ದೇಶದ ಎಲ್ಲಾ ಕೇಂದ್ರೀಯ ವಿಶ್ವವಿದ್ಯಾಲಯಗಳಲ್ಲಿ ಇನ್ನು ಮುಂದೆ ಸಾಮಾನ್ಯ ಪ್ರವೇಶ ಪರೀಕ್ಷೆ ನಡೆಸಲಾಗುವುದು ಎಂದು ಯುಜಿಸಿ ಅಧ್ಯಕ್ಷ ಜಗದೀಶ್ ಕುಮಾರ್ ಪ್ರಕಟಿಸಿದ್ದಾರೆ.
ಕ್ಲಾಸ್-12 ಅಥವಾ ಪಿಯುಸಿ ಪರೀಕ್ಷೆ ಅಂಕಗಳನ್ನು ಪರಿಗಣಿಸದೇ ಪ್ರವೇಶ ಪರೀಕ್ಷೆ ಮೂಲಕ ಕಾಲೇಜುಗಳಲ್ಲಿ ಪ್ರವೇಶ ನೀಡಲಾಗುವುದು ಎಂದು ಅವರು ಹೇಳಿದರು.
ಸಾಮಾನ್ಯ ಪ್ರವೇಶ ಪರೀಕ್ಷೆಯನ್ನು ಜುಲೈ ಮೊದಲ ವಾರದಲ್ಲಿ ನಡೆಸಲು ತೀರ್ಮಾನಿಸಲಾಗಿದ್ದು, 13 ಭಾಷೆಗಳಲ್ಲಿ ಪರೀಕ್ಷೆ ನಡೆಸಲಾಗುವುದು ಎಂದು ಅವರು ತಿಳಿಸಿದರು.