Breakingcricket

ಐಪಿಎಲ್: ಮೈದಾನದಲ್ಲಿ ಶೇ.25ರಷ್ಟು ಪ್ರೇಕ್ಷಕರಿಗೆ ಅವಕಾಶ! IPL: 25 persent seat for matches

ದೇಶದಲ್ಲಿ ಕೊರೊನಾ ಅಬ್ಬರ ಇಳಿಮುಖ ಕಾಣುತ್ತಿರುವ ಹಿನ್ನೆಲೆಯಲ್ಲಿ ಐಪಿಎಲ್ ಟಿ-20 ಟೂರ್ನಿಯಲ್ಲಿ ಮೈದಾನದಲ್ಲಿ ಶೇ.25ರಷ್ಟು ಪ್ರೇಕ್ಷಕರಿಗೆ ಅವಕಾಶ ನೀಡಲು ಬಿಸಿಸಿಐ ತೀರ್ಮಾನಿಸಿದೆ.

ಕೋವಿಡ್ ನಿಯಮಗಳ ಪ್ರಕಾರ ಐಪಿಎಲ್ ಪಂದ್ಯಗಳನ್ನು ವೀಕ್ಷಿಸಲು ಪ್ರೇಕ್ಷಕರಿಗೆ ಶೇ.25ರಷ್ಟು ಅವಕಾಶ ನೀಡಲಾಗುವುದು ಎಂದು ಬಿಸಿಸಿಐ ಪ್ರಕಟಣೆಯಲ್ಲಿ ತಿಳಿಸಿದೆ.

ಮಾರ್ಚ್ 26ರಿಂದ ಐಪಿಎಲ್ ಪಂದ್ಯಗಳು ಆರಂಭವಾಗಲಿದ್ದು, ಮುಂಬೈ ಹಾಗೂ ಪುಣೆಯಲ್ಲಿ ಲೀಗ್ ಹಂತದ ಪಂದ್ಯಗಳು ನಡೆಯಲಿವೆ. ಈ ಪಂದ್ಯಗಳನ್ನು ಪ್ರೇಕ್ಷಕರು ಇಲ್ಲದೇ ಖಾಲಿ ಮೈದಾನದಲ್ಲಿ ನಡೆಸಲು ನಿರ್ಧರಿಸಲಾಗಿತ್ತು.

ಇದೀಗ ನಿಯಮದಲ್ಲಿ ಸಡಿಲ ಮಾಡಿರುವ ಬಿಸಿಸಿಐ ಶೇ.25ರಷ್ಟು ಪ್ರೇಕ್ಷಕರಿಗೆ ಅವಕಾಶ ನೀಡಲು ನಿರ್ಧರಿಸಿದೆ.

Spread the love

Related Articles

Leave a Reply

Your email address will not be published.

Back to top button
Flash News