ಬೆಂಗಳೂರು:ಕನ್ನಡದ ಖ್ಯಾತ ಹಾಸ್ಯ ನಟ ದೊಡ್ಡಣ್ಣ ಅವರ ಆರೋಗ್ಯಸ್ತಿತಿ ಹದಗಟ್ಟಿರುವ ಹಿನ್ನಲೆಯಲ್ಲಿ ಬೆಂಗಳೂರಿನ ಜಯದೇವ ಆಸ್ಪತ್ರೆಗೆ ದಾಖಲಿಸಿರುವ ಸುದ್ದಿ ಹೊರಬಿದ್ದಿದೆ.ಹೃದಯ ಸಂಬಂಧಿ ಸಮಸ್ಯೆಯಿಂದ ಬಳಲುತ್ತಿರುವ ದೊಡ್ಡಣ್ಣ ಅವರ ಆರೋಗ್ಯದಲ್ಲಿ ಏರುಪೇರು ಕಂಡು ಬಂದ ಕಾರಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಚಿತ್ರರಂಗದ ಮೂಲಗಳು ಕನ್ನಡ ಫ್ಲಾಶ್ ನ್ಯೂಸ್ ಗೆ ತಿಳಿಸಿವೆ.
ದೊಡ್ಡಣ್ಣ ಅವರ ಆರೋಗ್ಯದಲ್ಲಿ ಆಗಾಗ ಏರುಪೇರು ಕಂಡುಬರುತ್ತಿತ್ತು.ಹಾಗಾದಾಗಲೆಲ್ಲಾ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಗುಣಮುಖರಾಗಿ ಬರುತ್ತಿದ್ದರು.ಈ ಬಾರಿ ಹೃದಯದ ನೋವು ಕಾಣಿಸಿಕೊಂಡಿದ್ದರಿಂದ ಅವರನ್ನು ಜಯದೇವ ಆಸ್ಪತ್ರೆಗೆ ದಾಖಲಿಸಲಾಗಿದೆ ಎನ್ನಲಾಗಿದೆ..
ದೊಡ್ಡಣ್ಣ ಅವರ ಸಧ್ಯದ ಆರೋಗ್ಯ ಸ್ಥಿತಿ ಹೇಗಿದೆ ಎನ್ನುವುದರ ಮಾಹಿತಿ ಸಧ್ಯಕ್ಕೆ ಲಭ್ಯವಾಗಿಲ್ಲ.ಅವರಿಗೆ ನುರಿತ ವೈದ್ಯರ ತಂಡ ಚಿಕಿತ್ಸೆ ನೀಡುತ್ತಿದ್ದು ಬೇಗ ಗುಣಮುಖವಾಗುವ ವಿಶ್ವಾಸ ವ್ಯಕ್ತಪಡಿಸಿದ್ದಾರೆನ್ನಲಾಗಿದೆ.
ದೊಡ್ಡಣ್ಣ ಕನ್ನಡ ಚಿತ್ರರಂಗದ ಖ್ಯಾತ ಹಾಸ್ಯ ನಟ ಅಷ್ಟೇ ಅಲ್ಲ,ಹಿರಿಯ ನಟ ಕೂಡ.ಅವರ ಆರೋಗ್ಯದಲ್ಲಿ ಏರುಪೇರಾಗಿ ಆಸ್ಪತ್ರೆಯಲ್ಲಿ ದಾಖಲಾಗಿರುವ ಸುದ್ದಿ ಹೊರಬರುತ್ತಿದ್ದಂತೆ ಅನೇಕ ಕಲಾವಿದರು,ತಂತ್ರಜ್ಞರು ಅವರ ಆರೋಗ್ಯ ವಿಚಾರಿಸಿ ಬೇಗ ಗುಣಮುಖರಾಗುವಂತೆ ಹಾರೈಸಿದ್ದಾರೆ ಎನ್ನಲಾಗಿದೆ.