ಸಿನೆಮಾ ಹಂಗಾಮ

ಬಹುನಿರೀಕ್ಷಿತ ಕೆಜಿಎಫ್-2 ಚಿತ್ರದ ಡಬ್ಬಿಂಗ್ ನಲ್ಲಿ ಮಾಳವಿಕಾ ಅವಿನಾಶ್..

ಸ್ಯಾಂಡಲ್‍ವುಡ್ ನಟ ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ಸಿನಿಮಾ ಕೆಜಿಎಫ್-2 ಚಿತ್ರೀಕರಣ ಕಂಪ್ಲೀಟ್ ಆಗಿದ್ದು, ಸಿನಿಮಾದ ಪ್ರಮುಖ ಪಾತ್ರದಲ್ಲಿ ಅಭಿನಯಿಸಿರುವ ನಟಿ ಮಾಳವಿಕ ಅವಿನಾಶ್ ಚಿತ್ರಕ್ಕೆ ವಾಯ್ಸ್ ಡಬ್ಬಿಂಗ್ ನೀಡುವ ಕೆಲಸದಲ್ಲಿ ಫುಲ್ ಬ್ಯುಸಿಯಾಗಿದ್ದಾರೆ.

ಕೊರೊನಾ ಎರಡನೇ ಅಲೆಯಿಂದಾಗಿ ಸಿನಿಮಾದ ಪೋಸ್ಟ್ ಪ್ರೊಡಕ್ಷನ್ ಕಾರ್ಯ ಬಾಕಿ ಇತ್ತು. ಸದ್ಯ ಹಲವೆಡೆ ಲಾಕ್‌ಡೌನ್ ತೆರವಾಗುತ್ತಿದ್ದು ಎಲ್ಲಾ ಕೆಲಸ ಕಾರ್ಯಗಳು ಮೊದಲಿನಂತೆ ನಿಧಾನವಾಗಿ ಆರಂಭವಾಗುತ್ತಿವೆ. ಇತ್ತ ಸಿನಿಮಾ ಇಂಡಸ್ಟ್ರಿಯ ಹಲವು ಕೆಲಸ ಕಾರ್ಯಗಳು ಮತ್ತೆ ಶುರುವಾಗಿವೆ.

ಇದೀಗ 50 ದಿನಗಳು ಕಳೆದ ಬಳಿಕ ಕೆಜಿಎಫ್ ಸಿನಿಮಾದಲ್ಲಿ ಸುದ್ದಿ ಮಾಧ್ಯಮವೊಂದರ ಮುಖ್ಯ ಸಂಪಾದಕಿ ದೀಪಾ ಹೆಗ್ಡೆ ಪಾತ್ರದಲ್ಲಿ ಅಭಿನಯಿಸಿದ್ದ ನಟಿ ಮಾಳವಿಕ ಅವಿನಾಶ್ ತಮ್ಮ ಪಾತ್ರಕ್ಕೆ ವಾಯ್ಸ್ ಡಬ್ಬಿಂಗ್ ನೀಡುತ್ತಿರುವ ಕೆಲವು ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದು, ಫೋಟೊಗಳು ವೈರಲ್ ಆಗುತ್ತಿದೆ.

ಡಬ್ಬಿಂಗ್ ಸ್ಟುಡಿಯೋನಲ್ಲಿ ಮಾಳವಿಕರವರು ವಾಯ್ಸ್ ಡಬ್ಬಿಂಗ್ ನೀಡುತ್ತಿರುವ ಕೆಲವು ಫೋಟೋಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. 50 ದಿನಗಳ ನಂತರ ಕೆಲಸಕ್ಕೆ ಮರಳಿದ್ದೇನೆ ಎಂದು ಮಾಳವಿಕಾ ಹೇಳಿಕೊಂಡಿದ್ದಾರೆ.

ನಿರ್ದೇಶಕ ಪ್ರಶಾಂತ್ ನೀಲ್ ಈ ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳುತ್ತಿದ್ದು, ಸಿನಿಮಾದ ಪ್ರಮುಖ ಪಾತ್ರದಲ್ಲಿ ನಟ ಸಂಜಯ್ ದತ್, ಶ್ರೀನಿಧಿ, ರವೀನಾ ಟಂಡನ್, ಪ್ರಕಾಶ್ ರಾಜ್, ಮಾಳವಿಕ ಅವಿನಾಶ್ ಸೇರಿದಂತೆ ಅನೇಕ ಕಲಾವಿದರು ನಟಿಸಿದ್ದಾರೆ.

Spread the love

Related Articles

Leave a Reply

Your email address will not be published.

Back to top button
Flash News