ಈ ಹಿಂದೆ ರೋಹಿಣಿ ಸಿಂಧೂರಿ ವರ್ಸಸ್ ಶಿಲ್ಪಾ ನಾಗ್ ಈ ಇಬ್ಬರು ಐಎಎಸ್ ಅಧಿಕಾರಿಗಳ ಕಿತ್ತಾಟ ದೊಡ್ಡ ಮಟ್ಟದಲ್ಲಿ ಸದ್ದು ಮಾಡಿತ್ತು. ಮುಂದೆ ಈ ಜಗಳ ಮೈಸೂರು ಮಾಜಿ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ, ಮೈಸೂರು ಪಾಲಿಕೆ ಆಯುಕ್ತೆಯಾಗಿದ್ದ ಶಿಲ್ಪಾ ನಾಗ್ ಅವರ ಎತ್ತಂಗಡಿ ನಂತರ ಸುಖಾಂತ್ಯವಾಯ್ತು. ಇದೀಗ ಐಎಎಸ್ ವರ್ಸಸ್ ಐಪಿಎಸ್ ಅಧಿಕಾರಿಗಳ ನಡುವೆ ವಾರ್ ಶುರುವಾದಂತೆ ಕಾಣುತ್ತಿದೆ.
ಹೌದು. “ಕೋರೋನ ಹಾಗೂ ಆರ್ಥಿಕ ವ್ಯವಸ್ಥೆಯಿಂದ ಜನರು ಸಂತ್ರಸ್ತರಾಗಿರುವ ಸಂದರ್ಭದಲ್ಲಿ ಜನರ ಹಣ ಅಂದರೆ ಸಾರ್ವಜನಿಕ ಹಣವ ಬಂಗಲೆಯಲ್ಲಿ ಸ್ವಿಮ್ಮಿಂಗ್ ಪೂಲ್ ಕಟ್ಟಲು ಮುಂದಾಗಿದ್ದು ಮೊಟ್ಟ ಮೊದಲನೆಯದಾಗಿ ರೋಹಿಣಿ ಐಎಎಸ್ ಅವರ ನೈತಿಕ ಪತನ ಎದ್ದು ತೋರಿಸುತ್ತದೆ. ಕಟ್ಟಲು ಪರವಾನಗಿ ತೆಗೆದುಕೊಂಡಿಲ್ಲ ಎನ್ನುವುದು ನಂತರದ ವಿಚಾರ. ಕಟ್ಟುವುದನ್ನು ಮುಂದೂಡಲೂಬಹುದಿತ್ತು” ಎಂದು ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಐಪಿಎಸ್ ಅಧಿಕಾರಿ ರೂಪ ಅವರು ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದು, ಮುಂದೆ ಈ ವಿಚಾರ ಎಲ್ಲಿಗೆ ಹೋಗಿ ಮುಟ್ಟುತ್ತೋ ಅನ್ನೋದನ್ನ ಕಾದುನೋಡಬೇಕಿದೆ.