BreakingTop News

ಅಂಗನವಾಡಿ ಕಾರ್ಯಕರ್ತೆಯರಿಂದ ಪ್ರತಿಭಟನೆಗೆ ನಿರ್ಧಾರ angnawadi voilentrs protest

ನಿನ್ನೆ ಸಿಎಂ ಬಸವರಾಜ ಬೊಮ್ಮಾಯಿ ತಮ್ಮ ಬೊಚ್ಚಲ ಬಜೆಟ್ ಮಂಡಿಸಿದ್ದು. ಈ ಬಜೆಟ್‌ನಲ್ಲಿ ಅಂಗನವಾಡಿ ಕಾರ್ಯಕರ್ತೆಯರ ಬೇಡಿಕೆ ಪರಿಗಣಿಸಿ, ಮಾಸಿಕ ವೇತನ ಹೆಚ್ಚಳದ ಬಗ್ಗೆ ಘೋಷಣೆ ಮಾಡಿದ್ದರು.

ಅಂಗನವಾಡಿ ಕಾರ್ಯಕರ್ತೆಯರಿಗೆ ಸೇವಾನುಭವ ಆಧಾರದಲ್ಲಿ 1 ಸಾವಿರ ರೂಪಾಯಿಗಳಿಂದ 1,500 ರೂಪಾಯಿಗಳ ವರೆಗೆ ಗೌರವಧನ ಹೆಚ್ಚಿಸಿದ್ದರು. ಕೇವಲ 1500 ರೂಪಾಯಿವರೆಗೆ ಮಾತ್ರ ವೇತನ ಹೆಚ್ಚಳ ಮಾಡಿರುವುದಕ್ಕೆ ಅಂಗನವಾಡಿ ಕಾರ್ಯಕರ್ತೆಯರು ವಿರೋಧ ವ್ಯಕ್ತಪಡಿಸಿದ್ದಾರೆ.  ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘದಿಂದ ಇಂದು ಬೆಂಗಳೂರಿನಲ್ಲಿ ವಿಧಾನಸೌಧ ಚಲೋ ಹಮ್ಮಿಕೊಳ್ಳಲಾಗಿದೆ.

ಈ ಹಿಂದೆ ಹಲವು ಬಾರಿ ರಾಜ್ಯ ಸರ್ಕಾರದ  ವಿರುದ್ಧ ಸಿಡಿದೆದ್ದಿದ್ದ ಅಂಗನವಾಡಿ ಕಾರ್ಯಕರ್ತೆಯರು ಈಗ ಮತ್ತೊಮ್ಮೆ ಸಿಡಿದೆದ್ದಿದ್ದಾರೆ. ಬಜೆಟ್‌ನಲ್ಲಿ  ಬೇಡಿಕೆ ಈಡೇರಿಸಬೇಕು ಅಂತ ಡೆಡ್‌ಲೈನ್  ಕೊಟ್ಟಿದ್ದರು. ಆದರೆ ನಿನ್ನೆ ಬಜೆಟ್ ಮಂಡನೆಯಾಗಿದ್ದು, ತಮ್ಮ ಬೇಡಿಕೆ ಈಡೇರಿಲ್ಲ ಅಂತ ಅಂಗನವಾಡಿ ಕಾರ್ಯಕರ್ತೆಯರು ಅಸಮಾಧಾನ ವ್ಯಕ್ತಪಡಿಸಿದ್ದು. ಹೀಗಾಗಿ ತಮ್ಮ ಬೇಡಿಕೆ ಈಡೇರಿಸಲೇ ಬೇಕು ಅಂತ ಪಟ್ಟು ಹಿಡಿದ್ದಾರೆ.

ಇಂದು ‘ವಿಧಾನಸೌಧ ಚಲೋ’ ನಡೆಸಿದ್ದು, ಫ್ರೀಡಂ ಪಾರ್ಕ್‌ನಲ್ಲಿ ವಿವಿಧ ಬೇಡಿಕೆ ಆಗ್ರಹಿಸಿ ಪ್ರತಿಭಟನೆ ನಡೆಸಿದ್ದಾರೆ. ಅಂಗನವಾಡಿ ಕೇಂದ್ರಗಳನ್ನು ಅನಿರ್ಧಿಷ್ಟಾವಧಿಗೆ ಬಂದ್ ಮಾಡಲಾಗಿದ್ದು, ಬೆಂಗಳೂರಲ್ಲಿ ನಡೆಯುತ್ತಿರುವ ಪ್ರತಿಭಟನೆಯಲ್ಲಿ ಸುಮಾರು ಎರಡು‌ ಸಾವಿರ ಅಂಗನವಾಡಿ ಕಾರ್ಯಕರ್ತೆಯರು ಭಾಗಿಯಾಗಿದ್ದಾರೆ.

Spread the love

Related Articles

Leave a Reply

Your email address will not be published.

Back to top button
Flash News