ಯ, ಮೈಸೂರು, ಹಾಸನ, ಶಿವಮೊಗ್ಗ, ಬೆಳಗಾವಿ, ಕೊಡಗು, ಚಿಕ್ಕಮಗಳೂರು, ದಕ್ಷಿಣ ಕನ್ನಡ, ದಾವಣಗೆರೆ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಲಾಕ್​ಡೌನ್ ಮುಂದುವರೆಯಲಿದೆ. ಈ ಜಿಲ್ಲೆಗಳಲ್ಲಿ ಈಗ ಅನುಷ್ಠಾನದಲ್ಲಿರುವ ಮಾರ್ಗಸೂಚಿಯಲ್ಲಿ ಯಾವುದೇ ಬದಲಾವಣೆ ಇಲ್ಲ. ಉಳಿದ ಎಲ್ಲ ಜಿಲ್ಲೆಗಳಲ್ಲಿ ಜೂನ್ 14ರಿಂದ ನಿರ್ಬಂಧ ಸಡಿಲಿಕೆ ಮಾಡುತ್ತೇವೆ ಎಂದು ಸಿಎಂ ಯಡಿಯೂರಪ್ಪ ಘೋಷಿಸಿದ್ದಾರೆ. ಪ್ರತಿದಿನ ರಾತ್ರಿ 7ರಿಂದ ಬೆಳಿಗ್ಗೆ 5ರವರೆಗೆ ಕೊವಿಡ್ ಕರ್ಪ್ಯೂ ಜಾರಿಯಲ್ಲಿರುತ್ತದೆ ಎಂದು  ಹೇಳಿದರು.

Spread the love

Related Articles

Leave a Reply

Your email address will not be published.

Back to top button
Flash News