ರಾಜ್ಯದಲ್ಲಿ ವಿದ್ಯಾರ್ಥಿಗಳ ಉನ್ನತ ಶಿಕ್ಷಣ ಕಲಿಕೆಗೆ ಸಹಾಯವಾಗುವಂತೆ ಉಚಿತ ಟ್ಯಾಬ್, ಪಿಸಿ ವಿತರಣಾ ಯೋಜನೆಗೆ ಚಾಲನೆ ನೀಡಿದ ಸಿಎಂ ಯಡಿಯೂರಪ್ಪ..

0

ಬೆಂಗಳೂರು: ಕೊರೊನಾ ಕಷ್ಟ ಕಾಲದಲ್ಲಿ ಉನ್ನತ ಶಿಕ್ಷಣ ಕಲಿಕೆಗೆ ಅನುಕೂಲ ಆಗುವಂತೆ ವಿದ್ಯಾರ್ಥಿಗಳಿಗೆ ಸರ್ಕಾರದಿಂದ ಉಚಿತ ಟ್ಯಾಬ್‌, ಪಿಸಿ ವಿತರಣೆ ಯೋಜನೆಗೆ ಇಂದು ಸಿಎಂ ಬಿ.ಎಸ್.ಯಡಿಯೂರಪ್ಪ ಚಾಲನೆ ನೀಡಿದರು.

ಉನ್ನತ ಶಿಕ್ಷಣ ವಿದ್ಯಾರ್ಥಿಗಳಿಗೆ ʼಕಲಿಕಾ ನಿರ್ವಹಣಾ ವ್ಯವಸ್ಥೆʼಯ ಮೂಲಕ ಬೋಧನೆ- ಕಲಿಕೆಗಾಗಿ ಟ್ಯಾಬ್, ಪಿಸಿಗಳನ್ನು ನೀಡಲಾಗಿದ್ದು, ವಿಧಾನಸೌಧದ ಬ್ಯಾಂಕ್ವೆಟ್‌ ಹಾಲ್‌ನಲ್ಲಿ ಇಂದು ನಡೆದ ಕಾರ್ಯಕ್ರಮದಲ್ಲಿ ಯೋಜನೆಯ ಉದ್ಘಾಟನಾ ಕಾರ್ಯಕ್ರಮದಲ್ಲಿ ಸಿಎಂ ಯಡಿಯೂರಪ್ಪ, ಡಿಸಿಎಂ ಅಶ್ವಥ್ ನಾರಾಯಣ್ ಹಾಗೂ ಉನ್ನತ ಶಿಕ್ಷಣ ಇಲಾಖೆಯ ಹಿರಿಯ ಅಧಿಕಾರಿಗಳು ಪಾಲ್ಗೊಂಡಿದ್ದರು.

ರಾಜ್ಯದ ವಿವಿಧ ಜಿಲ್ಲೆಗಳ ಕಾಲೇಜುಗಳಲ್ಲಿ ಆಯಾ ಜಿಲ್ಲೆಗಳ ಉಸ್ತುವಾರಿ ಸಚಿವರು, ಶಾಸಕರು, ಜಿಲ್ಲಾಧಿಕಾರಿಗಳು ಬ್ಲಾಂಕ್ವೆಟ್‌ ಹಾಲ್ ವೇದಿಕೆಗೆ ವರ್ಚುಯಲ್‌ ಮೂಲಕ ಲಿಂಕ್‌ ಆಗಿ ಟ್ಯಾಬ್‌ಗಳನ್ನು ವಿತರಣೆ ಮಾಡಿದರು.

ಉನ್ನತ ಶಿಕ್ಷಣ ಇಲಾಖೆಯಲ್ಲಿ ಕಲಿಕಾ ನಿರ್ವಹಣಾ ವ್ಯವಸ್ಥೆಗೆ ಪೂರಕವಾಗುವಂತೆ ಈ ಯೋಜನೆ ಜಾರಿ ಮಾಡಲಾಗಿದ್ದು, ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಪಾಲಿಟೆಕ್ನಿಕ್ ಹಾಗೂ ಇಂಜಿನಿಯರಿಂಗ್ ಕಾಲೇಜಿನ ಸುಮಾರು 1.55 ಲಕ್ಷ ವಿದ್ಯಾರ್ಥಿಗಳು ಟ್ಯಾಬ್ ಪಡೆದುಕೊಳ್ಳಲಿದ್ದಾರೆ.

ಹಾಗೆಯೇ ಟ್ಯಾಬ್ ವಿತರಣೆ ಕಾರ್ಯಕ್ರಮ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲೂ ವ್ಯವಸ್ಥೆ ಮಾಡಲಾಗಿದ್ದು, ಸ್ಥಳೀಯವಾಗಿ ಜಿಲ್ಲಾ ಉಸ್ತುವಾರಿ ಸಚಿವರು, ಸಂಸದರು, ಶಾಸಕರು ಹಾಗೂ ಹಿರಿಯ ಅಧಿಕಾರಿಗಳಿಂದ ಟ್ಯಾಬ್ ವಿತರಣೆಯಾಗಲಿದೆ.

Spread the love
Leave A Reply

Your email address will not be published.

Flash News