ಜುಲೈ ತಿಂಗಳಲ್ಲಿ ನಡೆಯಲಿರುವ ಎಸ್ಎಸ್ಎಲ್ಸಿ ಪರೀಕ್ಷೆಯ ಗೈಡ್ ಲೈನ್ಸ್ ಬಿಡುಗಡೆ..

0

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ಇಳಿಮುಖವಾಗುತ್ತಿರುವ ಹಿನ್ನೆಲೆ, ಕೋವಿಡ್ ಸೋಂಕಿನ ಎರಡನೇ ಅಲೆ ತೀವ್ರವಾದ ಕಾರಣ ಮುಂದೂಡಲ್ಪಟ್ಟಿದ್ದ ಎಸ್ ಎಸ್ ಎಲ್ ಸಿ ಪರೀಕ್ಷೆಯನ್ನು ಜುಲೈ ಮೂರನೇ ವಾರದಲ್ಲಿ ನಡೆಸಲು ಸರ್ಕಾರ ನಿರ್ಧರಿಸಿದೆ.

ಈ ಕುರಿತು, ಮಾರ್ಗಸೂಚಿಯನ್ನು ಬಿಡುಗಡೆ ಮಾಡಲಾಗಿದ್ದು, ಇದರ ಆಧಾರದ ಮೇಲೆ ಪರೀಕ್ಷಾ ಕೇಂದ್ರಗಳ ಮುಖ್ಯಸ್ಥರು ಪರೀಕ್ಷೆಗೆ ಸಿದ್ಧತೆ ಮಾಡಿಕೊಳ್ಳಬೇಕೆಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ತಿಳಿಸಿದ್ದಾರೆ.

ಮಾರ್ಗಸೂಚಿಯ ಪ್ರಮುಖ ಅಂಶಗಳು ಈ ಕೆಳಗಿನಂತಿವೆ

 • ಪರೀಕ್ಷಾ ವೇಳೆಯೊಳಗೆ ಒಂದು ಡೋಸ್ ಲಸಿಕೆ ಕಡ್ಡಾಯ
 • ಪ್ರತಿ ಪರೀಕ್ಷಾ ಕೇಂದ್ರದಲ್ಲೂ, ಪರೀಕ್ಷಾ ಕೇಂದ್ರದ ಒಳಗೆ ಪ್ರವೇಶಿಸುವ ಪ್ರದೇಶ ಹಾಗೂ ಪರೀಕ್ಷಾ ಕೊಠಡಿಗಳಲ್ಲಿ ಆರು ಅಡಿ ಅಥವಾ 2 ಮೀಟರ್ ದೈಹಿಕ ಅಂತರವನ್ನು ಕಾಯ್ದುಕೊಳ್ಳಲು ಸೂಕ್ತ ವ್ಯವಸ್ಥೆ ಕಲ್ಪಿಸುವುದು.
 • ಪ್ರತಿದಿನ ಪರೀಕ್ಷೆ ಆರಂಭಕ್ಕೂ ಮುನ್ನ ಮತ್ತು ಪರೀಕ್ಷೆ ನಂತರ ಪರೀಕ್ಷಾ ಕೇಂದ್ರ, ಕೊಠಡಿ, ಪೀಠೋಪಕರಣ ಮತ್ತು ಶೌಚಾಲಯಗಳ ಸ್ಯಾನಿಟೈಸ್ ಮಾಡುವುದು.
 • ಗ್ರಾಮೀಣ ಭಾಗದ ಶಾಲೆಗಳ ವಿದ್ಯಾರ್ಥಿಗಳು ತಾಲ್ಲೂಕು ಕೇಂದ್ರಕ್ಕೆ ಹೋಗದಂತೆ ಪರೀಕ್ಷಾ ಕೇಂದ್ರ ರಚಿಸುವುದು.
 • ಪ್ರತಿ ವಿದ್ಯಾರ್ಥಿಯು ತಮ್ಮದೇ ಆದ ನೀರಿನ ಬಾಟಲಿಗಳನ್ನು ತರಲು ಅವಕಾಶ ನೀಡುವುದು.
 • ಕೆಮ್ಮು, ನೆಗಡಿ, ಜ್ವರ ಮೊದಲಾದುವುಗಳಿಂದ ಬಳಲುತ್ತಿರುವ ಅಭ್ಯರ್ಥಿಗಳಿಗಾಗಿ ಕನಿಷ್ಠ 2 ಕೊಠಡಿಗಳನ್ನು ವಿಶೇಷ ಕೊಠಡಿಗಳನ್ನಾಗಿ ಕಾಯ್ದಿರಿಸಬೇಕು.
 • ದೈಹಿಕ ಕನಿಷ್ಠ ಆರು ಅಡಿಗಳ ಅಂತರ ಕಾಪಾಡಿಕೊಳ್ಳುವುದು.
  ಪ್ರತಿ ಕೊಠಡಿಯಲ್ಲಿ ಗರಿಷ್ಠ 12 ಮಕ್ಕಳಿರಬೇಕು. ಒಂದು ಡೆಸ್ಕ್ ಗೆ ಒಬ್ಬ ವಿದ್ಯಾರ್ಥಿಯಂತೆ, ಒಬ್ಬ ವಿದ್ಯಾರ್ಥಿಯಿಂದ ಮತ್ತೊಬ್ಬ ವಿದ್ಯಾರ್ಥಿಯ ನಡುವೆ 6 ಅಡಿ ಅಂತರವಿರಬೇಕು.
 • ಮಾಸ್ಕ್ ಧರಿಸದ ವಿದ್ಯಾರ್ಥಿಗಳಿಗೆ ಆರೋಗ್ಯ ಕೌಂಟರ್ ಗಳಲ್ಲೇ ಮಾಸ್ಕ್ ವಿತರಣೆ.
 • ಪರೀಕ್ಷಾರ್ಥಿಗಳಿಗೆ ಕೋವಿಡ್ ಪಾಸಿಟೀವ್ ಕಂಡು ಬಂದಿದ್ದರೆ ಅಂತಹ ಪರೀಕ್ಷಾರ್ಥಿಗೆ ತಾಲೂಕಿಗೊಂದು ಕೋವಿಡ್ ಕೇರ್ ಸೆಂಟರ್ ಸ್ಥಾಪಿಸಿ ಅಲ್ಲಿಯೇ ಪರೀಕ್ಷೆಗೆ ವ್ಯವಸ್ಥೆ.

ಪರೀಕ್ಷಾ ಪ್ರಕ್ರಿಯೆಯಲ್ಲಿ ಭಾಗಿಯಾಗಲಿರುವ ಶಿಕ್ಷಕರು, ಸಿಬ್ಬಂದಿ ಮತ್ತು ಅಧಿಕಾರಿಗಳು ಜಿಲ್ಲಾಡಳಿತದ ಸಹಕಾರದಿಂದ ಕೊವಿಡ್ ಲಸಿಕೆ ಪಡೆಯಬೇಕು, ಪರೀಕ್ಷಾ ಕೇಂದ್ರಕ್ಕೆ ಪ್ರಶ್ನೆ ಪತ್ರಿಕೆ ಮತ್ತು ಉತ್ತರ ಪತ್ರಿಕೆ ರವಾನೆ, ಪರೀಕ್ಷೆ ನಂತರ ಒಎಂಆರ್ ಶೀಟ್ ಗಳ ರವಾನೆ ಕುರಿತು ನಿಗದಿತ ಸೂಚನೆಗಳನ್ನು ಒದಗಿಸಲಾಗಿದ್ದು, ಆರೋಗ್ಯಕರ ವಾತಾವರಣದಲ್ಲಿ ಪರೀಕ್ಷೆಗೆ ಕ್ರಮಗಳನ್ನು ಕೈಗೊಳ್ಳಲಾಗುತ್ತದೆ ಎಂದು ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.

Spread the love
Leave A Reply

Your email address will not be published.

Flash News