MoreScrollTop NewsUncategorizedಜಿಲ್ಲೆರಾಜ್ಯ-ರಾಜಧಾನಿ

ರಾಜ್ಯದಲ್ಲಿ ಹಲವೆಡೆ ಧಾರಾಕಾರ ಮಳೆ; ಮಳೆಗಾಲದ ಆರಂಭದಲ್ಲಿಯೇ ಜನಜೀವನ ಅಸ್ತವ್ಯಸ್ತ..

ಪ್ರತಿ ವರ್ಷದ ಮಳೆಗಾಲ ನೊವು- ನಲಿವಿನ ಸಮಾಗಮವಿದ್ದಂತೆ. ಮಳೆಗಾಲ ಆರಂಭವಾದ ಕೂಡಲೇ ಭತ್ತಿ ಹೋದ ನದಿಗಳು ಮರು ಜೀವ ಪಡೆದುಕೊಳ್ಳುತ್ತದೆ. ಅಂತೆಯೇ ಇಳೆಗೆ ಮಳೆ ಎಂಬ ತಂಪುಗವಿಯಲಾರಂಬಿಸುತ್ತದೆ. ಮಳೆ ಬಂದರೆ ಸಾಕು ಎಂದು ಬೇಡಿಕೊಳ್ಳುವ ರೈತರು ಒಂದು ಕಡೆಯಾದರೆ, ಮಳೆಗೆ ಹೆದರಿ ಮನೆಯನ್ನು ಭದ್ರಪಡಿಸುವ ಮಂದಿ ಇನ್ನೊಂದು ಕಡೆ. ಮಳೆಯ ವಿಶೇಷತೆಯೇ ಬಹುಷಃ ಇದೆ ಅನಿಸುತ್ತದೆ. ಒಂದು ಕಡೆ ಮಳೆ ಬಂದರೆ ಖುಷಿ, ಇದೇ ಮಳೆ ಅತಿಯಾದರೆ ದುಖಃ. ಮಳೆಗಾಲ ಈಗ ಆರಂಭವಾಗಿದೆ. ಮಳೆಗಾಗಿ ಹಂಬಲಿಸುತ್ತಿದ್ದ ಜನಕ್ಕೆ ನೆಮ್ಮದಿ ದೊರೆತಂತಾಗಿದೆ. ಅಂತೆಯೇ ಗಾಳಿ ಮಳೆಗೆ ಅನೇಕರು ಮನೆ ಮಠ ಕಳೆದುಕೊಳ್ಳುವ ಭಯದ ಅಂಚಿನಲ್ಲಿದ್ದಾರೆ.

ಬಾಗಲಕೋಟೆ ಹಾಗೂ ಬೆಳಗಾವಿ ಭಾಗದಲ್ಲಿ ಸುರಿದ ಮಳೆ ಹಿನ್ನೆಲೆಯಲ್ಲಿ ಘಟಪ್ರಭಾ ನದಿನೀರಿನ ಹರಿವು ಹೆಚ್ಚಳವಾಗಿದೆ. ಮಿರ್ಜಿ ಗ್ರಾಮದ ಬಳಿಯ ಘಟಪ್ರಭಾ ರಸ್ತೆ ಸೇತುವೆ ಜಲಾವೃತವಾಗಿದೆ. ನದಿ ತೀರದ ಗ್ರಾಮಸ್ಥರಿಗೆ ಪ್ರವಾಹ ಭೀತಿ ಶುರುವಾಗಿದೆ. ನದಿ ತೀರದಲ್ಲಿ ವಾಸವಾಗಿರುವ ರೈತನಿಗೆ ಪೊಲೀಸರ ಮುನ್ನೆಚ್ಚರಿಕೆಯನ್ನು ನೀಡಿದ್ದಾರೆ. ಮಹಾರಾಷ್ಟ್ರ ಹಾಗೂ ಕೃಷ್ಣಾ ನದಿ ಅಚ್ಚು ಕಟ್ಟು ಪ್ರದೇಶದಲ್ಲಿ ಮಳೆಯ ಅಬ್ಬರ ಮುಂದುವರಿದಿದೆ. ಕೃಷ್ಣಾ ನದಿ ನೀರಿನ ಪ್ರಮಾಣದಲ್ಲಿ ಭಾರಿ ಏರಿಕೆಯಾಗಿದೆ. ಕೃಷ್ಣಾ, ದೂದಗಂಗಾ, ವೇದಗಂಗಾ, ಹೀರಣ್ಯಕೇಶಿ ನದಿಗಳ ನೀರಿನ ಮಟ್ಟದಲ್ಲಿ ಏರಿಕೆಯಾಗಿದೆ. 14 ಗ್ರಾಮಗಳಿಗೆ ಸಂಪರ್ಕ ಕಲ್ಪಿಸುತ್ತಿದ್ದ ಸೇತುವೆಗಳು ಜಲಾವೃತವಾಗಿದೆ.

ಕೊಡಗು ಜಿಲ್ಲೆಯಾದ್ಯಂತ ಕುಂಬದ್ರೋಣ ಮಳೆಯ ಅಬ್ಬರ
ವಿರಾಜಪೇಟೆ ತಾಲೂಕಿನ ಗೋಣಿಕೊಪ್ಪದಲ್ಲಿ ಭಾರಿ ಮಳೆ ಉಂಟಾಗಿದ್ದು, ಗೋಣಿಕೊಪ್ಪ ಬಳಿ 35ಕ್ಕೂ ಹೆಚ್ಚು ಮರಗಳು ಧರೆಗುರುಳಿವೆ. ಇನ್ನು ಮರ ಬಿದ್ದು 50ಕ್ಕೂ ಹೆಚ್ಚು ವಿದ್ಯುತ್ ಕಂಬಗಳಿಗೆ ಹಾನಿಯಾಗಿದೆ. ಇದರ ಪರಿಣಾಮ ಕರೆಂಟ್ ಇಲ್ಲದೆ ಕತ್ತಲಲ್ಲಿ ಮುಳುಗಿದ ಗ್ರಾಮೀಣ ಪ್ರದೇಶ ಜನರು

ದಿನಕಳೆಯುವಂತಾಗಿದೆ. ವಿದ್ಯುತ್ ಕಂಬ ಮರು ಸ್ಥಾಪನೆಗೆ ಸೆಸ್ಕ್ ಸಿಬ್ಬಂದಿ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಸೋಮವಾರಪೇಟೆ ತಾಲ್ಲೂಕಿನ ಶಾಂತಳ್ಳಿ ವ್ಯಾಪ್ತಿಯಲ್ಲೂ ಭಾರೀ ಮಳೆ ಕಂಡುಬಂದಿದ್ದು, ಮರವುರುಳಿ ಹಲವು ರಸ್ತೆಗಳ ಸಂಚಾರ ಸ್ಥಗಿತವಾಗಿದ್ದು, ಅರಣ್ಯ ಇಲಾಖೆ ಸಿಬ್ಬಂದಿಯಿಂದ‌ ಮರ ತೆರವು ಕಾರ್ಯಾಚರಣೆ ನಡೆಯುತ್ತಿದೆ.

ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆಯ ಆರ್ಭಟ
ಮಳೆಯ ಹೆಚ್ಚಳದಿಂದಾಗಿ ಜಿಲ್ಲೆಯ ದಾಂಡೇಲಿ, ಹಳಿಯಾಳದಲ್ಲಿ ಸೇತುವೆ ಮೇಲೆ ನೀರು ತುಂಬಿ ಹರಿಯುತ್ತಿದೆ. ಹೀಗಾಗಿ ಹಳಿಯಾಳದಿಂದ ನಾರನಹಳ್ಳಿ ಗ್ರಾಮಕ್ಕೆ ತೆರಳುವ ಸಂಪರ್ಕ ಕಡಿತವಾಗಿದ್ದು, ಕಿರು ಸೇತುವೆ ಮೇಲೆ ನೀರು ಉಕ್ಕಿ ಹರಿಯುತ್ತಿದೆ. ಗ್ರಾಮಕ್ಕೆ ತೆರಳಲು ತುಂಬಿ ಹರಿದ ನೀರಿನ ಮಧ್ಯೆ ಜನರು ಹಗ್ಗ ಹಿಡಿದು ತೆರಳುತ್ತಿದ್ದಾರೆ.

ಚಿಕ್ಕಮಗಳೂರು ಜಿಲ್ಲೆಯಲ್ಲಿ ಬಿರುಗಾಳಿ ಸಹಿತ ಮಳೆ
ಚಿಕ್ಕಮಗಳೂರಿನ ಮೂಡಿಗೆರೆ, ಕಳಸ, ಕೊಪ್ಪ, ಶೃಂಗೇರಿ, ಎನ್​.ಆರ್.ಪುರ ತಾಲೂಕುಗಳಲ್ಲಿ ಮಳೆಯ ಆರ್ಭಟ ಜೋರಾಗಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಕೊಪ್ಪ ತಾಲೂಕಿನ ಗುಡ್ಡೆತೋಟ ಸಮೀಪ ಮಣ್ಣು ಕುಸಿತ ಉಂಟಾಗಿದ್ದು, ತುಂಗಾ, ಭದ್ರಾ, ಹೇಮಾವತಿ ನದಿ ತುಂಬಿ ಹರಿಯುತ್ತಿದೆ. ಅಲ್ಲದೆ ಕಳಸ-ಹೊರನಾಡಿಗೆ ಸಂಪರ್ಕ ಕಲ್ಪಿಸುವ ಹೆಬ್ಬಾಳೆ ಸೇತುವೆ ಮುಳುಗುವ ಹಂತ ತಲುಪಿದೆ.

ಹಾಸನ ಜಿಲ್ಲೆಯ ಹಲವೆಡೆ ಉತ್ತಮ ಮಳೆಯಾಗುತ್ತಿದೆ. ಸಕಲೇಶಪುರ, ಆಲೂರು, ಬೇಲೂರು ಭಾಗದಲ್ಲಿ ಸುರಿಯುತ್ತಿರುವ ಮಳೆ ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ನಿರಂತರ ಮಳೆಗೆ ಮನೆ ಕುಸಿತವಾಗುತ್ತಿದೆ. ಮಲೆನಾಡಿನ ಭಾಗದಲ್ಲಿ ಕಳೆದೊಂದು ವಾರದಿಂದ ಅತಿಯಾಗಿ ಮಳೆಯಾಗುತ್ತಿದ್ದು, ಶಿವಮೊಗ್ಗ ಜಿಲ್ಲೆಯ ಗಾಜನೂರಿನ ತುಂಗಾ ಜಲಾಶಯಕ್ಕೆ ನೀರಿನ ಒಳ ಹರಿವು ಹೆಚ್ಚಾಗಿದೆ. ಹೀಗಾಗಿ ಜಲಾಶಯದಿಂದ 21 ಗೇಟ್ ಗಳ ಮೂಲಕ ನೀರನ್ನು ಹೊರ ಬಿಡುತ್ತಿದ್ದಾರೆ. ಜಲಾಶಯಕ್ಕೆ 3,1277 ಕ್ಯೂಸೆಕ್ ಒಳ ಹರಿವು ಇದ್ದು, ಅಷ್ಟೇ ಪ್ರಮಾಣದ ಅಂದರೆ 3,1277 ಕ್ಯೂಸೆಕ್ ನೀರನ್ನು ಜಲಾಶಯದಿಂದ ಹೊರ ಬಿಡಲಾಗುತ್ತಿದೆ. ಮಲೆನಾಡಿನ ಭಾಗದಲ್ಲಿ ಮತ್ತೆ ಹೆಚ್ಚಿನ ಮಳೆಯಾದರೆ ಜಲಾಶಯದ ಒಳ ಹರಿವಿನ ಪ್ರಮಾಣ ಸಹ ಹೆಚ್ಚಾಗಲಿದೆ.

Spread the love

Related Articles

Leave a Reply

Your email address will not be published.

Back to top button
Flash News