Breakingcricket

ಐಸಿಸಿ ಟೆಸ್ಟ್ ರ್ಯಾಂಕಿಂಗ್: ನಂ.1 ಸ್ಥಾನಕ್ಕೆ ಮರಳಿದ ಜಡೇಜಾ! jadeja returns to No.1 in ICC test ranking

ಗಾಯದಿಂದ ಚೇತರಿಸಿಕೊಂಡ ಬೆನ್ನಲ್ಲೇ ರವೀಂದ್ರ ಜಡೇಜಾ ಐಸಿಸಿ ಟೆಸ್ಟ್ ರ್ಯಾಂಕಿಂಗ್ ನ ಆಲ್ ರೌಂಡರ್ ಗಳ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೆ ಮರಳಿದ್ದಾರೆ.

ಶ್ರೀಲಂಕಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಅಮೋಘ ಪ್ರದರ್ಶನ ನೀಡಿದ್ದ ರವೀಂದ್ರ ಜಡೇಜಾ ಅಜೇಯ 175 ರನ್ ಹಾಗೂ 9 ವಿಕೆಟ್ ಪಡೆದು ಮಿಂಚಿದ್ದರು. ಅಲ್ಲದೇ ಪಂದ್ಯಶ್ರೇಷ್ಠ ಪ್ರಶಸ್ತಿಗೂ ಭಾಜನರಾಗಿದ್ದರು.

ಈ ಪ್ರದರ್ಶನದ ಮೂಲಕ ಆಲ್ ರೌಂಡರ್ ಗಳ ಪಟ್ಟಿಯಲ್ಲಿ ವೆಸ್ಟ್ ಇಂಡೀಸ್ ಆಲ್ ರೌಂಡರ್ ಜೇಸನ್ ಹೋಲ್ಡರ್ ಅವರನ್ನು ಹಿಂದಿಕ್ಕಿದ ಜಡೇಜಾ ಅಗ್ರಸ್ಥಾನಕ್ಕೆ ಮರಳಿ ಲಗ್ಗೆ ಹಾಕಿದ್ದಾರೆ. ಭಾರತದ ಮತ್ತೊಬ್ಬ ಆಲ್ ರೌಂಡರ್ ಆರ್.ಅಶ್ವನ್ 3ನೇ ಸ್ಥಾನಕ್ಕೆ ಕುಸಿದಿದ್ದಾರೆ.

ಇದೇ ವೇಳೆ ಬ್ಯಾಟಿಂಗ್ ವಿಭಾಗದಲ್ಲಿ ಭಾರತದ ಮಾಜಿ ನಾಯಕ ವಿರಾಟ್ ಕೊಹ್ಲಿ 2 ಸ್ಥಾನ ಮೇಲೇರಿ 5ನೇ ಸ್ಥಾನಕ್ಕೆ ಜಿಗಿದಿದ್ದಾರೆ. ನಾಯಕನಾಗಿ ಆಡಿದ ಮೊದಲ ಪಂದ್ಯದಲ್ಲಿ ನಿರಾಸೆ ಮೂಡಿಸಿದ ರೋಹಿತ್ ಶರ್ಮ 6ನೇ ಸ್ಥಾನಕ್ಕೆ ಕುಸಿದಿದ್ದಾರೆ. ಆಸ್ಟ್ರೇಲಿಯಾದ ಮಾರ್ನೂಸ್ ಲಬೂಸ್ಚೇಂಜ್ ಅಗ್ರಸ್ಥಾನದಲ್ಲಿದ್ದಾರೆ.

Spread the love

Related Articles

Leave a Reply

Your email address will not be published.

Back to top button
Flash News