BreakingTop News

ಮಂಡ್ಯ ಜನರ ವಿಷಯಕ್ಕೆ ಬಂದರೆ ಸುಮ್ಮನಿರಲ್ಲ: ಸುಮಲತಾ ಗುಡುಗು

ಮಂಡ್ಯದಲ್ಲಿ ಕೆಲಸಕ್ಕಿಂತ ಕ್ರೆಡಿಟ್ಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ. ನಾನು ಮಾಡಿರುವ ಕೆಲಸಗಳನ್ನು ಮಾಡಿಲ್ಲ ಅಂತ ಹೇಳಿದರೆ ಸುಮ್ಮನಿರಲು ಸಾಧ್ಯವಿಲ್ಲ. ಮಂಡ್ಯ ಜನರ ವಿಷಯಕ್ಕೆ ಬಂದರೆ ಸುಮ್ಮನಿರಲು ಸಾಧ್ಯವಿಲ್ಲ ಎಂದು ಸಂಸದರೆ ಸುಮಲತಾ ಅಂಬರೀಶ್ ಗುಡುಗಿದ್ದಾರೆ.

ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಂಡ್ಯ ಜನರು ವಿಶ್ವಾಸ ಇಟ್ಟು ನನ್ನನ್ನು ಆಯ್ಕೆ ಮಾಡಿದ್ದಾರೆ. ನಾನು ಅವರ ಕೆಲಸಗಳನ್ನು ಮಾಡುತ್ತೇನೆ. ಕ್ರೆಡಿಟ್ ತೆಗೆದುಕೊಳ್ಳಲು ಅಲ್ಲ. ಕ್ರೆಡಿಟ್ ವಾರ್ ಯಾರು ಆರಂಭಿಸುತ್ತಾರೋ ಅವರು ಅವರ ಜವಾಬ್ದಾರಿ ಬಗ್ಗೆ ನೋಡಿಕೊಳ್ಳಬೇಕು ಎಂದು ಪರೋಕ್ಷವಾಗಿ ಬಿಜೆಪಿ ಸಂಸದ ಪ್ರತಾಪ್ ಸಿಂಹ ಅವರಿಗೆ ಟಾಂಗ್ ನೀಡಿದರು.

ಶಿಂಷಾ ಸೇತುವೆ ವಿಚಾರ ನಾನು ಪ್ರತಿಭಟನಾ ಸ್ಥಳಕ್ಕೆ ಹೋಗಿದ್ದೇನೆ. ನಿತಿನ್ ಗಡ್ಕರಿ ಅವರಿಗೆ ಪತ್ರ ಬರೆದಿದ್ದೇನೆ. ನಾಲ್ಕು ಬಾರಿ ಅವರನ್ನು ಭೇಟಿ ಮಾಡಿದ್ದೇನೆ. ಈ ವಿಷಯವನ್ನು ಸಚಿವಾಲಯದಲ್ಲೇ ಕೇಳಿ ಅನುಮಾನ ಬಗೆಹರಿಸಿಕೊಳ್ಳಬಹುದು ಎಂದು ಸುಮಲತಾ ಹೇಳಿದರು.

ನನ್ನ ಕ್ಷೇತ್ರದ ವಿಚಾರವಾಗಿ ನಾನು ಕೆಲಸ ಮಾಡುತ್ತೇನೆ. ನಾನು ಮಾಡಿದ ಕೆಲಸ ಮಾಡಿಲ್ಲ ಅಂತಾ ಹೇಳಿದರೆ ನಾನು ಸುಮ್ಮನಿರಲ್ಲ. ನನ್ನನ್ನು ಟಾರ್ಗೆಟ್ ಮಾಡುವುದು ಮೊದಲಿನಿಂದಲೂ ನಡೆದಿದೆ. ನನ್ನ ಜಿಲ್ಲೆಗೆ ಸಂಬಂಧಪಟ್ಟ ವಿಚಾರ ಮಾತ್ರ ನಾನು ಮಾತನಾಡುತ್ತೇನೆ. ನಾನು ಏನೇ ಮಾಡಿದರೂ ವಿರೋಧ ಮಾಡಬೇಕೆಂದು ಅವರು ನಿರ್ಧರಿಸಿದ್ದಾರೆ ಎಂದು ಅವರು ಹೇಳಿದರು.

Spread the love

Related Articles

Leave a Reply

Your email address will not be published.

Back to top button
Flash News