MoreScrollTop NewsUncategorizedಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(BBMP)ರಾಜ್ಯ-ರಾಜಧಾನಿ

ನಾಡಪ್ರಭು ಕೆಂಪೇಗೌಡರ ಜಯಂತಿಯನ್ನು ಮುಂದಿನ ವರ್ಷದಿಂದ ಅಂತಾರಾಷ್ಟ್ರೀಯ ಮಟ್ಟದಲ್ಲಿ “ಬೆಂಗಳೂರು ಹಬ್ಬ”ವೆಂದು ಆಚರಿಸಲಾಗುವುದು; ಡಿಸಿಎಂ ಅಶ್ವತ್ಥನಾರಾಯಣ..

ಬೆಂಗಳೂರು: ಇಂದು ನಾಡಪ್ರಭು ಕೆಂಪೇಗೌಡರ 512 ನೇ ಜಯಂತಿಯ ಅಂಗವಾಗಿ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ನಡೆದ ಆಚರಣೆಯಲ್ಲಿ ಅಂಚೆ ಲಕೋಟೆಯ ಲೋಕಾರ್ಪಣೆ ಹಾಗೂ ಅಧ್ಯಯನ ಕೇಂದ್ರ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದ ಡಿಸಿಎಂ ಅಶ್ವತ್ಥನಾರಾಯಣ ಅವರು ಪ್ರತಿ ವರ್ಷ ಜೂನ್ 27ರಂದು ನಾಡಪ್ರಭುಗಳ ಜಯಂತಿಯನ್ನು ಆಚರಿಸಲಾಗುತ್ತದೆ. ಮುಂದಿನ ವರ್ಷದಿಂದ ಮೂರು ದಿನಗಳ ಕಾಲ ಅಂದರೆ 26, 27, 28 ರಂದು “ಬೆಂಗಳೂರು ಹಬ್ಬ”ವನ್ನಾಗಿ ಆಚರಿಸಲಾಗುವುದು ಎಂದು ಹೇಳಿದರು.

ಆ ಮೂರು ದಿನಗಳ ಕಾಲ ಬೆಂಗಳೂರು ನಗರದಲ್ಲಿನ ಎಲ್ಲಾ ಪಾರಂಪರಿಕ ತಾಣ, ಮತ್ತು ಕಟ್ಟಡಗಳನ್ನು ವಿದ್ಯುತ್ ದೀಪಗಳಿಂದ ಅಲಂಕರಿಸಿ ಅಂತರಾಷ್ಟ್ರೀಯ ಮಟ್ಟದಲ್ಲಿ “ಬೆಂಗಳೂರು ಹಬ್ಬ” ಎಂಬ ಹೆಸರಿನಲ್ಲಿ ಆಚರಿಸಲಾಗುವುದು ಎಂದು ಅಶ್ವತ್ಥನಾರಾಯಣ ಅವರು ತಿಳಿಸಿದರು.

ಇದೇ ಸಂದರ್ಭದಲ್ಲಿ, ಮುಂದಿನ ವರ್ಷ ಮಾರ್ಚ್ ತಿಂಗಳಲ್ಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮುಂದಿನ 23 ಎಕರೆ ಪ್ರದೇಶದಲ್ಲಿ ನಿರ್ಮಾಣವಾಗುತ್ತಿರುವ ಸೆಂಟ್ರಲ್ ಪಾರ್ಕ್ ನಡುವೆ ಸ್ಥಾಪನೆಯಾಗುತ್ತಿರುವ 108 ಅಡಿ ಎತ್ತರದ ಲೋಹ ಪ್ರತಿಮೆ ಲೋಕಾರ್ಪಣೆ ಮಾಡಲಾಗುವುದು ಎಂದು ತಿಳಿಸಿದರು.

ಇನ್ನು ಇದೇ ವರ್ಷದ ಜಯಂತಿಯಂದೇ ಪ್ರತಿಮೆ ಲೋಕಾರ್ಪಣೆಯಾಗಬೇಕಿತ್ತು. ಆದರೆ ಕೊರೊನಾದಿಂದ ತಡವಾಗಿದೆ. ಈಗಾಗಲೇ ನೋಯ್ಡಾದಲ್ಲಿ ಪ್ರತಿಮೆ ಬೇಗ ಬೇಗನೆ ತಯಾರಾಗ್ತಿದೆ. ಏರ್‌ಪೋರ್ಟ್ನಲ್ಲೂ ಕಾಮಗಾರಿ ಮತ್ತೆ ಆರಂಭವಾಗಿದೆ ಎಂದು ತಿಳಿಸಿದರು.

Spread the love

Related Articles

Leave a Reply

Your email address will not be published.

Back to top button
Flash News