CORONA LOCKDOWN HEROESCORONA VIRUSlock downMoreScrollTop NewsUncategorizedಸಿನೆಮಾ ಹಂಗಾಮ

ಕೊರೊನಾ ಕಷ್ಟ ಕಾಲದಲ್ಲಿ ನೆರವಿನ ಹಸ್ತ ಚಾಚಿದ “ಹ್ಯಾಟ್ರಿಕ್ ಹೀರೋ”.. ಪತ್ನಿ ಗೀತಾ ಶಿವರಾಜ್ ಕುಮಾರ್ ಹುಟ್ಟುಹಬ್ಬದ ಪ್ರಯುಕ್ತ “ಸಿನಿ ಕಾರ್ಮಿಕರಿಗೆ” ಶಿವಣ್ಣನಿಂದ ಬಂಪರ್ ಗಿಫ್ಟ್..

ಕೊರೊನಾ ಎರಡನೇ ಅಲೆಯಿಂದ ಜನರು ಅಕ್ಷರಸಃ ತತ್ತರಿಸಿ ಹೋಗಿದ್ದಾರೆ. ಕೆಲಸ ಕಾರ್ಯ ಇಲ್ಲದೇ, ಕೈಯಲ್ಲಿ ನಯಾ ಪೈಸೆ ಇಲ್ಲದೇ, ತುತ್ತು ಅನ್ನಕ್ಕೂ ಪರದಾಡುವಂತಹ ಸ್ಥಿತಿ ಎದುರಾಗಿದೆ. ಇಂತಹ ಕಷ್ಟಕಾಲದಲ್ಲಿ ಸ್ಯಾಂಡಲ್‌ವುಡ್ ನಟ ಹ್ಯಾಟ್ರಿಕ್ ಹೀರೋ ಶಿವರಾಜ್‌ಕುಮಾರ್ ಕನ್ನಡ ಚಿತ್ರರಂಗದ ಕಾರ್ಮಿಕರಿಗೆ ನೆರವಿನ ಹಸ್ತ ಚಾಚಿದ್ದಾರೆ.

ಕೊರೊನಾ ಲಾಕ್‌ಡೌನ್‌ನಿಂದ ಸಿನಿ ಕಾರ್ಮಿಕರು ಸಂಕಷ್ಟಕ್ಕೆ ಸಿಲುಕಿದ್ದು, ಸಿನಿಮಾ ಶೂಟಿಂಗ್ ಇಲ್ಲದೇ ಕಷ್ಟಪಡುತ್ತಿರುವ ಕಾರ್ಮಿಕರಿಗೆ 10 ಲಕ್ಷ ರೂಪಾಯಿ ದೇಣಿಗೆ ನೀಡುತ್ತಿದ್ದಾರೆ. ಕೆಲವು ದಿನಗಳ ಹಿಂದಷ್ಟೇ ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ಅವರೂ ಕೂಡ ಸಿನಿ ಕಾರ್ಮಿಕರಿಗೆ 10 ಲಕ್ಷ ಹಣವನ್ನು ದೇಣಿಗೆ ನೀಡಿದ್ದರು.

ಇದೀಗ ಶಿವಣ್ಣ ಸಹ ಅವರ ಪತ್ನಿ ಗೀತಾ ಶಿವರಾಜ್‌ಕುಮಾರ್ ಅವರ ಹುಟ್ಟುಹಬ್ಬದ ಪ್ರಯುಕ್ತ ಕರ್ನಾಟಕ ಚಲನಚಿತ್ರ ಕಾರ್ಮಿಕರ ಒಕ್ಕೂಟಕ್ಕೆ 10 ಲಕ್ಷ ಹಣ ಸಹಾಯ ಮಾಡಿದ್ದಾರೆ. ಚಲನಚಿತ್ರ ವಾಣಿಜ್ಯ ಮಂಡಳಿಯ ಮಾಜಿ ಅಧ್ಯಕ್ಷ ಸಾ.ರಾ ಗೋವಿಂದ್ ಅವರಿಗೆ ನಿರ್ಮಾಪಕ, ಹಾಗೂ ಶಿವರಾಜ್‌ಕುಮಾರ್ ಕುಟುಂಬದ ಆಪ್ತ, ಕೆ.ಪಿ ಶ್ರೀಕಾಂತ್‌ರವರು 10 ಲಕ್ಷ ರೂಪಾಯಿಯ ಚೆಕ್ ವಿತರಿಸಲಿದ್ದಾರೆ.

Spread the love

Related Articles

Leave a Reply

Your email address will not be published.

Back to top button
Flash News