10 ವರ್ಷದ ಬಾಲಕಿ ಗರ್ಭಪಾತಕ್ಕೆ ಕೇರಳ ಹೈಕೋರ್ಟ್ ಅನುಮತಿ! keral high court give permission to obarstion 10 year old girl

10 ವರ್ಷದ ಬಾಲಕಿ ಗರ್ಭಪಾತಕ್ಕೆ ಕೇರಳ ಹೈಕೋರ್ಟ್ ಅನುಮತಿ!

0

ತಂದೆಯಿಂದಲೇ ಅತ್ಯಾಚಾರಕ್ಕೆ ಒಳಗಾಗಿದ್ದ 10 ವರ್ಷದ ಬಾಲಕಿಯ ಗರ್ಭಪಾತಕ್ಕೆ ಕೇರಳ ಹೈಕೋರ್ಟ್ ಅನುಮತಿ ನೀಡಿದೆ.

ಅಪ್ಪನಿಂದಲೇ ಅತ್ಯಾಚಾರಕ್ಕೆ ಒಳಗಾಗಿದ್ದ ಮಗಳ ಸುರಕ್ಷಿತ ಹಾಗೂ ಮುಂದಿನ ಉತ್ತಮ ಭವಿಷ್ಯಕ್ಕಾಗಿ ತಾಯಿ ನ್ಯಾಯಾಲಯದ ಮೆಟ್ಟಿಲೇರಿದ್ದಳು. ಅತ್ಯಂತ ಅಪರೂಪದ ಹಾಗೂ ಆಘಾತಕಾರಿ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಕೇರಳ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ.

ಬಾಲಕಿ 30 ತಿಂಗಳ ಗರ್ಭಿಣಿಯಾಗಿದ್ದು, ವೈದ್ಯಕೀಯ ಪರೀಕ್ಷೆ ನಡೆಸಿದಾಗ ಯಶಸ್ವಿಯಾಗಿ ಗರ್ಭಪಾತ ಮಾಡಿಸಬಹುದು. ಹಾಗೂ ಮಗುವನ್ನು ಉಳಿಸುವ ಅವಕಾಶ ಶೇ.80ರಷ್ಟು ಮಾತ್ರ ಇದೆ ಎಂದು ವರದಿ ಬಂದಿತ್ತು.

ಪ್ರಕರಣದ ವಿಚಾರಣೆ ನಡೆಸಿದ ಹೈಕೋರ್ಟ್ ಪೀಠ, ಇಂತಹ ಘಟನೆ ಸಮಾಜದಲ್ಲಿ ನಡೆಯುತ್ತಿರುವುದಕ್ಕೆ ನಾಚಿಕೆಯಾಗಬೇಕು ಎಂದು ಕಿಡಿ ಕಾರಿದ್ದು, ಅಪ್ಪನ ವಿರುದ್ಧ ಪ್ರಕರಣ ದಾಖಲಿಸಿ ಶಿಕ್ಷೆ ಗುರಿಮಾಡುವಂತೆ ಸೂಚಿಸಿದೆ.

Spread the love
Leave A Reply

Your email address will not be published.

Flash News