MoreScrollUncategorizedಜಿಲ್ಲೆಮಾಹಿತಿ/ತಂತ್ರಜ್ಞಾನ

ಶಿವಮೊಗ್ಗದಲ್ಲಿ ಜೂನ್ ಅಂತ್ಯದವರೆಗೆ ವಿಮಾನಯಾನ ಆರಂಭಿಸುವ ಅಪೇಕ್ಷೆಯಿದೆ: ಸಿಎಂ ಯಡಿಯೂರಪ್ಪ

ಶಿವಮೊಗ್ಗ: ಶಿವಮೊಗ್ಗ ವಿಮಾನ ನಿಲ್ದಾಣ ಕಾಮಗಾರಿ ಪ್ರಗತಿಯಲ್ಲಿದ್ದು, ಮುಂದಿನ ಜೂನ್ ಒಳಗಾಗಿ ಪೂರ್ಣಗೊಳಿಸಲು ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಬಿಎಸ್.ಯಡಿಯೂರಪ್ಪ ತಿಳಿಸಿದರು.

ಸೋಗಾನೆಯಲ್ಲಿ ಶಿವಮೊಗ್ಗ ವಿಮಾನ ನಿಲ್ದಾಣ ಕಾಮಗಾರಿ ಪ್ರಗತಿ ಪರಿಶೀಲನೆ ನಡೆಸಿದ ಬಳಿಕ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಮುಖ್ಯಮಂತ್ರಿ ಬಿಎಸ್.ಯಡಿಯೂರಪ್ಪ, ಬೆಂಗಳೂರು ವಿಮಾನ ನಿಲ್ದಾಣದ ಬಳಿಕ ಶಿವಮೊಗ್ಗದಲ್ಲಿಯೇ ಅಂತಹ ಸುಸಜ್ಜಿತ ವಿಮಾನ ನಿಲ್ದಾಣ ನಿರ್ಮಾಣವಾಗಲಿದೆ. ಹಣಕಾಸಿನ ಅಡಚಣೆ ನಡುವೆಯೂ ಅನುದಾನ ಬಿಡುಗಡೆಗೊಳಿಸಿ ತ್ವರಿತಗತಿಯಲ್ಲಿ ನಿರ್ಮಾಣ ಕಾಮಗಾರಿ ಕೈಗೊಳ್ಳಲಾಗಿದೆ ಎಂದರು.

ಜಿಲ್ಲೆಯಲ್ಲಿ ವಿಮಾನ ನಿಲ್ದಾಣ​ ಆಗುವುದರಿಂದ ಕೈಗಾರಿಕೆಗಳ ಅಭಿವೃದ್ಧಿ ಆಗಲಿದೆ. 384 ಕೋಟಿ ವೆಚ್ಚದಲ್ಲಿ ವಿಮಾನ ನಿಲ್ದಾಣದ​ ಕಾಮಗಾರಿ ನಡೆಯುತ್ತಿದೆ. ಕೈಗಾರಿಕಾ ಕ್ಷೇತ್ರ ಬೆಳೆದರೆ ಯುವಕರಿಗೆ ಉದ್ಯೋಗ ಸಿಗಲಿದೆ. ಮಧ್ಯ ಕರ್ನಾಟಕ ಭಾಗದ ಜನರಿಗೆ ಅನುಕೂಲವಾಗಲಿದೆ. 2022ರ ಜೂನ್​ ಅಂತ್ಯದಲ್ಲಿ ಕಾಮಗಾರಿ ಪೂರ್ಣಗೊಳ್ಳುವ ವಿಶ್ವಾಸವಿದೆ. ನಮಗೂ ಆದಷ್ಟು ಬೇಗ ವಿಮಾನಯಾನ ಆರಂಭಿಸಬೇಕೆಂಬ ಅಪೇಕ್ಷೆಯಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದರು.

ರನ್ ವೇ ಕಾಮಗಾರಿ, ಸಂಪರ್ಕ ರಸ್ತೆ, ಪೆರಿಮೀಟರ್ ರಸ್ತೆ ಕಾಮಗಾರಿಗಳು ಪ್ರಗತಿಯಲ್ಲಿವೆ. ಕಾಂಪೌಡ್ ನಿರ್ಮಾಣ ಬಹುತೇಕ ಪೂರ್ಣಗೊಂಡಿದ್ದು, 15900 ಮೀಟರ್ ಪೈಕಿ 11500 ಮೀಟರ್ ಕಾಂಪೌಡ್ ನಿರ್ಮಾಣ ಪೂರ್ಣಗೊಳಿಸಲಾಗಿದೆ ಎಂದರು. ಮುಖ್ಯಮಂತ್ರಿ ಅವರು ಈ ಸಂದರ್ಭದಲ್ಲಿ ವಿಮಾನ ನಿಲ್ದಾಣ ಕಟ್ಟಡದ ವಿನ್ಯಾಸ ಅನಾವರಣ ಮಾಡಿದರು

ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜು, ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ, ಶಾಸಕರಾದ ಅಶೋಕ ನಾಯ್ಕ್, ಅರಗ ಜ್ನಾನೇಂದ್ರ, ರುದ್ರೇಗೌಡ, ಆರ್ಯವೈಶ್ಯ ನಿಗಮ ಅಧ್ಯಕ್ಷ ಡಿ.ಎಸ್.ಅರುಣ್, ಮೇಯರ್ ಸುನಿತಾ ಅಣ್ಣಪ್ಪ, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಸೆಲ್ವಕುಮಾರ್, ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಮತ್ತಿತರರು ಉಪಸ್ಥಿತರಿದ್ದರು.

Spread the love

Related Articles

Leave a Reply

Your email address will not be published.

Back to top button
Flash News