ರಾಜ್ಯದಲ್ಲಿ ಕುಸಿದ ಕೊರೊನಾ: 229 ಕೇಸ್ ಪತ್ತೆ, ಮೂವರು ಬಲಿ 229 new covid cases in karnataka
ರಾಜ್ಯದಲ್ಲಿ ಕುಸಿದ ಕೊರೊನಾ: 229 ಕೇಸ್ ಪತ್ತೆ, ಮೂವರು ಬಲಿ
ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 229 ಕೊರೊನಾ ಸೋಂಕು ಪ್ರಕರಣಗಳು ದೃಢಪಟ್ಟಿದ್ದು, ಮೂವರು ಮೃತಪಟ್ಟಿದ್ದಾರೆ.
ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಭಾನುವಾರ ನೀಡಿದ ಮಾಹಿತಿ ಪ್ರಕಾರ ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 3248ಕ್ಕೆ ಇಳಿಕೆಯಾಗಿದ್ದು, ಪಾಸಿಟಿವಿಟಿ ದರ ಶೇ.0.47ಕ್ಕೆ ಕುಸಿದಿದೆ.
ಬೆಂಗಳೂರಿನಲ್ಲಿ ಒಂದೇ ದಿನ 146 ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ಇಬ್ಬರು ಸೋಂಕಿಗೆ ಬಲಿಯಾಗಿದ್ದಾರೆ.