ಕಾರು ಡಿಕ್ಕಿ: ಬೈಕ್ ನಲ್ಲಿ ಧರ್ಮಸ್ಥಳಕ್ಕೆ ಹೋಗುತ್ತಿದ್ದ ದಂಪತಿ ದುರ್ಮರಣ coupls killed in road accedent

ಕಾರು ಡಿಕ್ಕಿ: ಬೈಕ್ ನಲ್ಲಿ ಧರ್ಮಸ್ಥಳಕ್ಕೆ ಹೋಗುತ್ತಿದ್ದ ದಂಪತಿ ದುರ್ಮರಣ

0

ದಂಪತಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಬೈಕ್ ನಲ್ಲಿ ಧರ್ಮಸ್ಥಳಕ್ಕೆ ಹೋಗುತ್ತಿದ್ದ ದಂಪತಿ ಸ್ಥಳದಲ್ಲೇ ಮೃತಪಟ್ಟ ಘಟನೆ ಚಿಕ್ಕಮಗಳೂರಿನಲ್ಲಿ ಸಂಭವಿಸಿದೆ.

ಚಿಕ್ಕಮಗಳೂರಿನ ದಂಟರಮಕ್ಕಿ ಕೆರೆ ಬಳಿ ಭಾನುವಾರ ಮುಂಜಾನೆ ಈ ದುರ್ಘಟನೆ ಸಂಭವಿಸಿದ್ದು, ಆನಂದ್ (35) ಲಕ್ಷ್ಮೀ (33) ಮೃತಪಟ್ಟ ದುರ್ದೈವಿಗಳು.

ಕಾರು ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಹೊಡೆದ ರಭಸಕ್ಕೆ ಬೈಕ್ ಸುಟ್ಟು ಹೋಗಿದ್ದರೆ, ಕಾರು ನಜ್ಜುಗುಜ್ಜಾಗಿದೆ.

ಚಿಕ್ಕಮಗಳೂರು ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Spread the love
Leave A Reply

Your email address will not be published.

Flash News