“ಡ್ರಗ್” ನಿಯಂತ್ರಣಕ್ಕೆ ರೂಪಿಸಲಾಗಿರುವ “NDPS” ಕಾಯ್ದೆಗೆ ರಾಜ್ಯದಲ್ಲಿ ನಿಯಮಾವಳಿ ರೂಪಿಸುವ ಮೂಲಕ ಆ ಕಾಯಿದೆಯನ್ನು ಮತ್ತಷ್ಟು ಬಲಪಡಿಸಲಾಗುವುದು; ಬಸವರಾಜ ಬೊಮ್ಮಾಯಿ

0

ಬೆಂಗಳೂರು: ಇಂದು ಅಂತರಾಷ್ಟ್ರೀಯ ಮಾದಕ ವಸ್ತುಗಳ ರಹಿತ ದಿನಾಚರಣೆಯ ಅಂಗವಾಗಿ ಬೆಂಗಳೂರು ನಗರ ಪೊಲೀಸರು ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿದ ಗೃಹ, ಕಾನೂನು ಸಚಿವರಾದ ಬಸವರಾಜ ಬೊಮ್ಮಾಯಿ ಅವರು ಮಾದಕ ವಸ್ತುಗಳ ಸರಬರಾಜು ನಿಯಂತ್ರಣಕ್ಕೆ ರೂಪಿಸಲಾಗಿರುವ ಎನ್‌ಡಿಪಿಎಸ್ ಕಾಯ್ದೆಗೆ ಕರ್ನಾಟಕದಲ್ಲಿ ನಿಯಮಾವಳಿ ರೂಪಿಸುವ ಮೂಲಕ ಆ ಕಾಯಿದೆಯನ್ನು ಮತ್ತಷ್ಟು ಬಲಪಡಿಸಲಾಗುವುದು, ಅಲ್ಲದೇ ಮಾದಕ ವಸ್ತುಗಳ ವಿರುದ್ಧದ ನಮ್ಮ ಹೋರಾಟ ಮತ್ತಷ್ಟು ಪ್ರಬಲವಾಗಲಿದೆ ಎಂದು ತಿಳಿಸಿದರು.

ಕೇಂದ್ರ ಸರ್ಕಾರ ಎನ್‌ಡಿಪಿಎಸ್ ಕಾನೂನನ್ನು ರೂಪಿಸಿದ್ದು, ಈ ಕಾನೂನನ್ನು ಪರಿಣಾಮಕಾರಿಯಾಗಿ, ಮತ್ತಷ್ಟು ಗಟ್ಟಿಯಾಗಿ ಜಾರಿಗೊಳಿಸಬೇಕೆಂಬುದು ನಮ್ಮ ಧೃಡ ನಿರ್ಧಾರವಾಗಿದೆ. ಈ ಕಾಯ್ದೆಯನ್ನು ರಾಜ್ಯದಲ್ಲಿ ಜಾರಿ ಮಾಡಲು ನಿಯಮಗಳನ್ನು ರೂಪಿಸುವ ಪ್ರಕ್ರಿಯೆ ಆರಂಭವಾಗಿದೆ ಎಂದು ತಿಳಿಸಿದರು.

“ಡಾರ್ಕ್ ವೆಬ್ ಮೂಲಕ ಸರಬರಾಜಾಗುತ್ತಿದ್ದ ಮಾದಕ ವಸ್ತುಗಳನ್ನು ನಮ್ಮ ಪೊಲೀಸರು ನಿಯಂತ್ರಿಸಿದ್ದು, ಡಾರ್ಕ್ ವೆಬ್ ಅಪರಾಧ ಪತ್ತೆಯಿಂದ ಹಲವಾರು ಹೊಸ ವಿಚಾರಗಳು ಬೆಳಕಿಗೆ ಬಂದಿರುವುದ ಆಧಾರದ ಮೇಲೆ ಹಲವಾರು ದಾಳಿಗಳು ನಡೆದಿವೆ. ಅಂತರಾಷ್ಟ್ರೀಯ ಮಟ್ಟದ ಪ್ಲೇಯರ್ ಗಳನ್ನು ಪತ್ತೆ ಮಾಡಿ ಬಂಧಿಸಲಾಗುವುದು” ಎಂದು ಸಚಿವ ಬೊಮ್ಮಾಯಿ  ವಿಶ್ವಾಸ ವ್ಯಕ್ತಪಡಿಸಿದರು.

“2020 21 ನೇ ಸಾಲಿನಲ್ಲಿ ರಾಜ್ಯದಲ್ಲಿ ವಶಪಡಿಸಿಕೊಳ್ಳಲಾಗಿರುವ 3000 ಕೆಜಿ ಗಿಂತಲೂ ಅಧಿಕ ತೂಕದ 50 ಕೋಟಿ ರೂಪಾಯಿ ಮೌಲ್ಯದ ಮಾದಕ ವಸ್ತುಗಳನ್ನು ನ್ಯಾಯಾಲಯದ ಆದೇಶದ ಪ್ರಕಾರ ನಾಶಪಡಿಸಲಾಗಿದೆ. ಡ್ರಗ್ಸ್ ವಿರುದ್ಧದ ನಮ್ಮ ಹೋರಾಟದಲ್ಲಿ ಕರ್ನಾಟಕ ಪೊಲೀಸರು ಒಳ್ಳೆಯ ಕೆಲಸ ಮಾಡಿದ್ದಾರೆ. ದೊಡ್ಡ ಪ್ರಮಾಣದ ಮಾದಕ ವಸ್ತುಗಳು ಅಪಾರ ಪ್ರಮಾಣದ ಜನರ ಆರೋಗ್ಯವನ್ನು ಹಾಳು ಮಾಡುತ್ತಿದ್ದವು. ಆ ಅಪಾಯವನ್ನು ನಮ್ಮ ಪೊಲೀಸರು ತಪ್ಪಿಸಿದ್ದಾರೆ ಎಂಬುದು ಹೆಮ್ಮೆಯ ಸಂಗತಿಯಾಗಿದೆ” ಎಂದು ಬಸವರಾಜ ಬೊಮ್ಮಾಯಿ ವಿಶ್ವಾಸ ವ್ಯಕ್ತಪಡಿಸಿದರು.

Spread the love
Leave A Reply

Your email address will not be published.

Flash News