ಕಾಂಗ್ರೆಸ್ ಭದ್ರಕೋಟೆ ಎಂದೇ ಹೇಳಲಾಗುತ್ತಿದ್ದ ಪಂಜಾಬ್ ನಲ್ಲಿ ಆಡಳಿತಾರೂಢ ಕಾಂಗ್ರೆಸ್ ಹೀನಾಯ ಸೋಲುಂಡಿದ್ದು, ಆಮ್ ಆದ್ಮಿ ಪಕ್ಷ ಅಧಿಕಾರಕ್ಕೇರುವುದು ಬಹುತೇಕ ಖಚಿತವಾಗಿದೆ.
ಪಂಜಾಬ್ 117 ಸ್ಥಾನಗಳಿಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ 18 ಸ್ಥಾನಗಳಲ್ಲಿ ಮುನ್ನಡೆ ಗಳಿಸಿದ್ದು, ಸ್ವತಃ ಮುಖ್ಯಮಂತ್ರಿ ಚರಣ್ ಜೀತ್ ಸಿಂಗ್ ಚನ್ನಿ ಸೇರಿದಂತೆ 8 ಸಚಿವರು ಸೋಲಿನ ಭೀತಿ ಎದುರಿಸುತ್ತಿದ್ದಾರೆ.
ಆಮ್ ಆದ್ಮಿ ಪಕ್ಷ 90 ಸ್ಥಾನಗಳಲ್ಲಿ ಮುನ್ನಡೆ ಪಡೆಯುವ ಮೂಲಕ ದೆಹಲಿ ನಂತರ ಮತ್ತೊಂದು ರಾಜ್ಯದಲ್ಲಿ ಅಧಿಕಾರ ಹಿಡಿಯುವಲ್ಲಿ ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಪ್ ಯಶಸ್ವಿಯಾಗಿದೆ.
ಕಾಂಗ್ರೆಸ್ ಪಕ್ಷದ ಸೋಲಿಗೆ ಮಾಜಿ ಸಿಎಂ ಕ್ಯಾಪ್ಟನ್ ಅಮರಿಂದರ್ ಸಿಂಗ್ ಹೊಸ ಪಕ್ಷ ರಚಿಸಿ ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡಿದ್ದು ಕಾಂಗ್ರೆಸ್ ಗೆ ದೊಡ್ಡ ಹೊಡೆತ ಬಿದ್ದಂತಾಗಿದೆ. ಅಕಾಲಿದಳ 6 ಮತ್ತು ಬಿಜೆಪಿ 2 ಸ್ಥಾನ ಪಡೆದುಕೊಂಡಿದೆ.