CORONA VIRUSlock downMoreScrollTop NewsUncategorizedಜಿಲ್ಲೆಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(BBMP)ರಾಜ್ಯ-ರಾಜಧಾನಿ

ರಾಜ್ಯದಲ್ಲಿ ಸೋಮವಾರದಿಂದ ಎರಡನೇ ಹಂತದ ಅನ್‌ಲಾಕ್ ಜಾರಿ.. ಸಿಎಂ ಯಡಿಯೂರಪ್ಪ ಘೋಷಣೆ: ಯಾವುದಕ್ಕೆಲ್ಲ ಅವಕಾಶ? ಯಾವುದಕ್ಕೆಲ್ಲ ನಿರ್ಭಂದ?

ರಾಜ್ಯದಲ್ಲಿ ಕೊರೊನಾ ಎರಡನೇ ಅಲೆ ಆರ್ಭಟಿಸಿದ್ದರ ಹಿನ್ನೆಲೆ ಸರ್ಕರ ಲಾಕ್‌ಡೌನ್ ಘೋಷಿಸಿದ್ದರ ಪರಿಣಾಮ ರಾಜ್ಯದಲ್ಲಿ ಹಂತಹಂತವಾಗಿ ಕೋವಿಡ್ ಪ್ರಕರಣಗಳು ಇಳಿಕೆಯಾಗಿವೆ. ಹಾಗಾಗಿ ಸರ್ಕಾರ ಕಳೆದ ವಾರವಷ್ಟೇ ಮೊದಲನೇ ಹಂತದ ಅನ್‌ಲಾಕ್ ಅನ್ನು ಜಾರಿಗೆ ತಂದಿತ್ತು. ಇದೀಗ ಎರಡನೇ ಹಂತದ ಅನ್‌ಲಾಕ್ ಅನ್ನು ಸಿಎಂ ಯಡಿಯೂರಪ್ಪ ಘೋಷಿಸಿದ್ದಾರೆ. ಇನ್ನು ಎರಡನೇ ಹಂತದ ಅನ್ ಲಾಕ್ ನಲ್ಲಿ ಯಾವುದಕ್ಕೆಲ್ಲ ಅವಕಾಶ, ಯಾವುದಕ್ಕೆಲ್ಲ ನಿರ್ಭಂದ ಮುಂದುವರೆಯಲಿದೆ ಎಂಬ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ.

ಶೇ.5 ಕ್ಕಿಂತ ಕಡಿಮೆ ಪಾಸಿಟಿವಿಟಿ ದರ ಇರುವ ಜಿಲ್ಲೆಗಳಾದ ರಾಮನಗರ, ಉತ್ತರ ಕನ್ನಡ, ಬೆಳಗಾವಿ, ರಾಯಚೂರು, ಯಾದಗಿರಿ, ಮಂಡ್ಯ, ಕೊಪ್ಪಳ, ಚಿಕ್ಕಬಳ್ಳಾಪುರ, ತುಮಕೂರು, ಕೋಲಾರ, ಬೆಂಗಳೂರು ನಗರ, ಗದಗ,  ಬಾಗಲಕೋಟೆ, ಕಲಬುರಗಿ, ಹಾವೇರಿ,   ಹಾಗೂ ಬೀದರ್ ಜಿಲ್ಲೆಗಳಿಗೆ ಸಡಿಲಿಕೆ ನೀಡಲಾಗಿದೆ. ಜೊತೆಗೆ ಈ ಜಿಲ್ಲೆಗಳಲ್ಲಿ ಸೋಮವಾರದಿಂದ ಸರ್ಕಾರಿ ಬಸ್​ಗಳ ಶೇ 50ರಷ್ಟು ಅವಕಾಶದೊಂದಿಗೆ ಓಡಾಟಕ್ಕೆ ಅನುಮತಿ ನೀಡಲಾಗಿದೆ.

ಇನ್ನು ಶೇ 5 ಕ್ಕಿಂತ ಹೆಚ್ಚಿನ ಪಾಜಿಟಿವಿಟಿ ದರ ಇರುವ 13 ಜಿಲ್ಲೆಗಳಾದ ಬೆಂಗಳೂರು ಗ್ರಾಮಾಂತರ, ಹಾಸನ, ದಕ್ಷಿಣ ಕನ್ನಡ, ಶಿವಮೊಗ್ಗ, ವಿಜಯಪುರ,  ಚಾಮರಾಜನಗರ, ಉಡುಪಿ, ದಾವಣಗೆರೆ, ಕೊಡಗು, ಧಾರವಾಡ, ಚಿತ್ರದುರ್ಗ, ಬಳ್ಳಾರಿ, ಹಾಗೂ ಚಿಕ್ಕಮಗಳೂರು, ಜಿಲ್ಲೆಗಳಿಗೆ ದಿನಾಂಕ: 11/06/2021 ಆದೇಶದಲ್ಲಿ ನೀಡಿರುವ ಸಡಿಲಿಕೆಗಳು ಮಾತ್ರ ಅನ್ವಯಿಸುತ್ತವೆ.

• ಜಿಮ್‌ ಗಳಲ್ಲಿ ಶೇ 50 ಸಾಮರ್ಥ್ಯದೊಂದಿಗೆ  ಅವಕಾಶ ನೀಡಿದೆ.

• ಎಲ್ಲಾ ಅಂಗಡಿಗಳನ್ನು ಸಂಜೆ 5.00 ಗಂಟೆವರೆಗೆ ತೆರೆಯಲು ಅನುವು ಮಾಡಿಕೊಡಲಾಗಿದೆ

• ಮೆಟ್ರೋಗಳಲ್ಲಿ ಶೇ.50ರಷ್ಟು ಪ್ರಯಾಣಿಕರಿಗೆ ಅವಕಾಶ

• ಲಾಡ್ಜ್‌ ಗಳಲ್ಲಿ ಮತ್ತು ರೆಸಾರ್ಟ್‌ ಗಳಲ್ಲಿ ಶೇ 50 ಸಾಮರ್ಥ್ಯದೊಂದಿಗೆ ಅವಕಾಶ ನೀಡಲಾಗಿದೆ.

• ಎಸಿ ಬಳಸದೇ ಹೋಟೆಲ್‌ಗಳನ್ನೂ ತೆರೆಯಲು ಅವಕಾಶ

• ಹೊರಾಂಗಣ ಚಿತ್ರೀಕರಣಕ್ಕೆ ಅವಕಾಶ, ವೀಕ್ಷಕರಿಲ್ಲದೇ ಹೊರಾಂಗಣ ಕ್ರೀಡೆಗೆ ಅನುಮತಿ ನೀಡಲಾಗಿದೆ.

• ಬಸ್‌ ಗಳಲ್ಲಿ ಶೇ. 50 ಸಾಮರ್ಥ್ಯದೊಂದಿಗೆ ಕಾರ್ಯ ನಿರ್ವಹಣೆಗೆ ಅವಕಾಶ

• ಸರ್ಕಾರಿ/ಖಾಸಗಿ ಕಛೇರಿಗಳಿಗೆ ಶೇ 50 ರ ಸಾಮರ್ಥ್ಯದೊಂದಿಗೆ ಕಾರ್ಯ ನಿರ್ವಹಿಸಲು ಅನುಮತಿ.

ಪ್ರತಿದಿನ ಸಂಜೆ 7ಗಂಟೆಯಿಂದ ಬೆಳಗ್ಗೆ 5ರವರೆಗೆ ಕರ್ಫ್ಯೂ ಎಲ್ಲ ಜಿಲ್ಲೆಗಳಲ್ಲೂ ಮುಂದುವರೆಯಲಿದೆ. ಶುಕ್ರವಾರ ಸಂಜೆ 7ರಿಂದ ಸೋಮವಾರ ಬೆಳಗ್ಗೆ 5ರವರೆಗೆ ಕರ್ಫ್ಯೂ ಸಹ ರಾಜ್ಯದಲ್ಲಿ ಎಂದಿನಂತೆ ಮುಂದುವರೆಯಲಿದೆ ಎಂದು  ಮುಖ್ಯಮಂತ್ರಿ ಯಡಿಯೂರಪ್ಪ ಘೋಷಿಸಿದ್ದಾರೆ.

Spread the love

Related Articles

Leave a Reply

Your email address will not be published.

Back to top button
Flash News