ಬಡ ರೋಗಿಗಳ ಬದುಕಿನೊಂದಿಗೆ ESI ಹೃದ್ರೋಗ ವಿಭಾಗ ಚೆಲ್ಲಾಟ, ಆಡಳಿತ ಮಂಡಳಿ ನಿರ್ಲಕ್ಷ್ಯಕ್ಕೆ ನೂರಾರು ರೋಗಿಗಳ ಸಾವು..!?

ಹಣದಾಸೆಗೆ ಬಡ ರೋಗಿಗಳ ರಕ್ತ ಹೀರುತ್ತಿದ್ದಾರಂತೆ ಆಸ್ಪತ್ರೆ ವೈದ್ಯರು-ಲಂಚಬಾಕರಾಗಿದ್ದಾರಂತೆ ಸಿಬ್ಬಂದಿ..ರೋಗಿಗಳ ಪರದಾಟ

0

ಬೆಂಗಳೂರಿನ ರಾಜಾಜಿನಗರದಲ್ಲಿರುವ  ಇಎಸ್‌ಐ ಆಸ್ಪತ್ರೆ ಮತ್ತೊಮ್ಮೆ ಸುದ್ದಿಯಲ್ಲಿದೆ.ಇದಕ್ಕೆ ಕಾರಣ ಇಲ್ಲಿರುವ ಜಯದೇವ ಹೃದ್ರೋಗ ಸಂಸ್ಥೆಯ ಕಾರ್ಡಿಯಾಲಜಿ ವಿಭಾಗದಲ್ಲಿ ನಡೆಯುತ್ತಿರುವ  ಭ್ರಷ್ಟಾಚಾರ.ಆಡಳಿತ ಮಂಡಳಿ ಧನದಾಹಕ್ಕೆ ನೂರಾರು ರೋಗಿಗಳು ಬಲಿಯಾಗುತ್ತಿರುವ ಸ್ಪೋಟಕ ಮಾಹಿತಿಯನ್ನು ಆಮ್ ಆದ್ಮಿ ಪಾರ್ಟಿ ಹೊರಹಾಕಿದೆ.

“ಇಎಸ್‌ಐಯಲ್ಲಿರುವ ಹೃದ್ರೋಗ ವಿಭಾಗದಲ್ಲಿ 50ಕ್ಕೂ ಹೆಚ್ಚು ವೆಂಟಿಲೇಟರ್‌ ಬೆಡ್‌ಗಳಿವೆ, ಅತ್ಯಾಧುನಿಕ ಸೌಲಭ್ಯಗಳಿವೆ. 15 ಸರ್ಜನ್‌ಗಳು, ನೂರಾರು ಸಿಬ್ಬಂದಿ ಅಲ್ಲಿಗೆ ನೇಮಕಗೊಂಡಿದ್ದಾರೆ. ಬೇರೆಲ್ಲ ಆಸ್ಪತ್ರೆಗಳಲ್ಲಿ ಬೆಡ್‌ಗಳು ಭರ್ತಿಯಾಗಿದ್ದರೂ ಕೂಡ ಇಲ್ಲಿ ಬೆಡ್‌ಗಳು ಖಾಲಿಯಿರುತ್ತವೆ ಎನ್ನುವ ಆರೋಪ ಕೇಳಿಬಂದಿದೆ.ಕಾರ್ಡಿಯಾಲಜಿ ವಿಭಾಗದಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದ್ದು, ಖಾಸಗಿ ಆಸ್ಪತ್ರೆಗಳೊಂದಿಗೆ ಅಕ್ರಮ ಒಳಒಪ್ಪಂದ ಮಾಡಿಕೊಂಡಿರುವ ಇಲ್ಲಿನ ಅಧಿಕಾರಿಗಳು ಉದ್ದೇಶಪೂರ್ವಕವಾಗಿ ಆಸ್ಪತ್ರೆಯನ್ನು ಹಾಳುಗೆಡವುತ್ತಿದ್ದಾರೆ ಎನ್ನುವುದು ಬೆಂಗಳೂರು ನಗರ ಎಎಪಿ ಅಧ್ಯಕ್ಷ ಮೋಹನ್‌ ದಾಸರಿ ಅವರ ಗಂಭೀರ ಆರೋಪ,.

““2011-12ರಲ್ಲಿ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯು ರಾಜಾಜಿನಗರದ ಇಎಸ್‌ಐ ಆಸ್ಪತ್ರೆಯೊಂದಿಗೆ ಎಂಒಯು ಮಾಡಿಕೊಂಡಿದೆ. ಆ ಪ್ರಕಾರ ಇಎಸ್‌ಐ ಆಸ್ಪತ್ರೆಯಲ್ಲಿ ವಾರ್ಷಿಕ 15 ಕೋಟಿ ರೂ. ಮೊತ್ತದ ವಹಿವಾಟು ನಡೆಯಬೇಕು ಎಂದು ಗುರಿ ನಿಗದಿ ಪಡಿಸಲಾಗಿದೆಯಂತೆ. ಈ ರೀತಿಯ ಒಪ್ಪಂದವು ಆರೋಗ್ಯ ಇಲಾಖೆಯ ವ್ಯಾಪಾರಿ ಪ್ರವೃತ್ತಿಯನ್ನು ತೋರಿಸುತ್ತದೆ. ಚಿಕಿತ್ಸೆಯನ್ನು ಸೇವೆಯನ್ನು ಪರಿಗಣಿಸುವ ಬದಲು ವ್ಯಾಪಾರವೆಂದು ಸರ್ಕಾರವೇ ಪರಿಗಣಿಸಿರುವುದು ನಾಚಿಕೆಗೇಡು ಎನ್ನುವುದು ಮೋಹನ್ ದಾಸರಿ ಅವರ ಮತ್ತೊಂದು ಆರೋಪ.

ಜಯದೇವ ಆಸ್ಪತ್ರೆಯೊಂದಿಗಿನ ಒಪ್ಪಂದ ನವೆಂಬರ್‌ನಲ್ಲಿ ಅಂತ್ಯವಾದ ನಂತರ ಖಾಸಗಿ ಆಸ್ಪತ್ರೆ ಜೊತೆ ಒಪ್ಪಂದಕ್ಕೆ ಸಿದ್ಧತೆ ನಡೆಸಲಾಗುತ್ತಿರುವುದು ಖಂಡನೀಯ. ಇಎಸ್‌ಐ ಆಸ್ಪತ್ರೆಯಲ್ಲಿ ನಡೆಯುತ್ತಿರುವ ಎಲ್ಲ ಅಕ್ರಮಗಳಿಗೆ ಇಲ್ಲಿನ ಆಡಳಿತ ಮಂಡಳಿ ನೇರ ಕಾರಣ. ಮಂಡಳಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಆಗ್ರಹಿಸಿ ಪ್ರಧಾನಿ, ರಾಷ್ಟ್ರಪತಿ, ಸಿಬಿಐ ಹಾಗೂ ಕೇಂದ್ರ ಕಾರ್ಮಿಕ ಇಲಾಖೆಗೆ ದೂರು ನೀಡುತ್ತೇವೆ” ಎಂದು ಎಚ್ಚರಿಸಿದರು.

ಇಲ್ಲಿನ ಅಕ್ರಮಗಳಿಗೆ ಕಡಿವಾಣ ಹಾಕುವುದರ ಜೊತೆಗೆ, ಕಾರ್ಮಿಕರಿಗೆ ಮಾತ್ರ ಸೀಮಿತವಾಗಿರುವ ಹೃದ್ರೋಗ ವಿಭಾಗವನ್ನು ಎಲ್ಲ ಸಾರ್ವಜನಿಕರಿಗೆ ವಿಸ್ತರಿಸಬೇಕು. ರಾಜಾಜಿನಗರ, ಮಲ್ಲೇಶ್ವರ ಹಾಗೂ ಸುತ್ತಮುತ್ತಲಿನ ಜನರಿಗೆ ಇದರಿಂದ ಉಪಯೋಗವಾಗುತ್ತದೆ. ಆಸ್ಪತ್ರೆಯಲ್ಲಿರುವ ಸೌಲಭ್ಯಗಳ ಬಗ್ಗೆ ಜನರಿಗೆ ಮಾಹಿತಿ ನೀಡಬೇಕು.

ಕೋವಿಡ್‌ ಆತಂಕವಿರುವ ಈ ಸಂದರ್ಭದಲ್ಲಿ ಆಸ್ಪತ್ರೆಗಳನ್ನು ಇನ್ನಷ್ಟು ಆಧುನೀಕರಣಗೊಳಿಸಲು ಮುಂದಾಗುವ ಬದಲು ಇರುವ ಸೌಲಭ್ಯಗಳನ್ನೂ ಕಿತ್ತುಕೊಳ್ಳುತ್ತಿರುವುದು ಖಂಡನೀಯ” ಎನ್ನುವುದು ಆಮ್‌ ಆದ್ಮಿ ಪಾರ್ಟಿಯ ಬೆಂಗಳೂರು ನಗರದ ಉಪಾಧ್ಯಕ್ಷರಾದ ಬಿ.ಟಿ.ನಾಗಣ್ಣ ಎಂದು ಅಕ್ರೋಶ ವ್ಯಕ್ತಪಡಿಸಿದ್ದಾರೆ.ಸಾರ್ವಜನಿಕರ ನೆರವಿಗೆ ಬರಬೇಕಾದ ಆಸ್ಪತ್ರೆ ಇವತ್ತು ಲೂಟಿಗಿಳಿದಿರುವುದು ಮಾತ್ರ ದುರಾದೃಷ್ಟಕರ ಅಲ್ಲವೇ..

 

“ಇಎಸ್‌ಐಯಲ್ಲಿರುವ ಹೃದ್ರೋಗ ವಿಭಾಗದಲ್ಲಿ 50ಕ್ಕೂ ಹೆಚ್ಚು ವೆಂಟಿಲೇಟರ್‌ ಬೆಡ್‌ಗಳಿವೆ, ಅತ್ಯಾಧುನಿಕ ಸೌಲಭ್ಯಗಳಿವೆ. 15 ಸರ್ಜನ್‌ಗಳು, ನೂರಾರು ಸಿಬ್ಬಂದಿ ಅಲ್ಲಿಗೆ ನೇಮಕಗೊಂಡಿದ್ದಾರೆ. ಬೇರೆಲ್ಲ ಆಸ್ಪತ್ರೆಗಳಲ್ಲಿ ಬೆಡ್‌ಗಳು ಭರ್ತಿಯಾಗಿದ್ದರೂ ಕೂಡ ಇಲ್ಲಿ ಬೆಡ್‌ಗಳು ಖಾಲಿಯಿರಲು ಕಾರಣವೇನು..

-ಬೆಂಗಳೂರು ನಗರ ಎಎಪಿ ಅಧ್ಯಕ್ಷ ಮೋಹನ್‌ ದಾಸರಿ

“ಇಲ್ಲಿನ ಅಕ್ರಮಗಳಿಗೆ ಕಡಿವಾಣ ಹಾಕುವುದರ ಜೊತೆಗೆ, ಕಾರ್ಮಿಕರಿಗೆ ಮಾತ್ರ ಸೀಮಿತವಾಗಿರುವ ಹೃದ್ರೋಗ ವಿಭಾಗವನ್ನು ಎಲ್ಲ ಸಾರ್ವಜನಿಕರಿಗೆ ವಿಸ್ತರಿಸಬೇಕು. ರಾಜಾಜಿನಗರ, ಮಲ್ಲೇಶ್ವರ ಹಾಗೂ ಸುತ್ತಮುತ್ತಲಿನ ಜನರಿಗೆ ಇದರಿಂದ ಉಪಯೋಗವಾಗುತ್ತದೆ. ಆಸ್ಪತ್ರೆಯಲ್ಲಿರುವ ಸೌಲಭ್ಯಗಳ ಬಗ್ಗೆ ಜನರಿಗೆ ಮಾಹಿತಿ ನೀಡಬೇಕು.

-ಬಿ.ಟಿ.ನಾಗಣ್ಣ, ಎಎಪಿ ಬೆಂಗಳೂರು ನಗರದ ಉಪಾಧ್ಯಕ್ಷ

Spread the love
Leave A Reply

Your email address will not be published.

Flash News