ಪುನೀತ್ ರಾಜ್ ಕುಮಾರ್ ಗೆ ಮೈಸೂರು ವಿವಿಯಿಂದ ಗೌರವ ಮರಣೋತ್ತರ ಡಾಕ್ಟರೇಟ್! mysore vv honour doctarate for puneeth rajkumar

ಪುನೀತ್ ರಾಜ್ ಕುಮಾರ್ ಗೆ ಮೈಸೂರು ವಿವಿಯಿಂದ ಗೌರವ ಮರಣೋತ್ತರ ಡಾಕ್ಟರೇಟ್!

0

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಗೆ ಮೈಸೂರು ವಿಶ್ವವಿದ್ಯಾಲಯ ಗೌರವ ಮರಣೋತ್ತರ ಡಾಕ್ಟರೇಟ್ ಲಭಿಸಿದೆ.

ಸಿನಿಮಾ ಮತ್ತು ಸಾಮಾಜಿಕ ಕ್ಷೇತ್ರದಲ್ಲಿನ ಸಾಧನೆ ಪರಿಗಣಿಸಿ ಅವರಿಗೆ ಮೈಸೂರು ವಿಶ್ವವಿದ್ಯಾಲಯ ಮರಣೋತ್ತರವಾಗಿ ಗೌರವ ಡಾಕ್ಟರೇಟ್ ನೀಡಿ ಗೌರವಿಸುವುದಾಗಿ ಪ್ರಕಟಿಸಿದೆ.

ಪುನೀತ್ ರಾಜ್ ಕುಮಾರ್ ನಿಧನದ ನಂತರ ಅವರ ಮೊದಲ ಜಯಂತಿಗೆ ವಾರದ ಮೊದಲು ಗೌರವ ಡಾಕ್ಟರೇಟ್ ಲಭಿಸಿರುವುದು ಅಭಿಮಾನಿಗಳಿಗೆ ಖುಷಿ ತಂದಿದೆ.

ಇದೇ ತಿಂಗಳು 22 ರಂದು ನಡೆಯಲಿರುವ ವಿವಿಯ 102 ನೇ ಘಟಿಕೋತ್ಸವದಲ್ಲಿ ಡಾಕ್ಟರೇಟ್ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಇದಕ್ಕಾಗಿ ಈಗಾಗಲೇ ಪುನೀತ್ ಪತ್ನಿ ಅಶ್ವಿನಿ ಪುನೀತ್ ರಾಜ್ ಕುಮಾರ್ ಗೆ ಅಧಿಕೃತವಾಗಿ ಆಹ್ವಾನ ನೀಡಲಾಗಿದೆ.

Spread the love
Leave A Reply

Your email address will not be published.

Flash News