MoreScrollTop NewsUncategorizedರಾಜ್ಯ-ರಾಜಧಾನಿ

ರಾಜ್ಯ ಸರ್ಕಾರಕ್ಕೆ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಫಲಿತಾಂಶ ಪ್ರಕಟಿಸದಂತೆ ಸೂಚಿಸಿದ ಹೈಕೋರ್ಟ್..!

ಬೆಂಗಳೂರು: ಪದವಿ ಪೂರ್ವ ದ್ವಿತೀಯ ವರ್ಷದ ವಿದ್ಯಾರ್ಥಿಗಳ 2020-21ನೇ ಸಾಲಿನ ಫಲಿತಾಂಶ ಪ್ರಕಟಿಸದಂತೆ ಹೈಕೋರ್ಟ್ ತಡೆಯಾಜ್ಞೆ ಹೊರಡಿಸಿದೆ. ಸರ್ಕಾರ ಸಮಗ್ರ ನಿರ್ಧಾರ ಕೈಗೊಳ್ಳುವವರೆಗೆ ಫಲಿತಾಂಶ ಪ್ರಕಟಿಸಬಾರದು ಎಂದು ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಹೈಕೋರ್ಟ್ ವಿಭಾಗೀಯ ಪೀಠದಿಂದ ಈ ಬಗ್ಗೆ ಮಧ್ಯಂತರ ಆದೇಶ ಹೊರಡಿಸಲಾಗಿದೆ. 12 ತಜ್ಞರ ಸಮಿತಿ ರಚಿಸಿರುವುದಾಗಿ ಸರ್ಕಾರ ಹೇಳಿಕೆ ನೀಡಿತ್ತು. ಹೀಗಾಗಿ, ಈಗಲೇ ಫಲಿತಾಂಶ ಪ್ರಕಟ ಮಾಡಬಾರದು ಎಂದು ಕೋರ್ಟ್ ಹೇಳಿದೆ.

ರೆಗ್ಯೂಲರ್ ಸ್ಟೂಡೆಂಟ್ಸ್ ಗಳನ್ನು ಸಾರ್ವತ್ರಿಕವಾಗಿ ಪಾಸ್ ಮಾಡುತ್ತೇವೆ ಎಂದು ಸರ್ಕಾರ ಆದೇಶ ನೀಡಿದ ಬೆನ್ನಲ್ಲೆ ರಿಪಿಟರ್ಸ್ ವಿದ್ಯಾರ್ಥಿಗಳು ಕೂಡ ನಮ್ಮನ್ನೂ ಪಾಸ್ ಮಾಡಿ ಎಂದು ಹೈ ಕೋರ್ಟ್ ಮೆಟ್ಟಿಲೇರಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ ಮಾಡದಂತೆ ತಡೆ ಹಿಡಿದಿದೆ.

5.92 ಲಕ್ಷ ಪಿಯು ವಿದ್ಯಾರ್ಥಿಗಳ ಫಲಿತಾಂಶ ಬರಬೇಕಾಗಿದೆ. 76 ಸಾವಿರ ರಿಪೀಟರ್ಸ್ ಫಲಿತಾಂಶಕ್ಕೆ ಕಾಯುತ್ತಿರುವವರಾಗಿದ್ದಾರೆ. ಈ ಬಗ್ಗೆ ಸರ್ಕಾರ ಸರಿಯಾದ ತೀರ್ಮಾನ ಕೈಗೊಳ್ಳುವವರೆಗೆ ಫಲಿತಾಂಶ ಪ್ರಕಟ ಮಾಡಬಾರದು ಎಂದು ಕೋರ್ಟ್ ಹೇಳಿದೆ. ತಜ್ಞರ ಸಮಿತಿ ಸಲಹೆ ಆಧರಿಸಿ ಸರ್ಕಾರ ತೀರ್ಮಾನಿಸಲಿದೆ. 15 ದಿನಗಳೊಳಗೆ ತಜ್ಞರ ಸಮಿತಿ ವರದಿ ನೀಡಲಿದೆ ಎಂದು  ಕೋರ್ಟ್ ಹೇಳಿದೆ.

ಜಂಟಿ ನಿರ್ದೇಶಕ ಪರೀಕ್ಷಕರಿಂದ ಈ ಬಗ್ಗೆ ಮಾಹಿತಿ ಲಭ್ಯವಾಗಿದೆ. ರಿಪೀಟರ್ಸ್, ಸಾಮಾನ್ಯ ವಿದ್ಯಾರ್ಥಿಗಳಿಗೆ ತಾರತಮ್ಯ ಬೇಡ. ಖಾಸಗಿ ವಿದ್ಯಾರ್ಥಿಗಳಿಗೆ ಮಾತ್ರ ಪರೀಕ್ಷೆ ಅನಿವಾರ್ಯ ಎಂದು ನ್ಯಾ.ಬಿ.ವಿ.ನಾಗರತ್ನ ನೇತೃತ್ವದ ಪೀಠ ಅಭಿಪ್ರಾಯ ವ್ಯಕ್ತಪಡಿಸಿದೆ. ಬಳಿಕ, ವಿಚಾರಣೆಯನ್ನು ಹೈಕೋರ್ಟ್ ಜುಲೈ 5ಕ್ಕೆ ಮುಂದೂಡಿದೆ.

Spread the love

Related Articles

Leave a Reply

Your email address will not be published.

Back to top button
Flash News