MoreScrollTop NewsUncategorizedರಾಜಕೀಯರಾಜ್ಯ-ರಾಜಧಾನಿ

ಇನ್ನೆರಡು ವರ್ಷ ನಾನೇ ಸಿಎಂ: ಯಡಿಯೂರಪ್ಪ..

ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ ಬಗ್ಗೆ ಬಿಸಿಬಿಸಿ ಚರ್ಚೆಯಾಗುತ್ತಿದ್ದಂತೆ, ಮುಂದಿನ ಎರಡು ವರ್ಷ ನಾನೇ ಸಿಎಂ ಆಗಿ ರಾಜ್ಯದ ಅಭಿವೃದ್ಧಿಗೆ ಗಮನ ಕೊಡುವೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.

ಕರ್ನಾಟಕ ಮುಖ್ಯಮಂತ್ರಿಯಾಗಿ ಯಡಿಯೂರಪ್ಪ ಅವರೇ ಮುಂದಿನ ಎರಡು ವರ್ಷ ಕಾಲ ಮುಂದುವರಿಯಲಿದ್ದಾರೆ. ಅದರಲ್ಲಿ ಯಾವುದೇ ಅನುಮಾನ ಇಲ್ಲ ಎಂದು ಕರ್ನಾಟಕ ಬಿಜೆಪಿ ಉಸ್ತುವಾರಿ ಅರುಣ್​ ಸಿಂಗ್​ ಅವರು ನಿನ್ನೆಯಷ್ಟೇ ದೆಹಲಿಯಲ್ಲಿ ಸ್ಪಷ್ಟಪಡಿಸಿದ ಬಳಿಕ ಇದೇ ಮೊದಲ ಬಾರಿಗೆ ಯಡಿಯೂರಪ್ಪ ಅವರು ಆ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ.

ಹಾಸನದಲ್ಲಿ ಪ್ರಗತಿ ಪರಿಶೀಲನೆ ಸಭೆ ನಡೆಸಿ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಯಡಿಯೂರಪ್ಪ ಅವರು, ಕೇಂದ್ರದ ನಾಯಕರು ನನ್ನ ಮೇಲೆ ವಿಶ್ವಾಸ ಇಟ್ಟು ಯಡಿಯೂರಪ್ಪ ಅವರೇ ಸಿಎಂ ಆಗಿ ಮುಂದುವರಿಯುತ್ತಾರೆ ಎಂದಿದ್ದಾರೆ. ಎಲ್ಲರ ಸಹಕಾರದಿಂದ ರಾಜ್ಯದ ಮುಂದಿನ ಅಭಿವೃದ್ಧಿಯತ್ತ ಗಮನ ಕೊಡುವೆ. ರಾಜ್ಯಾದ್ಯಂತ ಪ್ರವಾಸ ಮಾಡಿ ಒಳ್ಳೆಯ ಕೆಲಸ ಮಾಡುವ ಪ್ರಯತ್ನ ಮಾಡುವೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಅರುಣ್ ಸಿಂಗ್ ಹೇಳಿಕೆಯಿಂದ ನನಗೆ 100ರಷ್ಟು ಬಲ ಬಂದಿದೆ. ಎರಡು ವರ್ಷ ಯಾವುದೇ ಬದಲಾವಣೆ ಇಲ್ಲ, ಬಿಎಸ್‍ವೈ ನೇತೃತ್ವದಲ್ಲಿ ಒಳ್ಳೆಯ ಕೆಲಸವಾಗುತ್ತಿದೆ ಎಂದಿದ್ದಾರೆ. ಇದರಿಂದ ನನ್ನ ಜವಾಬ್ದಾರಿ ಜಾಸ್ತಿ ಆಗಿದೆ. ನನ್ನ ಮೇಲೆ ಪ್ರಧಾನಿ ಮೋದಿ, ಅಮಿತ್ ಶಾ ಇಟ್ಟುಕೊಂಡಿರುವ ಪ್ರೀತಿ ವಿಶ್ವಾಸ ಉಳಿಸಿಕೊಳ್ಳುವೆ. ಪ್ರಾಮಾಣಿಕವಾಗಿ ಅಭಿವೃದ್ಧಿ ಪರ ಕೆಲಸ ಮಾಡುತ್ತೇನೆ ಎನ್ನುವ ಮೂಲಕ ಗೊಂದಲಗಳಿಗೆ ತೆರೆ ಎಳೆದರು.

Spread the love

Related Articles

Leave a Reply

Your email address will not be published.

Back to top button
Flash News