BreakingTop News

ಒಂದೇ ದಿನ ದ್ವಿತೀಯ ಪಿಯು-ಜೆಇಇ ಪರೀಕ್ಷೆ: ಸಂಕಷ್ಟದಲ್ಲಿ ವಿದ್ಯಾರ್ಥಿಗಳು! JEE- second PU exam same date: students confuse

ಪಿಯು ವಿದ್ಯಾರ್ಥಿಗಳು ಗೊಂದಲಕ್ಕಿಡಾಗಿದ್ದು, ರಾಷ್ಟ್ರೀಯ ಪರೀಕ್ಷಾ ಪ್ರಾಧಿಕಾರ ಜಂಟಿ ಪ್ರವೇಶ ಪರೀಕ್ಷೆ ದಿನಾಂಕವನ್ನು ಪ್ರಕಟಿಸಿದ ಬೆನ್ನಲ್ಲೆ, ಕರ್ನಾಟಕದ ಪಿಯು ವಿದ್ಯಾರ್ಥಿಗಳು ಸಂಕಷ್ಟಕ್ಕೆ ಸಿಲುಕಿಂತಾಗಿದ್ದಾರೆ.

ಏಪ್ರಿಲ್ 16 ರಿಂದ 21 ರವರೆಗೆ ಜಿಇಇ ಪರೀಕ್ಷೆ ನಡೆಸುವುದಾಗಿ ದಿನಾಂಕ ಪ್ರಕಟವಾಗಿದೆ. ದ್ವಿತೀಯ ಪಿಯು ಪರೀಕ್ಷೆಗಳ ಸಂದರ್ಭದಲ್ಲೇ ಜಿಇಇ ಮುಖ್ಯ ಪರೀಕ್ಷೆ ನಡೆಯಲಿದ್ದು, ರಾಜ್ಯದಲ್ಲಿ ವಿದ್ಯಾರ್ಥಿಗಳಿಗೆ ಆತಂಕ ಶುರುವಾಗಿದೆ.

ಈಗಾಗಲೇ ಪದವಿ ಪೂರ್ವ ಶಿಕ್ಷಣ ಮಂಡಳಿ 2022ನೇ ಸಾಲಿನ ಪಿಯು ವೇಳಾಪಟ್ಟಿ ಪ್ರಕಟಿಸಿದೆ. ಏಪ್ರಿಲ್ 16 ರಿಂದ ಮೇ 06 ರವರೆಗೆ ಪರೀಕ್ಷೆ ನಡೆಸಲು ಮುಂದಾಗಿದೆ. ಆದರೆ ಈ ನಡುವೆಯೇ ಜೆಇಇ ಮುಖ್ಯ ಪರೀಕ್ಷೆಗೆ ವೇಳಾಪಟ್ಟಿ ಪ್ರಕಟಿಸಿದೆ. ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ಎನ್ಟಿಎ ನಿನ್ನೆ ವೇಳಾಪಟ್ಟಿ ಪ್ರಕಟಿಸಿದೆ.

ಜೆಇಇ ಮೇನ್ ಪರೀಕ್ಷೆಗಳು ಏಪ್ರಿಲ್ 16 ರಿಂದ 21 ರವರೆಗೆ ಮತ್ತು ಎರಡನೇ ಹಂತದ ಪರೀಕ್ಷೆಗಳು ಮೇ 24 ರಿಂದ 29ರವರೆಗೂ ನಡೆಯಲಿದೆ. ಐಐಟಿಗಳಿಗೆ ಪ್ರವೇಶ ಕಲ್ಪಿಸಲು ಜೆಇಇ ಪರೀಕ್ಷೆ ನಡೆಸಲಾಗುವುದು. ಒಂದೇ ಸಮಯಕ್ಕೆ 2 ಪರೀಕ್ಷೆ ನಡೆಯುವ ಹಿನ್ನೆಲೆ ವಿದ್ಯಾರ್ಥಿಗಳಿಗೆ ಗೊಂದಲ ಶುರುವಾಗಿದೆ.

Spread the love

Related Articles

Leave a Reply

Your email address will not be published.

Back to top button
Flash News