Top News

ಹಿಜಾಬ್ ತೀರ್ಪು ನಾಳೆ ಪ್ರಕಟ: ಬೆಂಗಳೂರಿನಲ್ಲಿ ಒಂದು ವಾರ ನಿಷೇದಾಜ್ಞೆ Hijab case: Ahead of HC’s judgment, Sec 144 imposed in Bengaluru

ಹಿಜಾಬ್ ವಿವಾದ ಕುರಿತು ಹೈಕೋರ್ಟ್ ನಾಳೆ ತೀರ್ಪು ಪ್ರಕಟಿಸಲಿದ್ದು, ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಪೊಲೀಸರು ಕಟ್ಟೆಚ್ಚರ ವಹಿಸಿದ್ಧಾರೆ.

ಶಾಲಾ-ಕಾಲೇಜುಗಳಲ್ಲಿ ಹಿಜಾಬ್ ಧರಿಸಲು ಅವಕಾಶ ಹಾಗೂ ಸಮವಸ್ತ್ರ ಧರಿಸುವುದು ಕಡ್ಡಾಯ ಕುರಿತು ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಪೂರ್ಣಗೊಳಿಸಿರುವ ಹೈಕೋರ್ಟ್ ಮಂಗಳವಾರ ತೀರ್ಪು ಪ್ರಕಟಿಸುವ ಸಾಧ್ಯತೆ ಇದೆ.

ನಾಳೆ ಬೆಳಿಗ್ಗೆ 10.30ರ ಸುಮಾರಿಗೆ ತೀರ್ಪು ಪ್ರಕಟವಾಗುವ ಸಾಧ್ಯತೆ ಇದ್ದು, ಈ ಹಿನ್ನೆಲೆಯಲ್ಲಿ ಬೆಂಗಳೂರು ನಗರದಲ್ಲಿ ಒಂದು ವಾರ ನಿಷೇಧಾಜ್ಞೆ ಜಾರಿಗೊಳಿಸಲಾಗಿದ್ದು, ಯಾವುದೇ ಪ್ರತಿಭಟನೆ ಹಾಗೂ ಹೋರಾಟ ನಡೆಸಲು ಅವಕಾಶ ಇರುವುದಿಲ್ಲ ಎಂದು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ತಿಳಿಸಿದ್ದಾರೆ.

ಬೆಂಗಳೂರು ಅಲ್ಲದೇ ರಾಜ್ಯಾದ್ಯಂತ ಕಟ್ಟೆಚ್ಚರ ವಹಿಸಲಾಗಿದ್ದು, ಪೊಲೀಸ್ ಅಲ್ಲದೇ ಹೆಚ್ಚುವರಿಯಾಗಿ ಕೆಎಸ್ ಆರ್ ಪಿ ತುಕಡಿ ನಿಯೋಜಿಸಲಾಗುತ್ತಿದೆ.

Spread the love

Related Articles

Leave a Reply

Your email address will not be published.

Back to top button
Flash News