Breakingರಾಜ್ಯ-ರಾಜಧಾನಿ

ಬಿ ಟೀಂ ಆರೋಪಕ್ಕೆ ಗದ್ಧಲದ ಗೂಡಾದ ವಿಧಾನಸಭೆ ಕಲಾಪ!

ಜೆಡಿಎಸ್‍ ಬಿಜೆಪಿಯ ಬಿ ಟೀಮ್ ಎಂಬ ಕಾಂಗ್ರೆಸ್ ಟೀಕೆ ಹಿನ್ನೆಲೆಯಲ್ಲಿ ಬುಧವಾರ ವಿಧಾನಸಭೆಯಲ್ಲಿ ಜೆಡಿಎಸ್‍ ಹಾಗೂ ಕಾಂಗ್ರೆಸ್ ಸದಸ್ಯರ ನಡುವೆ ಮಾತಿನ ಚಕಮಕಿ ನಡೆಯಿತು.

ಬಜೆಟ್ ಮೇಲಿನ ಚರ್ಚೆಯ ಸಂದರ್ಭದಲ್ಲಿ ಹೆಚ್.ಡಿ. ಕುಮಾರಸ್ವಾಮಿ ಮಾತನಾಡುತ್ತಿದ್ದಾಗ ಕಾಂಗ್ರೆಸ್ ಪಕ್ಷದ ಉಪನಾಯಕ ಯು.ಟಿ.ಖಾದರ್ ನೀವು ಬಜೆಟ್ ಮೇಲೆ ಮಾತನಾಡುತ್ತಿದ್ದಾರೋ? ವಿರೋಧಪಕ್ಷದ ನಾಯಕರು ಮಾತನಾಡಿರುವುದರ ಬಗ್ಗೆ ಮಾತನಾಡುತ್ತಿದ್ದರೋ ಸ್ಪಷ್ಟಪಡಿಸಿ ಎಂದು ಕೇಳಿದರು.

ಆಗ ಜೆಡಿಎಸ್‍ ಸದಸ್ಯರು ಆಕ್ಷೇಪ ವ್ಯಕ್ತಪಡಿಸಿದಾಗ ಕಾಂಗ್ರೆಸ್ ಸದಸ್ಯರು ಎದ್ದು ನಿಂತು ಮಾತನಾಡಲು ಆರಂಭಿಸಿದರು. ಸದನದಲ್ಲಿ ಗದ್ದಲದ ವಾತಾವರಣ ನಿರ್ಮಾಣವಾಯಿತು. ಬಿಜೆಪಿ ಸದಸ್ಯರು ಕೂಡ ಮಧ್ಯಪ್ರವೇಶಿಸಿದಾಗ ಮತ್ತಷ್ಟು ಗದ್ದಲ ಹೆಚ್ಚಾಯಿತು.

ಈ ವೇಳೆ ಮಾತನಾಡಿದ ಸಚಿವ ಜೆ.ಸಿ. ಮಾಧುಸ್ವಾಮಿ, ವಿರೋಧ ಪಕ್ಷದ ನಾಯಕರು ಮಾತನಾಡುವಾಗ ಮುಖ್ಯಮಂತ್ರಿ ಮಂಡಿಸಿದ ಬಜೆಟ್‍ಗಿಂತ ತಾವು ಮಂಡಿಸಿದ್ದ ಬಜೆಟ್ ಬಗ್ಗೆ ಮಾತನಾಡುತ್ತಿದ್ದಾರೆ ಎಂಬ ಅನುಮಾನವಿತ್ತು. ನಾನು ಈ ರೀತಿ ಎಂದಿದ್ದೆ. ಎರಡೂ ಬಜೆಟ್‍ಗಳ ಹೋಲಿಕೆ ಮಾಡಿದ್ದಾರೆ. ಕುಮಾರಸ್ವಾಮಿ ಅವರು ಮಾತನಾಡುತ್ತಿದ್ದಾರೆ. ವಿರೋಧ ಪಕ್ಷದ ನಾಯಕರು ಮಾಡಿರುವ ಭಾಷಣಕ್ಕೆ ಉತ್ತರ ಹೇಳಲು ಮುಖ್ಯಮಂತ್ರಿಗೆ ಎರಡು ದಿನ ಬೇಕಾಗುತ್ತದೆ ಎಂದರು.

ಖಾದರ್ ಅವರು ನಿಮ್ಮನ್ನು ಅವರು ಸಮರ್ಥನೆ ಮಾಡುತ್ತಾರೆ. ಅವರನ್ನು ನೀವು ಸಮರ್ಥಿಸಿಕೊಳ್ಳುತ್ತೀರಿ. ಈ ರೀತಿಯಾದರೆ ಬಿ ಟೀಮ್ ಎಂದು ಹೇಳುವುದಿಲ್ಲವೇ ಎಂದು ಪ್ರಶ್ನಿಸಿದರು. ಆಗ ಜೆಡಿಎಸ್ ಶಾಸಕರು ಕೆರಳಿ ಆಕ್ಷೇಪ ವ್ಯಕ್ತಪಡಿಸಿದರು.

ಪ್ರತಿಯಾಗಿ ಕಾಂಗ್ರೆಸ್ ಸದಸ್ಯರು ಎದ್ದು ನಿಂತು ಮಾತನಾಡಲು ಮುಂದಾದರು. ಮತ್ತೆ ಸದನದಲ್ಲಿ ಗದ್ದಲದ ವಾತಾವರಣ ನಿರ್ಮಾಣವಾಗಿ ಉಭಯ ಸದಸ್ಯರ ನಡುವೆ ಮಾತಿನ ವಾಗ್ವಾದ ನಡೆಯಿತು.

Spread the love

Related Articles

Leave a Reply

Your email address will not be published.

Back to top button
Flash News