BreakingMoreScrollTop NewsUncategorizedಕ್ರೈಮ್ /ಕೋರ್ಟ್ಜಿಲ್ಲೆಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ(BMTC-KSRTC)ರಾಜ್ಯ-ರಾಜಧಾನಿ

BMTC DRIVER HANG HIMSELF: BMTC ಡ್ರೈವರ್ ಸೂಸೈಡ್: ಮನೆಯಲ್ಲೇ ಫ್ಯಾನಿಗೆ ಕೊರಳೊಡ್ಡಿ ಆತ್ಮಹತ್ಯೆ..!

ಬೆಂಗಳೂರು:ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಚಾಲಕನೋರ್ವ ನಿಗೂಢ ರೀತಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ನಾಗಸಂದ್ರದ ನಿವಾಸಿ ಎನ್ನಲಾಗುತ್ತಿರುವ ಲಕ್ಷ್ಮಣ ಗೌಡ ತನ್ನ ಮನೆಯಲ್ಲೇ ನೇಣಿಗೆ ಕೊರಳೊಡ್ಡಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಬಿಎಂಟಿಸಿ ಘಟಕ 8 ರಲ್ಲಿ ಅನೇಕ ವರ್ಷಗಳಿಂದ ಚಾಲಕನಾಗಿ ಕೆಲಸ ಮಾಡುತ್ತಿದ್ದ ಲಕ್ಷ್ಮಣ ಗೌಡನ ಸಾವಿಗೆ ನಿಖರ ಕಾರಣ ಏನೆಂದು ತಿಳಿದುಬಂದಿಲ್ಲ.

ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.ಲಕ್ಷ್ಮಣ ಗೌಡ ಇತ್ತೀಚಿನ ದಿನಗಳಲ್ಲಿ ಅಂತರ್ಮುಖಿಯಾಗಿದ್ದ.ಯಾರ ಜತೆಗೂ ಹೆಚ್ಚಾಗಿ ಬೆರೆಯುತ್ತಿರಲಿಲ್ಲ..ಡಿಪೋದಲ್ಲಿ ಮೇಲಾಧಿಕಾರಿಗಳ ಕಿರುಕುಳದ ಬಗ್ಗೆ ಆಗಾಗ ಹೇಳುತ್ತಿದ್ದ ಎನ್ನಲಾಗಿದೆ.ಮೇಲ್ನೋಟಕ್ಕೆ ಮೇಲಾಧಿಕಾರಿಗಳ ಕಿರುಕುಳವೇ ಕಾರಣ ಎನ್ನಲಾಗುತ್ತಿದೆ.ಇದಕ್ಕಿಂತ ಬೇರೆಯಾದ ಕಾರಣಗಳು ಆತ್ಮಹತ್ಯೆಗೆ ಇರಬಹುದಾ ಎನ್ನುವ ತನಿಖೆಯಲ್ಲಿ ಪೊಲೀಸರು ನಿರತರಾಗಿದ್ದಾರೆ.

 

Spread the love

Related Articles

Leave a Reply

Your email address will not be published.

Back to top button
Flash News