cricketIPL2021-14TH SESSION

Injured Deepak Chahar Of Chennai Super Kings Set To Miss Half Of IPL 2022 14 ಕೋಟಿಗೆ ಸೇಲಾಗಿದ್ದ ದೀಪಕ್ ಚಾಹರ್ ಐಪಿಎಲ್ ಮೊದಲಾರ್ಧ ಹೊರಗೆ!

14 ಕೋಟಿ ರೂ.ಗೆ ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ಮಾರಾಟವಾಗಿದ್ದ ಆಲ್ ರೌಂಡರ್ ದೀಪಕ್ ಚಾಹರ್ ಐಪಿಎಲ್  ಟಿ-20 ಟೂರ್ನಿಯ ಮೊದಲಾರ್ಧ ಪಂದ್ಯಗಳಿಂದ ಹೊರಗುಳಿಯಲಿದ್ದಾರೆ.

ಕೋಲ್ಕತಾದಲ್ಲಿ ನಡೆದ ವೆಸ್ಟ್ ಇಂಡೀಸ್ ವಿರುದ್ಧದ 3ನೇ ಟಿ-20 ಪಂದ್ಯದಲ್ಲಿ ತೊಡೆಸಂಧು ನೋವಿಗೆ ಒಳಗಾಗಿದ್ದ ದೀಪಕ್ ಚಾಹರ್ ಚೇತರಿಸಿಕೊಳ್ಳದ ಹಿನ್ನೆಲೆಯಲ್ಲಿ ಟೂರ್ನಿಯ ಆರಂಭಿಕ ಕೆಲವು ಪಂದ್ಯಗಳಿಂದ ಹೊರಗುಳಿಯಲಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ತಂಡ ಹೇಳಿಕೆ ನೀಡಿದೆ.

ಬೆಂಗಳೂರಿನ ಎನ್ ಸಿಎನಲ್ಲಿ ಪುನಶ್ಚೇತನ ಶಿಬಿರದಲ್ಲಿ ಪಾಲ್ಗೊಂಡಿರುವ ದೀಪಕ್ ಚಾಹರ್ ಆರೋಗ್ಯ ಸ್ಥಿತಿ ಬಗ್ಗೆ ಇನ್ನೂ ಅಂತಿಮ ವರದಿ ಬಂದಿಲ್ಲ. ಈ ಹಿನ್ನೆಲೆಯಲ್ಲಿ ಅವರು ಎಷ್ಟು ಪಂದ್ಯಗಳಿಂದ ಹೊರಗುಳಿಯಲಿದ್ದಾರೆ ಎಂಬುದು ಹೇಳಲು ಸಾಧ್ಯವಿಲ್ಲ ಎಂದು ಸಿಎಸ್ ಕೆ ಹೇಳಿದೆ.

ಮಾರ್ಚ್ 26ರಂದು ನಡೆಯುವ ಉದ್ಘಾಟನಾ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಮುಂಬೈ ಇಂಡಿಯನ್ಸ್ ತಂಡಗಳು ಎದುರಾಗಲಿವೆ.

Spread the love

Related Articles

Leave a Reply

Your email address will not be published.

Back to top button
Flash News