ಕ್ರೀಡಾಪಟುಗಳಿಗೆ ಹಾಗೂ ವಿದೇಶಕ್ಕೆ ತೆರಳುವವರಿಗೆ ಜೂನ್ 22 ರಿಂದ ವ್ಯಾಕ್ಸಿನೇಷನ್; ಡಿಸಿಎಂ ಅಶ್ವತ್ ನಾರಾಯಣ ಹೇಳಿಕೆ..

0

ಬೆಂಗಳೂರು: ವ್ಯಾಸಂಗ ಅಥವಾ ಉದ್ಯೋಗದ ಸಲುವಾಗಿ ವಿದೇಶಕ್ಕೆ ತೆರಳುವವರಿಗೆ ನಗರ ವಿಶ್ವವಿದ್ಯಾಲಯದ ಸೆಂಟ್ರಲ್ ಕಾಲೇಜು ಆವರಣದಲ್ಲಿ ಜೂ. 22ರಿಂದ ಕೋವಿಡ್ ಲಸಿಕೆ ಹಾಕಲಾಗುವುದು ಎಂದು ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ತಿಳಿಸಿದ್ದಾರೆ.

ಟೋಕಿಯೋದಲ್ಲಿ ನಡೆಯುವ ಒಲಿಂಪಿಕ್ ಕ್ರೀಡಾಕೂಟಕ್ಕೆ ತೆರಳುವ ಕ್ರೀಡಾಪಟುಗಳು ಸೇರಿ ವಿದೇಶಕ್ಕೆ ವ್ಯಾಸಂಗ ಅಥವಾ ಉದ್ಯೋಗಕ್ಕೆ ತೆರಳುವ ಎಲ್ಲರೂ ಲಸಿಕೆ ಪಡೆಯಬಹುದು. ಮಂಗಳವಾರ ಬೆಳಗ್ಗೆ 10.30ಗಂಟೆಯಿಂದ ಲಸಿಕೆ ನೀಡಲಾಗುವುದು, ಈ ಮೊದಲೇ ಸೆಂಟ್ರಲ್ ಕಾಲೇಜ್‍ನಲ್ಲಿ ವಿದೇಶಕ್ಕೆ ತೆರಳುವ 1,500ಕ್ಕೂ ಹೆಚ್ಚು ವಿದ್ಯಾರ್ಥಿ ಹಾಗೂ  ಉದ್ಯೋಗಿಗಳಿಗೆ ಮೊದಲ ಡೋಸ್ ಕೊಡಲಾಗಿದೆ ಎಂದು ಡಿಸಿಎಂ ಅಶ್ವತ್ಥನಾರಾಯಣ ಹೇಳಿದರು.

ಇದಕ್ಕಾಗಿ ಪಾಲಿಕೆಯ 8 ವಲಯಗಳ ಆಯುಕ್ತರನ್ನು ಸಮರ್ಥ ಅಧಿಕಾರಿಗಳನ್ನಾಗಿ ನೇಮಿಸಲಾಗಿದ್ದು, ಬೆಂಗಳೂರು ಬಿಬಿಎಂಪಿ ವ್ಯಾಪ್ತಿಯಲ್ಲಿ ಪೂರ್ವ ವಲಯದ ಆರೋಗ್ಯಾಧಿಕಾರಿಯನ್ನು ‘ಸಮರ್ಥ ಅಧಿಕಾರಿ’ ಎಂದು ಗುರುತಿಸಲಾಗಿದೆ. ಲಸಿಕೆ ಕೇಂದ್ರಕ್ಕೆ ಬರುವ ಅರ್ಹ ಲಸಿಕಾಂಕ್ಷಿಗಳ ಸ್ವಯಂ ಘೋಷಣಾ ಪತ್ರ ಸೇರಿ ಇತರೆ ದಾಖಲೆಗಳನ್ನು ಪರಿಶೀಲಿಸಬೇಕು.

ಲಸಿಕೆ ಪಡೆದ ದೃಢೀಕರಣ ಪತ್ರವನ್ನು ತಕ್ಷಣ ಆನ್‍ಲೈನ್‍ನಲ್ಲಿ ಅಪ್‍ಲೋಡ್ ಮಾಡಿಸಬೇಕು. ಈಗಾಗಲೇ ಮೊದಲ ಡೋಸ್ ಪಡೆದಿರುವವರು ತಮ್ಮ ಪಾಸ್‍ಪೋರ್ಟ್ ಸಂಖ್ಯೆಯನ್ನು ದಾಖಲು ಮಾಡಿರದಿದ್ದರೆ ಎರಡನೇ ಡೋಸ್ ಪಡೆಯಲು ಬರುವಾಗ ಕಡ್ಡಾಯವಾಗಿ ದಾಖಲಿಸಿಕೊಳ್ಳಬೇಕು ಎಂದು ಅಶ್ವತ್ಥನಾರಾಯಣ ತಿಳಿಸಿದ್ದಾರೆ.

Spread the love
Leave A Reply

Your email address will not be published.

Flash News