ರಿಯಲ್ ಸ್ಟಾರ್ ಉಪೇಂದ್ರ ಅಭಿನಯದ “ಕಬ್ಜ” ಸಿನಿಮಾದ ಪೋಸ್ಟರ್ ಬಿಡುಗಡೆ..

0

ಸ್ಯಾಂಡಲ್‌ವುಡ್ ನಟ ರಿಯಲ್ ಸ್ಟಾರ್ ಉಪೇಂದ್ರ ಅಭಿನಯದ ‘ಕಬ್ಜ’ ಸಿನಿಮಾ ರಿಲೀಸ್‌ಗೂ ಮುನ್ನವೇ ಅಭಿಮಾನಿಗಳಲ್ಲಿ ಕುತೂಹಲ ಮೂಡಿಸಿದೆ. ಕಬ್ಜ ಸಿನಿಮಾದಲ್ಲಿ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಕೂಡ ವಿಶೇಷ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

ಇನ್ನು ಈ ಸಿನಿಮಾದ ವಿನೂತನ ಹಾಲಿವುಡ್ ಶೈಲಿಯ ಪೋಸ್ಟರ್ ನಾಳೆ ಬೆಳಗ್ಗೆ ಬಿಡುಗಡೆಯಾಗಲಿದೆ. ಆರ್ ಚಂದ್ರುರವರು ಕಬ್ಜ ಸಿನಿಮಾವನ್ನು ನಿರ್ದೇಶಿಸಿ, ನಿರ್ಮಾಣ ಮಾಡುತ್ತಿದ್ದಾರೆ. ಅಲ್ಲದೇ ಕಬ್ಜ ಸಿನಿಮಾಗೆ ಕೆಜಿಎಫ್ ಖ್ಯಾತಿಯ ರವಿ ಬಸ್ರೂರು ಸಂಗೀತ ನಿರ್ದೇಶನ ನೀಡಿದ್ದಾರೆ. ಈ ಚಿತ್ರದ ತಾರಾಬಳಗದಲ್ಲಿ ಉಪೇಂದ್ರ, ಕಿಚ್ಚ ಸುದೀಪ್, ಕಾಮರಾಜನ್, ಜಗಪತಿ ಬಾಬು, ರಾಹುಲ್ ಜಗತಪ್, ಅನೂಪ್ ರೇವಣ್ಣ, ಜಾನ್ ಕೊಕೆನ್, ರಾಹುಲ್ ದೇವ್, ನವೀನ್, ಕೋಟ ಶ್ರೀನಿವಾಸ್, ಜಯಪ್ರಕಾಶ್, ಕಾಟ್ ರಾಜು, ಸುಬ್ಬರಾಜು ಮುಂತಾದವರಿದ್ದಾರೆ. ಇನ್ನು ಕಬ್ಜ ಚಿತ್ರದ ಪೋಸ್ಟರ್‌ನನ್ನು ಕಣ್ತುಂಬಿಕೊಳ್ಳಲು ಅಭಿಮಾನಿಗಳು ಕಾಯುತ್ತಿದ್ದಾರೆ.

Spread the love
Leave A Reply

Your email address will not be published.

Flash News