ಪ್ರತಿಪಕ್ಷ ಕಾಂಗ್ರೆಸ್ ಮೇಕೆದಾಟು ಯೋಜನೆಗೆ ಆಗ್ರಹಿಸಿ ನಡೆಸಿದ ಪಾದಯಾತ್ರೆ ಬೆನ್ನಲ್ಲೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಚೊಚ್ಚಲ ಬಜೆಟ್ ನಲ್ಲಿ ಮೇಕೆದಾಟು ಯೋಜನೆಗೆ 1000 ಕೋಟಿ ರೂ. ಮೀಸಲಿಡುವ ಮೂಲಕ ಭರ್ಜರಿಯಾಗಿ ತಿರುಗೇಟು ನೀಡಿದ್ದಾರೆ.
ಶುಕ್ರವಾರ ಬೆಳಿಗ್ಗೆ 12.30ಕ್ಕೆ ಬೊಮ್ಮಾಯಿ ಮಂಡಿಸಿದ ಚೊಚ್ಚಲ ಬಜೆಟ್ ನಲ್ಲಿ ನೀರಾವರಿ ಯೋಜನೆಗೆ ಭರ್ಜರಿ ಕೊಡುಗೆ ಘೋಷಿಸಿದ್ದು, ಕೃಷ್ಣ ಮೇಲ್ದಂಡೆ ಯೋಜನೆಗೆ 5 ಕೋಟಿ ರೂ. ಮೀಸಲಿಡುವುದಾಗಿ ಪ್ರಕಟಿಸಿದರು.
ಭದ್ರಾ ಮೇಲ್ದಂಡೆ ಯೋಜನೆಗೆ 3 ಸಾವಿರ ಕೋಟಿ, ಎತ್ತಿನಹೊಳೆ ಯೋಜನೆಗೆ 3 ಸಾವಿರ ಕೋಟಿ ರೂ. ಸೇರಿದಂತೆ ಬೊಮ್ಮಾಯಿ ರಾಜ್ಯದ ಮಹತ್ವಾಕಾಂಕ್ಷಿ ನೀರಾವರಿ ಯೋಜನೆಗೆ ಬಂಪರ್ ಕೊಡುಗೆ ಘೋಷಿಸಿದ್ದಾರೆ.