ಸಂಕಷ್ಟಕ್ಕೆ ಸಿಲುಕಿರುವ ಕನ್ನಡ ಚಿತ್ರರಂಗದ ಹಿರಿಯ ನಿರ್ದೇಶಕ ಉಮೇಶ್; ಸಹಾಯಕ್ಕೆ ಮನವಿ..!

0

ರಾಜ್ಯದಲ್ಲಿ ಕೊರೊನಾ ಮಹಾಮಾರಿಯಿಂದ ಅನೇಕ ಮಂದಿ ಸಂಕಷ್ಟಕ್ಕೆ ಸಿಲುಕಿದ್ದಾರೆ. ಕೆಲಸ ಕಳೆದುಕೊಂಡು ಬೀದಿಗೆ ಬಿದ್ದಿದ್ದಾರೆ. ಆರ್ಥಿಕ ಸಂಕಷ್ಟಕ್ಕೆ ಸಿಲುಕಿ ಜೀವನ ನಡೆಸಲು ಒದ್ದಾಡುತ್ತಿದ್ದಾರೆ. ಅದರಲ್ಲೂ  ಚಿತ್ರರಂಗದಲ್ಲಿ ಹಲವಾರು ವರ್ಷ ದುಡಿದ ಅನೇಕ ಹಿರಿಯ ನಟರು, ನಿರ್ದೇಶಕರು ಈಗ ಮೂಲೆಗುಂಪಾಗಿದ್ದಾರೆ. ಆರ್ಥಿಕ ಮುಗ್ಗಟ್ಟಿನ ಸ್ಥಿತಿಯಲ್ಲಿ ತೆವಳುತ್ತಾ ಜೀವನ ನಡೆಸುತ್ತಿದ್ದಾರೆ. ಲಾಕ್‌ಡೌನ್ ಅಂತೂ ಅವರನ್ನು ಮತ್ತಷ್ಟು ಕಷ್ಟಕ್ಕೆ ದೂಡಿದೆ.

48 ವರ್ಷಗಳ ಕಾಲ ಕನ್ನಡ ಚಿತ್ರರಂಗದಲ್ಲಿ ಸೇವೆ ಸಲ್ಲಿಸಿರುವ ನಿರ್ದೇಶಕ ಉಮೇಶ್ ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಕಳೆದ ವರ್ಷ ಒಂದು ಕಿಡ್ನಿ ವಿಫಲಗೊಂಡು, ಚಿಕಿತ್ಸೆ ಪಡೆಯುತ್ತಿದ್ದಾರೆ. ಆರ್ಥಿಕ ಸಂಕಷ್ಟ ಎದುರಿಸುತ್ತಿರುವ ನಿರ್ದೇಶಕ ವಿಡಿಯೋ ಮೂಲಕ ಸಹಾಯಕ್ಕೆ ಮನವಿ ಮಾಡಿಕೊಂಡಿದ್ದಾರೆ. ಮನೆ ಬಾಡಿಗೆ ಕಟ್ಟಿಲ್ಲ, ಮಗನ ಫೀಸ್‌ ಕಟ್ಟಿಲ್ಲ ಹಾಗೂ ಆಸ್ಪತ್ರೆ ಖರ್ಚುಗಳಿಗೂ ದುಡ್ಡಿಲ್ಲ ಎಂದು ತಮ್ಮ ಗೋಳನ್ನು ಹೇಳಿಕೊಂಡಿದ್ದಾರೆ.

‘ಕಳೆದ ವರ್ಷ ಕೊರೊನಾ ಸಮಯದಲ್ಲಿ ನನಗೆ ಒಂದು ಕಿಡ್ನಿ ಸಮಸ್ಯೆ ಆಯ್ತು. ಎಡ ಭಾಗದ ಕಿಡ್ನಿ ಸಂಪೂರ್ಣ ವಿಫಲವಾಗಿದೆ. ಡಯಾಲಿಸಿಸ್​ ಇಲ್ಲದೇ ಕೇವಲ ಮೆಡಿಸಿನ್​ನಲ್ಲೇ ವೈದ್ಯರು ನನ್ನನ್ನು ಕಾಪಾಡಿದ್ದಾರೆ. ಡಯಾಲಿಸಿಸ್​ ಶುರುವಾದರೆ ನನ್ನ ಪರಿಸ್ಥಿತಿ ಕಷ್ಟ ಆಗುತ್ತದೆ. ಈಗ ಕೆಲಸ ಕೂಡ ಇಲ್ಲ. ನನ್ನ ಮಗ ಎಸ್​ಎಸ್​ಎಲ್​ಸಿ ಓದುತ್ತಿದ್ದಾನೆ. ಅವನ ಶಾಲೆಯ ಫೀಸ್​ ಕಟ್ಟಲು ಸಾಧ್ಯವಾಗಿಲ್ಲ, ಮನೆ ಬಾಡಿಗೆ ಕಟ್ಟಿಲ್ಲ, ಯಾರಾದರೂ ನನಗೆ ಸಹಾಯ ಮಾಡುವುದಾದರೆ ನಾನು ಅದನ್ನು ಸ್ವೀಕರಿಸುತ್ತೇನೆ’ ಎಂದು ಉಮೇಶ್​ ವಿಡಿಯೋ ಮೂಲಕ ಸಹಾಯಕ್ಕೆ ಅಂಗಲಾಚಿದ್ದಾರೆ.

Spread the love
Leave A Reply

Your email address will not be published.

Flash News