CORONA VIRUSlock downMoreScrollTop NewsUncategorizedರಾಜಕೀಯರಾಜ್ಯ-ರಾಜಧಾನಿ

ಕೊವಿಡ್ ನಿಯಮಗಳನ್ನು ಗಾಳಿಗೆ ತೂರಿದ ಇಬ್ಬರು ಪ್ರಭಾವಿ ರಾಜಕಾರಣಿಗಳ ವಿರುದ್ಧ ದೂರು..

ರಾಜ್ಯದಲ್ಲಿ ಕೊರೊನಾ ಎರಡನೇ ಅಲೆಗೆ ಸಿಲುಕಿ ಜನ ಆಸ್ಪತ್ರೆಗಳಲ್ಲಿ ಬೆಡ್, ವೆಂಟಿಲೇಟಲ್, ಆಕ್ಸಿಜನ್ ಸಮಸ್ಯೆಗಳಿಂದ, ನರಳಾಡಿ ಬೀದಿಬೀದಿಯಲ್ಲಿ ಪ್ರಾಣ ಬಿಟ್ಟಿದ್ದನ್ನು ಇನ್ನೂ ಯಾರೂ ಮರೆತಿಲ್ಲ. ರಾಜ್ಯ ಸರ್ಕಾರ ಕೊರೊನಾ ನಿಯಂತ್ರಣಕ್ಕಾಗಿ ಲಾಕ್‌ಡೌನ್ ಘೋಷಿಸಿದ್ದರ ಪರಿಣಾಮ ರಾಜ್ಯದಲ್ಲಿ ಕೊರೊನಾ ಹಾವಳಿ ಕೊಂಚ ತಗ್ಗಿದೆಯಾದರೂ ಜನ ಕೋವಿಡ್ ನಿಯಮಗಳನ್ನ ಕಟ್ಟುನಿಟ್ಟಾಗಿ ಪಾಲಿಸಬೇಕೆಂದು ಸರ್ಕಾರ ಘೋಷಿಸಿದೆ. ಆದರೆ ಇಲ್ಲಿ ರಾಜಕಾರಣಿಗಳಿಂದಲೇ ಕೊವಿಡ್ ನಿಯಮ ಉಲ್ಲಂಘನೆಯಾಗ್ತಿದೆ.

ಹೌದು ಇಂಧನ ಸಚಿವ ಕೆಎಸ್ ಈಶ್ವರಪ್ಪ ನಿನ್ನೆ ತಮ್ಮ 73ನೇ ಹುಟ್ಟುಹಬ್ಬದ ಪ್ರಯುಕ್ತ ತಮ್ಮ 14 ಜನ ಕುಟುಂಬ ಸದಸ್ಯರ ಜೊತೆ ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಿದ್ದಾರೆ. ರಾಜ್ಯದಲ್ಲಿ ಕೋವಿಡ್ ನಿಯಮದ ಪ್ರಕಾರ ದೇವಸ್ಥಾನದ ಒಳಗೆ ಸಾರ್ವಜನಿಕರಿಗೆ ಪ್ರವೇಶವಿಲ್ಲ, ಆದರೂ ಈಶ್ವರಪ್ಪ ತಮ್ಮ ಕುಟುಂಬದವರ ಜೊತೆ ದೇವಸ್ಥಾನಕ್ಕೆ ತೆರಳಿ ಕೊವಿಡ್ ನಿಯಮ ಉಲ್ಲಂಘಿಸಿದ್ದಾರೆ.

ಇನ್ನು ಮಾಜಿ ಡಿಸಿಎಂ ಪರಮೇಶ್ವರ್ ಅವರೂ ಕೂಡ ಕೊವಿಡ್ ನಿಯಮ ಉಲ್ಲಂಘಿಸಿದ್ದಾರೆ. ತುಮಕೂರು ಜಿಲ್ಲೆ ಮಧುಗಿರಿ ತಾಲೂಕಿನ ಕೋಡ್ಲಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕೊರೊನಾ ವಾರಿಯರ್ಸ್ಗಳಾದ ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತರಿಗೆ ಮಾಜಿ ಉಪಮುಖ್ಯಮಂತ್ರಿ ಜಿ. ಪರಮೇಶ್ವರ್ ಫುಡ್ ಕಿಟ್ ವಿತರಿಸುವಾಗ ಮಾಸ್ಕ್ ಧರಿಸಿಯೇ ಇಲ್ಲ,

ಅಷ್ಟೇ ಅಲ್ಲದೇ ಇದೇ ವೇಳೆಯಲ್ಲಿ ಅಲ್ಲಿನ ಗ್ರಾಮಸ್ಥರು ಗ್ರಾಮಗಳಿಗೆ ಸರಿಯಾದ ರಸ್ತೆಗಳಿಲ್ಲ, ಬಸ್ಸುಗಳ ವ್ಯವಸ್ಥೆ ಇಲ್ಲ, ಮೂಲ ಸೌಕರ್ಯಗಳ ಕೊರತೆ ಇದೆ ಎಂದು ಜಿ. ಪರಮೇಶ್ವರ್ ಅವರನ್ನು ತರಾಟೆಗೆ ತೆಗೆದು ಕೊಂಡಿದ್ದು, ಇದರಿಂದ ಅಲ್ಲಿ ಜನ ಗುಂಪುಗೂಡಿದ್ದು ಕಂಡುಬಂದಿದೆ.

ಸರ್ಕಾರದ ಆದೇಶದ ಹಿನ್ನೆಲೆಯಲ್ಲಿ ಸ್ಥಾಪಿತವಾಗಿರುವ ‘ಗ್ರಿವಿಯೆಲ್ಸ್ ಸೆಲ್’ ಕೊವಿಡ್ ನಿಯಮ ಉಲ್ಲಂಘಿಸಿದವರ ವಿರುದ್ಧ ದೂರು ದಾಖಲಿಸುವ ಕೇಂದ್ರದಲ್ಲಿ ಪ್ರಭಾವಿ ರಾಜಕಾರಣಿಗಳಾದ ಈಶ್ವರಪ್ಪ, ಹಾಗೂ ಜಿ. ಪರಮೇಶ್ವರ್ ವಿರುದ್ಧ ಸಾಮಾಜಿಕ ಕಾರ್ಯಕರ್ತ ಎಚ್.ಎಂ ವೆಂಕಟೇಶ್ ರವರು ಎಪಿಡೆಮಿಕ್ ಆಕ್ಟ್-20 ಉಲ್ಲಂಘನೆ ಆರೋಪದಡಿಯಲ್ಲಿ ದೂರು ದಾಖಲಿಸಿದ್ದಾರೆ.

Spread the love

Related Articles

Leave a Reply

Your email address will not be published.

Back to top button
Flash News