CORONA VIRUSlock downMoreScrollUncategorizedಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(BBMP)ರಾಜ್ಯ-ರಾಜಧಾನಿ

ಕರ್ನಾಟಕ ಅನ್ ಲಾಕ್ ಆಗುತ್ತಿದ್ದಂತೆಯೇ.. ಬೆಂಗಳೂರು ಬಿಟ್ಟಿದ್ದ ಜನ ಗಂಟುಮೂಟೆ ಸಮೇತ ಹಾಜರ್.. ಸಿಲಿಕಾನ್ ಸಿಟಿಯಲ್ಲಿ ಹೆಚ್ಚಾದ ಆತಂಕ..!

ಬೆಂಗಳೂರು: ರಾಜ್ಯದಲ್ಲಿ ಸೋಮವಾರದಿಂದ ಲಾಕ್‍ಡೌನ್ ತೆರವು ಹಿನ್ನೆಲೆ ರಾಜ್ಯದ ಗಡಿ ಅತ್ತಿಬೆಲೆ ಮೂಲಕ ಸಾಲು-ಸಾಲು ವಾಹನಗಳ ಮೂಲಕ ಜನರು ಬೆಂಗಳೂರಿನತ್ತ ಬರುತ್ತಿದ್ದಾರೆ

ನಾಳೆಯಿಂದ ಅನ್‍ಲಾಕ್ ಆಗಿರುವುದರಿಂದ ವಲಸೆ ಹೋಗಿದ್ದ ಕಾರ್ಮಿಕರು ಕರ್ನಾಟಕ- ತಮಿಳುನಾಡು ಗಡಿ ಅತ್ತಿಬೆಲೆಯಲ್ಲಿ ವಾಹನಗಳ ಮೂಲಕ ಮತ್ತೆ ಮರಳಿ ಬೆಂಗಳೂರಿನತ್ತ ಮುಖ ಮಾಡಿದ್ದಾರೆ. ಜನರು ಕಾರುಗಳಲ್ಲಿ ಹಾಗೂ ದ್ವಿಚಕ್ರ ವಾಹನಗಳಲ್ಲಿ ತಮ್ಮ ಕುಟುಂಬ ಸಮೇತರಾಗಿ ಲಗೇಜುಗಳೊಂದಿಗೆ ಒಂದುವರೆ ತಿಂಗಳ ಬಳಿಕ ತಮ್ಮ ನಿವಾಸಗಳಿಗೆ ಆಗಮಿಸುತ್ತಿದ್ದಾರೆ.

ರೈಲುಮಾರ್ಗದ ಮೂಲಕ ವಿವಿಧ ಜಿಲ್ಲೆಗಳಿಂದ ಜನರು ಆಗಮಿಸುತ್ತಿದ್ದಾರೆ. ಆದರೆ ಬೆಂಗಳೂರನ್ನು ಪ್ರವೇಶಿಸುವವರಿಗೆ ಕೊವಿಡ್ ಪರೀಕ್ಷೆ ನಡೆಸಲಾಗುತ್ತಿಲ್ಲ. ಇದು ಬೆಂಗಳೂರಿನಲ್ಲಿ ಮತ್ತೆ ಕೊವಿಡ್ ಸೋಂಕು ಹೆಚ್ಚಳಕ್ಕೆ ಕಾರಣವಾಗುವ ಆತಂಕ ಮೂಡಿಸಿದೆ.

ಸಿಎಂ ಯಡಿಯೂರಪ್ಪ ಬೆಂಗಳೂರು ನಗರಕ್ಕೆ ಹಳ್ಳಿಗಳಿಂದ ಮರಳುವವರಿಗೆ ಕೊವಿಡ್ ಪರೀಕ್ಷೆ ನಡೆಸಲಾಗುವುದು ಎಂದಿದ್ದಾರೆ. ಆದರೆ ಯಶವಂತಪುರ ರೈಲು ನಿಲ್ದಾಣದಲ್ಲಿ ಕೊವಿಡ್ ಪರೀಕ್ಷೆ ನಡೆಸಲಾಗುತ್ತಿಲ್ಲ. ವಿವಿಧ ಜಿಲ್ಲೆಗಳಿಂದ ಇಂದು ಮತ್ತು ನಾಳೆ ಬೆಂಗಳೂರಿಗೆ ಮರಳುವವರ ಸಂಖ್ಯೆ ಹೆಚ್ಚಿದ್ದು, ಈಗ ಪರೀಕ್ಷೆ ನಡೆಸದೇ ಇರುವುದು ಅಪಾಯಕ್ಕೆ ಆಹ್ವಾನ ನೀಡಿದಂತೆಯೇ ಎಂಬ ಅಭಿಪ್ರಾಯ ಮೂಡುತ್ತಿದೆ.

ಒಟ್ಟಿನಲ್ಲಿ ಕೊರೊನಾ ಲಾಕ್‍ಡೌನ್ ಹಿನ್ನೆಲೆ ಬೆಂಗಳೂರು ತೊರೆದಿದ್ದ ವಲಸೆ ಕಾರ್ಮಿಕರು ಮತ್ತೆ ಬೆಂಗಳೂರಿನತ್ತ ಮರಳಿ ಮುಖ ಮಾಡಿದ್ದು, ಮತ್ತಷ್ಟು ಕೊರೊನಾ ಸೋಂಕು ಹರಡುವ ಆತಂಕ ಹೆಚ್ಚಾಗಿದೆ

Spread the love

Related Articles

Leave a Reply

Your email address will not be published.

Back to top button
Flash News