CORONA VIRUSMoreScrollUncategorized

ಹಿರಿಯ ನಟ, ಪತ್ರಕರ್ತ ಸುರೇಶ್ ಚಂದ್ರ ವಿಧಿವಶ..!

ಬೆಂಗಳೂರು: ಕೋವಿಡ್ ಸೋಂಕಿನಿಂದ ಬಳಲುತ್ತಿದ್ದ ಹಿರಿಯ ಪತ್ರಕರ್ತ ಹಾಗೂ ಚಿತ್ರನಟ ಸುರೇಶ್​ಚಂದ್ರ ಅವರು ಇಂದು  ಮಧ್ಯಾಹ್ನ ನಿಧನರಾಗಿದ್ದಾರೆ. ಸುರೇಶ್​ ಚಂದ್ರ ಅವರಿಗೆ ಕೊವಿಡ್​ ಕಾಣಿಸಿಕೊಂಡಿತ್ತು. ಹೀಗಾಗಿ, ಕೆಲವು ದಿನಗಳ ಹಿಂದೆ ಅವರನ್ನು ಬೆಂಗಳೂರಿನ ಜಯನಗರದಲ್ಲಿರುವ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ, ಈಗ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ.

ಸುರೇಶ್​ ಚಂದ್ರ ಅವರು ಪತ್ರಿಕೋದ್ಯಮದ ಜತೆಗೆ ಸಿನಿಮಾಗಳಲ್ಲೂ ನಟಿಸುತ್ತಿದ್ದರು. 80ರ ದಶಕದಿಂದ ಸಿನಿಮಾ ಪತ್ರಿಕೋದ್ಯಮದಲ್ಲಿ ಕೆಲಸ ನಿರ್ವಹಿಸಿದ್ದ ಸುರೇಶ್​ಚಂದ್ರ ಅವರು ಚಂದನವನದ ಶಂಕರ್​ನಾಗ್​, ವಿಷ್ಣುವರ್ಧನ್​, ಅಂಬರೀಶ್​, ದೇವರಾಜ್​ ಸೇರಿದಂತೆ ಹಲವು ಹಿರಿಯ ನಟರೊಂದಿಗೆ ಉತ್ತಮ ಒಡನಾಟ ಹೊಂದಿದ್ದರು. ‘ಚೆಲುವಿನ ಚಿತ್ತಾರ’ ಸಿನಿಮಾದಲ್ಲಿ ನಟಿಸುವಂತೆ ನಿರ್ದೇಶಕ ಎಸ್​. ನಾರಾಯಣ್ ಸುರೇಶ್​ ಚಂದ್ರ​ ಅವರನ್ನು  ಕೋರಿದ್ದರು. ಈ ಚಿತ್ರದ ಮೂಲಕ ಅವರು ಸಿನಿಮಾ ರಂಗಕ್ಕೆ ಕಾಲಿಟ್ಟರು. ಅಲ್ಲಿಂದ ಇಲ್ಲಿವರೆಗೆ ಸುಮಾರು 50ಕ್ಕೂ ಅಧಿಕ ಚಿತ್ರಗಳಲ್ಲಿ ಸುರೇಶ್​ ಚಂದ್ರ ನಟಿಸಿದ್ದಾರೆ. ಅವರ ನಿಧನಕ್ಕೆ ಅನೇಕರು ಸಂತಾಪ ಸೂಚಿಸಿದ್ದಾರೆ.

ಸೆಲೆಬ್ರಿಟಿಗಳ ವಲಯದಲ್ಲಿ ಕೊರೊನಾ ವೈರಸ್ ಅಟ್ಟಹಾಸ ಮೆರೆಯುತ್ತಿದೆ. ಪ್ರತಿದಿನ ಒಬ್ಬರಲ್ಲ ಒಬ್ಬರು ಕೊವಿಡ್​ಗೆ ಬಲಿಯಾಗುತ್ತಲೇ ಇದ್ದಾರೆ. ಬಾಲಿವುಡ್ ನಟ ರಾಹುಲ್ ವೋಹ್ರಾ, ತೆಲುಗು ನಟ ಟಿಎನ್ಆರ್, ತಮಿಳು ನಟ ಪಾಂಡು, ಕಾಲಿವುಡ್ ನಿರ್ದೇಶಕ ಕೆ.ವಿ. ಆನಂದ್, ಕನ್ನಡದ ಖ್ಯಾತ ನಿರ್ಮಾಪಕ ಕೋಟಿ ರಾಮು, ಯುವ ನಟ- ನಿರ್ಮಾಪಕ ಡಿ.ಎಸ್. ಮಂಜುನಾಥ್, ಕಾರ್ಯಕಾರಿ ನಿರ್ಮಾಪಕ ರಾಜಶೇಖರ್, ಪೋಸ್ಟರ್ ಡಿಸೈನರ್ ಮಸ್ತಾನ್, ಪುಟ್ಟಣ್ಣ ಕಣಗಾಲ್ ಪುತ್ರ ರಾಮು, ಕವಿರತ್ನ ಕಾಳಿದಾಸ ಸಿನಿಮಾ ನಿರ್ದೇಶಕ ರೇಣುಕಾ ಶರ್ಮಾ ಮುಂತಾದವರನ್ನು ಈ ಮಹಾಮಾರಿ ಬಲಿ ಪಡೆದುಕೊಂಡಿದೆ.

Spread the love

Related Articles

Leave a Reply

Your email address will not be published.

Back to top button
Flash News