Breakingcricket

175 ರನ್ ಸಿಡಿಸಿ ಕಪಿಲ್ ದೇವ್ ದಾಖಲೆ ಮುರಿದ ಜಡೇಜಾ! jadeja breaks kapil dev record

ಭಾರತದ ಆಲ್ ರೌಂಡರ್ ರವೀಂದ್ರ ಜಡೇಜಾ ಶ್ರೀಲಂಕಾ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ ಅಜೇಯ 175 ರನ್ ಸಿಡಿಸುವ ಮೂಲಕ ಕಪಿಲ್ ದೇವ್ ಅವರ ದಾಖಲೆಯನ್ನು ಮುರಿದಿದ್ದಾರೆ.

ಮೊಹಾಲಿಯಲ್ಲಿ ಶನಿವಾರ ನಡೆದ ಮೊದಲ ಟೆಸ್ಟ್ ಪಂದ್ಯದ ಎರಡನೇ ದಿನ ಜಡೇಜಾ ಅವರ ಅಜೇಯ 175 ರನ್ ನೆರವಿನಿಂದ ಭಾರತ ಮೊದಲ ಇನಿಂಗ್ಸ್ ನಲ್ಲಿ 8 ವಿಕೆಟ್ ಕಳೆದುಕೊಂಡು 574 ರನ್ ಗಳಿಸಿದ್ದಾಗ ಡಿಕ್ಲೇರ್ ಮಾಡಿಕೊಂಡಿತು.

ಜಡೇಜಾ 228 ಎಸೆತಗಳಲ್ಲಿ 17 ಬೌಂಡರಿ ಮತ್ತು 3 ಸಿಕ್ಸರ್ ಸೇರಿದ 175 ರನ್ ಬಾರಿಸಿ ಔಟಾಗದೇ ಉಳಿದರು. ಅಲ್ಲದೇ ಆರ್.ಅಶ್ವಿನ್ (61) ಜೊತೆ 7ನೇ ವಿಕೆಟ್ ಗೆ 130 ರನ್ ಜೊತೆಯಾಟ ನಿಭಾಯಿಸಿ ಭಾರತ ಬೃಹತ್ ಮೊತ್ತ ದಾಖಲಿಸಲು ನೆರವಾದರು.

ಅಜೇಯ 175 ರನ್ ಬಾರಿಸುವ ಮೂಲಕ ಜಡೇಜಾ ಟೆಸ್ಟ್ ಕ್ರಿಕೆಟ್ ನಲ್ಲಿ 7ನೇ ಕ್ರಮಾಂಕದ ಬ್ಯಾಟ್ಸ್ ಮನ್ ಗಳಿಸಿದ ಗರಿಷ್ಠ ವೈಯಕ್ತಿಕ ಸಾಧನೆ ಮಾಡಿದರು. ಅಲ್ಲದೇ ಕಪಿಲ್ ದೇವ್ 1983ರಲ್ಲಿ ಶ್ರೀಲಂಕಾ ವಿರುದ್ಧ ಕಾನ್ಪುರದಲ್ಲಿ ಗಳಿಸಿದ್ದ 163 ರನ್ ಗಳ ದಾಖಲೆಯನ್ನು ಮುರಿದರು.

Spread the love

Related Articles

Leave a Reply

Your email address will not be published.

Back to top button
Flash News