ಮೇಕೆದಾಟು ಕುರಿತು ನಾಳೆ ಸದನದಲ್ಲಿ ನಿರ್ಣಯ: ಸಿಎಂ ಬೊಮ್ಮಾಯಿ mekedhatu will done: cm bommai

ಮೇಕೆದಾಟು ಕುರಿತು ನಾಳೆ ಸದನದಲ್ಲಿ ನಿರ್ಣಯ: ಸಿಎಂ ಬೊಮ್ಮಾಯಿ

0

ಮೇಕೆದಾಟು ಯೋಜನೆ ಮಾಡಿಯೇ ಮಾಡುತ್ತೇವೆ. ಈ ಕುರಿತು ನಾಳೆ ಸದನದಲ್ಲಿ ನಿರ್ಣಯ ಮಂಡಿಸುತ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ವಿಧಾನಸಭೆ ಕಲಾಪದಲ್ಲಿ ಮಂಗಳವಾರ ಮೇಕೆದಾಟು ಯೋಜನೆ ಕುರಿತು ಚರ್ಚೆಯ ವೇಳೆ ತಮಿಳುನಾಡು ವಿಧಾನಸಭೆ ಕೈಗೊಂಡಿರುವ ನಿರ್ಣಯ ಖಂಡಿಸಿದ ಅವರು, ಈ ಕುರಿತು ತಜ್ಞರ ಸಭೆಯಲ್ಲಿ ಚರ್ಚಿಸಿದ ನಂತರ ನಿರ್ಣಾಯ ಮಂಡಿಸುವುದಾಗಿ ತಿಳಿಸಿದರು.

ಮೇಕೆದಾಟು ಯೋಜನೆ ಕುರಿತು ತಮಿಳುನಾಡು ನಿರ್ಣಯಕಾನೂನು ಬಾಹಿರ ಆಗಿದೆ. ಈ ಯೋಜನೆ ಕುಡಿಯುವ ನೀರು ಹಾಗೂ ವಿದ್ಯುತ್ ಉತ್ಪಾದನೆಗಾಗಿ ರೂಪಿಸಲಾಗುತ್ತಿದೆ. ಇದರಿಂದ ತಮಿಳುನಾಡಿಗೆ ಯಾವುದೇಸಮಸ್ಯೆ ಇಲ್ಲ ಎಂದು ಅವರು ಹೇಳಿದರು.

ತಮಿಳುನಾಡು ಹೆಚ್ಚುವರಿ ನೀರನ್ನ ಬಳಕೆ ಮಾಡಿಯೋಜನೆ ರೂಪಿಸುತ್ತಿದೆ. ಅದಕ್ಕೆ ಯಾವುದೇ ಅನುಮತಿ ಇಲ್ಲದೆ ಅಡಿಗಲ್ಲು ಹಾಕುವ ಪ್ರಯತ್ನ ನಡೆಯುತ್ತಿದೆ. ನಾವು ಕಾವೇರಿ ನೀರನ್ನು ಬಳಕೆ ಮಾಡುವ ಎಲ್ಲ ಸಂದರ್ಭದಲ್ಲಿ ತಮಿಳುನಾಡಿನಿಂದ ಅಡ್ಡಿಯಾಗುತ್ತಿದೆ. ನಮ್ಮ ನೀರಿನ ಹಕ್ಕು ಪಡೆದುಕೊಳ್ಳಲು ನಾವು ಪರಿತಪಿಸುವುದು ರಾಜ್ಯದ ಹಿತ ದೃಷ್ಟಿಯಿಂದ ಸರಿಯಲ್ಲ ಎಂದು ಹೇಳಿದ್ರು. ಕೇಂದ್ರಕ್ಕೂ ಒತ್ತಾಯ ಮಾಡುತ್ತೇವೆ ಎಂದು ಬೊಮ್ಮಾಯಿ ಸ್ಪಷ್ಟಪಡಿಸಿದರು.

ನಮ್ಮ ಡಿಪಿಆರ್ ಹಾಗೂ ಪರಿಸರ ಇಲಾಖೆಯ ಅನುಮತಿ ಸಿಗಬೇಕು .ಅದರಲ್ಲಿ ಎರಡು ಮಾತಿಲ್ಲ. ತಮಿಳುನಾಡು ನಿರ್ಣಯಕಾನೂನು ಬಾಹಿರ. ನಮ್ಮ ಹಕ್ಕಿನ ಮೇಲೆ ಗದಾ ಪ್ರಹಾರ ಮಾಡುವುದು ಒಕ್ಕೂಟ ವ್ಯವಸ್ಥೆಗೆ ವಿರುದ್ಧವಾಗಿದೆ ಎಂದು ಸಿಎಂ ತಿಳಿಸಿದರು.

Spread the love
Leave A Reply

Your email address will not be published.

Flash News