ರಾಜ್ಯದಲ್ಲಿ ಶಾಲಾ ಕಾಲೇಜು ಪುನರಾರಂಭಕ್ಕೆ ತಾಂತ್ರಿಕ ಸಲಹಾ ಸಮಿತಿ ಗ್ರೀನ್ ಸಿಗ್ನಲ್… ಲಸಿಕೆ ನೀಡಿದ ಬಳಿಕ ಶಾಲಾ ಕಾಲೇಜು ಓಪನ್; ಆರೋಗ್ಯ ಸಚಿವ ಡಾ.ಕೆ ಸುಧಾಕರ್..

0

ರಾಜ್ಯ ಸರ್ಕಾರ ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರಕ್ಕೆ ಮೊದಲ ಆದ್ಯತೆ ನೀಡುತ್ತಿದ್ದು, ತಾಂತ್ರಿಕ ಸಲಹಾ ಸಮಿತಿಯ ಸಲಹೆಯಂತೆ 18 ವರ್ಷ ಮೇಲ್ಪಟ್ಟ ಎಲ್ಲ ವಿದ್ಯಾರ್ಥಿಗಳಿಗೆ ಮೊದಲ ಪ್ರಾಶಸ್ತ್ಯದ ಮೇಲೆ ಕೋವಿಡ್ ಲಸಿಕೆ ನೀಡಿ ಶಾಲಾ-ಕಾಲೇಜುಗಳನ್ನು ಆರಂಭಿಸಲಾಗುವುದು. ಶಾಲಾ, ಕಾಲೇಜು ಆರಂಭಿಸುವ ಬಗ್ಗೆ ಜನರಲ್ಲಿ ಗೊಂದಲ ಬೇಡ.

ಲಸಿಕೆ ವಿತರಿಸಿದ ನಂತರವೇ ಹಂತ ಹಂತವಾಗಿ ಶಾಲಾ ಕಾಲೇಜು ಆರಂಭಿಸುವ ಬಗ್ಗೆ ಚರ್ಚೆ ನಡೆಸಲಾಗುವುದು. ಮೊದಲು ಪಿಜಿ, ನಂತರ ಪದವಿ ಕಾಲೇಜುಗಳ ಆರಂಭಿಸಿ, ಬಳಿಕ ಪ್ರೌಢಶಾಲೆಗಳನ್ನು ಆರಂಭ ಮಾಡಲಾಗುವುದು. ಸರ್ಕಾರಕ್ಕೆ ವಿದ್ಯಾರ್ಥಿಗಳ ಕ್ಷೇಮವೆ ಮುಖ್ಯವಾಗಿದ್ದು, ಶಾಲಾ ಕಾಲೇಜು ಆರಂಭಿಸುವ ಆತುರ ಸರ್ಕಾರಕ್ಕೆ ಇಲ್ಲ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.

ನಿನ್ನೆಯವರೆಗೆ ರಾಜ್ಯದಲ್ಲಿ 2 ಕೋಟಿ ಲಸಿಕೆ ನೀಡಲಾಗಿದ್ದು, ಜೂನ್ 21ರಂದು ಹಮ್ಮಿಕೊಂಡಿದ್ದ ಒಂದು ದಿನದ ಲಸಿಕಾ ಮೇಳದಲ್ಲಿ 11 ಲಕ್ಷಕ್ಕೂ ಹೆಚ್ವು ಜನರಿಗೆ ಲಸಿಕೆ ನೀಡಿ ದಾಖಲೆ ಬರೆಯಲಾಗಿದೆ. ಲಸಿಕೆ ಹಾಕುವ ಕಾರ್ಯಕ್ರಮ ಮುಂದುವರೆಯಲಿದ್ದು ಇಡೀ ರಾಜ್ಯವನ್ನು ಕೋವಿಡ್ ಮುಕ್ತ ಮಾಡಲು ಸರ್ಕಾರ ಪಣ ತೊಟ್ಟಿದೆ.

ಕೊವಿಡ್‌ನಿಂದ ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯಗಳು ಸ್ಥಗಿತಗೊಂಡಿದ್ದು, ರಾಜ್ಯದಲ್ಲಿ ಜನಜೀವನ ಅಸ್ತವ್ಯಸ್ತವಾಗಿದೆ. ಮುಂದಿನ ದಿನಗಳಲ್ಲಿ ಎಲ್ಲವೂ ಸರಿಯಾಗುವ ಭರವಸೆ ಇದೆ ಎಂದು ಸಚಿವ ಸುಧಾಕರ್ ವಿಶ್ವಾಸ ವ್ಯಕ್ತಪಡಿಸಿದರು.

Spread the love
Leave A Reply

Your email address will not be published.

Flash News