ಶಿಕ್ಷಕರಿಗೆ ಬಿಗ್ ರಿಲೀಫ್… ಕೊರೊನಾ ಕರ್ತವ್ಯದಲ್ಲಿ ತೊಡಗಿಸಿಕೊಂಡಿರುವ ಶಿಕ್ಷಕರನ್ನು ತಕ್ಷಣ ಬಿಡುಗಡೆಗೊಳಿಸುವಂತೆ ಸಚಿವ ಸುರೇಶ್ ಕುಮಾರ್ ಸೂಚನೆ..

0

ರಾಜ್ಯದಲ್ಲಿ ಜುಲೈ ಮೂರನೇ ವಾರದಲ್ಲಿ 2020-21ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಯಲಿದ್ದು, ಎಲ್ಲಾ ಸಿದ್ಧತೆಗಳನ್ನು ಕೈಗೊಳ್ಳಲಾಗ್ತಿದೆ. ಈ ಹಿನ್ನೆಲೆ ಕೊರೊನಾ ಕರ್ತವ್ಯದಲ್ಲಿ ತೊಡಗಿಸಿಕೊಂಡಿರುವ ಶಿಕ್ಷಕರನ್ನು ಬಿಡುಗಡೆಗೊಳಿಸಬೇಕೆಂದು ಸಚಿವ ಸುರೇಶ್ ಕುಮಾರ್ ಬೆಂಗಳೂರು ಮಹಾನಗರ ಪಾಲಿಕೆ ಆಯುಕ್ತರಿಗೆ ಪತ್ರ ಬರೆದು, ನಿರ್ದೇಶನ ನೀಡಿದ್ದಾರೆ.

ಈಗಾಗಲೇ ಶೈಕ್ಷಣಿಕ ಚಟುವಟಿಕೆಗಳು ಆರಂಭಗೊಂಡಿದ್ದು, ಶಾಲೆಗಳಲ್ಲಿ ಮಕ್ಕಳ ದಾಖಲಾತಿ ಕೂಡ ನಡೀತಿದೆ. ಹೀಗಾಗಿ ಶಿಕ್ಷಕರು ಶಾಲಾ ಕರ್ತವ್ಯದಲ್ಲಿ ಭಾಗಿಯಾಗಬೇಕಿರುವುದರಿಂದ ತಕ್ಷಣ ಶಿಕ್ಷಕರನ್ನು ಕೋವಿಡ್ ಕರ್ತವ್ಯದಿಂದ ಬಿಡುಗಡೆಗೊಳಿಸಬೇಕು ಎಂದು ಸುರೇಶ್ ಕುಮಾರ್ ತಿಳಿಸಿದ್ದಾರೆ.

ಅಲ್ಲದೇ ಈ ಬಾರಿ ಸಾಮಾಜಿಕ  ಅಂತರ ಕಾಪಾಡಿಕೊಳ್ಳುವ ಹಿನ್ನೆಲೆಯಲ್ಲಿ 6000ಕ್ಕೂ ಹೆಚ್ಚಿನ ಪರೀಕ್ಷಾ ಕೇಂದ್ರಗಳನ್ನು ರಚಿಸಲಾಗಿರುವುದರಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಪ್ರಕ್ರಿಯೆಯಲ್ಲಿ ತೊಡಗಿಸಿಕೊಳ್ಳುವ ಶಿಕ್ಷಕರು, ಅಧಿಕಾರಿಗಳು, ಸಿಬ್ಬಂಧಿಗಳಿಗೆ ಆದ್ಯತೆಯ ಮೇಲೆ ಕೊರೊನಾ ಲಸಿಕೆ ನೀಡಲು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಬೇಕೆಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಜಿಲ್ಲಾಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.

 

Spread the love
Leave A Reply

Your email address will not be published.

Flash News