MoreScrollTop NewsUncategorizedಕ್ರೈಮ್ /ಕೋರ್ಟ್ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(BBMP)ರಾಜ್ಯ-ರಾಜಧಾನಿ

ಬಿಬಿಎಂಪಿ ಮಾಜಿ ಕಾರ್ಪೋರೇಟರ್ ರೇಖಾ ಕದಿರೇಶ್ ಕೊಲೆ ಪ್ರಕರಣ..! 24 ಗಂಟೆಯೊಳಗೆ ಆರೋಪಿಗಳನ್ನು ಬಂಧಿಸಲಾಗುವುದು; ಸಿಎಂ ಯಡಿಯೂರಪ್ಪ ಹೇಳಿಕೆ

ಬೆಂಗಳೂರು: ಬಿಬಿಎಂಪಿ ಮಾಜಿ ಪಾಲಿಕೆ ಸದಸ್ಯೆ ರೇಖಾ ಕದಿರೇಶ್ ಅವರನ್ನು ಇಂದು ಅವರ ಮನೆಯ ಮುಂದೆಯೇ ಮಾರಕಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿದೆ.

ಇನ್ನು ಈ ಕೊಲೆಗೆ ಸಂಬಂಧಿಸಿದಂತೆ ಆರೋಪಿಗಳನ್ನು 24 ಗಂಟೆಯೊಳಗೆ ಬಂಧಿಸಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಹೇಳಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೆ ಬೆಂಗಳೂರು ಪೊಲೀಸ್ ಕಮಿಷನರ್ ಕಮಲ್‌ಪಂತ್ ಅವರ ಜೊತೆ ಚರ್ಚಿಸಿದ್ದು, ಕೂಡಲೇ ಕ್ರಮ ಕೈಗೊಳ್ಳುವಂತೆ ಸೂಚಿಸಿರುವುದಾಗಿ ತಿಳಿಸಿದರು.

ಯಾವ ಕಾರಣಕ್ಕಾಗಿ ಕೊಲೆ ನಡೆದಿದೆ ಎಂಬುದು ತಿಳಿದಿಲ್ಲ. ಹಳೆ ದ್ವೇಷವೋ ಅಥವಾ ರಾಜಕೀಯ ವೈಷಮ್ಯವೋ ಅನ್ನೋದು ತನಿಖೆಯಿಂದ ಸಾಬೀತಾಗಲಿದೆ. ನಿಷ್ಪಕ್ಷಪಾತ ತನಿಖೆ ನಡೆಸುವಂತೆ ಆಯುಕ್ತರಿಗೆ ಸೂಚಿಸಿದ್ದೇನೆ, ತಪ್ಪಿತಸ್ಥರು ಯಾರೇ ಇರಲಿ ಕಾನೂನು ಪ್ರಕಾರ ಶಿಕ್ಷೆಯಾಗಲಿದೆ ಎಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ತಿಳಿಸಿದರು.

ಈ ಹಿಂದೆ ಅವರ ಪತಿಯನ್ನು ಸಹ ಕೊಲೆ ಮಾಡಲಾಗಿತ್ತು. ಈಗ ಅವರ ಪತ್ನಿಯನ್ನೂ ಸಹ ಹತ್ಯೆ ಮಾಡಲಾಗಿದೆ. ಏನೆಲ್ಲ ಬಿಗಿ ಕ್ರಮಗಳನ್ನು ತೆಗೆದುಕೊಳ್ಳಬೇಕೋ ಅದನ್ನು ತೆಗೆದುಕೊಳ್ಳುತ್ತೇವೆ. ನಗರದ ಜನತೆ ಇಂತಹ ಘಟನೆಯಿಂದ ಆತಂಕಕ್ಕೆ ಒಳಗಾಗಬಾರದು ಎಂದು ಮನವಿ ಮಾಡಿದರು.

Spread the love

Related Articles

Leave a Reply

Your email address will not be published.

Back to top button
Flash News