Breakingಸಿನೆಮಾ ಹಂಗಾಮ

ಉಪೇಂದ್ರ ನಿರ್ದೇಶನದ ಪೋಸ್ಟರ್ ಬಿಡುಗಡೆ, ಸಿನಿಮಾ ಹೆಸರು ಏನು ಗೊತ್ತಾ? upendra new film poster relese

ರಿಯಲ್ ಸ್ಟಾರ್ ಉಪೇಂದ್ರ ಮತ್ತೆ ನಿರ್ದೇಶನಕ್ಕಿಳಿದಿದ್ದು, ಅವರ ಹೊಸ ಚಿತ್ರದ ಪೋಸ್ಟರ್ ಬಿಡುಗಡೆ ಮೂಲಕ ಅಧಿಕೃತವಾಗಿ ಘೋಷಣೆ ಮಾಡಲಾಯಿತು.

ಉಪೇಂದ್ರ ಅವರ ಚಿತ್ರಕಥೆ, ಸಂಭಾಷಣೆ ಮತ್ತು ನಿರ್ದೇಶನವಿರುವ ಹೊಸ ಚಿತ್ರದ ಪೋಸ್ಟರ್ ಬಿಡುಗಡೆ ಮಾಡಲಾಗಿದ್ದು, ಜಿ. ಮನೋಹರನ್ ಹಾಗೂ ಕೆಪಿ ಶ್ರೀಕಾಂತ್ ನಿರ್ಮಿಸುತ್ತಿದ್ದು, ನವೀನ್ ಮನೋಹರ್ ಸಹ ನಿರ್ಮಾಪಕರಾಗಿದ್ದಾರೆ. 

ಚಿತ್ರದ ಟೈಟಲ್ ಮಾತ್ರ ತೀವ್ರ ಕುತೂಹಲಕ್ಕೆ ಕಾರಣವಾಗಿದೆ. ಆಂಗ್ಲ ಭಾಷೆಯ ಯು ಮತ್ತು ಐಯನ್ನು ಒಳಗೊಂಡಿದೆ. ಕನ್ನಡ, ತೆಲುಗು, ತತಮಿಳು ಹಾಗೂ ಮಲಯಾಳಂನಲ್ಲಿ ಚಿತ್ರ ಬರುತ್ತಿರುವುದನ್ನು ಫೋಸ್ಟರ್ ನಲ್ಲಿ ತೋರಿಸಲಾಗಿದೆ. 

ಶುಕ್ರವಾರ ಟ್ವೀಟ್ ಮಾಡಿರುವ ಉಪೇಂದ್ರ, ಚಿತ್ರರಂಗದಲ್ಲಿ ಉಪ್ರೇಂದ್ರ ಅನ್ನೋ ಕಥೆ ಮಾಡಿ, 33 ವರ್ಷದ ಚಿತ್ರಕಥೆಯಲ್ಲಿ ಸಂಭಾಷಣೆ ಹೇಳಿಸಿ, ಶಿಳ್ಳೆ, ಚಪ್ಪಾಳೆಯಲ್ಲಿ ನಿರ್ದೇಶನ ಮಾಡಿದ ಎಲ್ಲಾ ಅಭಿಮಾನಿ ಪ್ರಜಾ ಪ್ರಭುಗಳಿಗೆ ಈ ಚಿತ್ರ ಅರ್ಪಿಸುತ್ತಿರುವುದಾಗಿ ತಿಳಿಸಿದ್ದಾರೆ.

Spread the love

Related Articles

Leave a Reply

Your email address will not be published.

Back to top button
Flash News