Breakingcricket

ಐಪಿಎಎಲ್ ನಲ್ಲಿ ಕೆಕೆಆರ್ ಗೆಲುವಿನ ಆರಂಭ: ಚಾಂಪಿಯನ್ ಚೆನ್ನೈ ಆರಂಭದಲ್ಲೇ ಆಘಾತ Iyer leads Kolkata to 6-wicket win

ನಾಯಕತ್ವದಿಂದ ಕೆಳಗಿಳಿದ ನಂತರ ಗಳಿಸಿದ ಅರ್ಧಶತಕದ ಹೊರತಾಗಿಯೂ ಹಾಲಿ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ಐಪಿಎಲ್ 2022 ಆವೃತ್ತಿಯಲ್ಲಿ ಸೋಲಿನ ಆರಂಭ ಪಡೆದಿದೆ.

ಸಂಘಟಿತ ಪ್ರದರ್ಶನ ನೀಡಿದ ಕೋಲ್ಕತಾ ನೈಟ್ ರೈಡರ್ಸ್ ತಂಡ 6 ವಿಕೆಟ್ ಗಳ ಭರ್ಜರಿ ಗೆಲುವಿನೊಂದಿಗೆ ಕಳೆದ ಬಾರಿ ಫೈನಲ್ ನಲ್ಲಿ ಅನುಭವಿಸಿದ ಸೋಲಿಗೆ ಸೇಡು ತೀರಿಸಿಕೊಂಡಿದ್ದೂ ಅಲ್ಲದೇ ಐಪಿಎಲ್ ನಲ್ಲಿ ಶುಭಾರಂಭ ಮಾಡಿತು.

ಮುಂಬೈ ವಾಂಖೇಡೆ ಕ್ರೀಡಾಂಗಣದಲ್ಲಿ ಶನಿವಾರ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಚೆನ್ನೈ ಸೂಪರ್ ಕಿಂಗ್ಸ್ ತಂಡ 20 ಓವರ್ ಗಳಲ್ಲಿ 7 ವಿಕೆಟ್ ಕಳೆದುಕೊಂಡು 131 ರನ್ ಗಳಿಸಿತು. ಸುಲಭ ಗುರಿ ಬೆಂಬತ್ತಿದ ಕೆಕೆಆರ್ 3 ವಿಕೆಟ್ ಕಳೆದುಕೊಂಡು ಜಯಭೇರಿ ಬಾರಿಸಿತು.

ಕೆಕೆಆರ್ ತಂಡಕ್ಕೆ ಅಜಿಂಕ್ಯ ರಹಾನೆ ಮತ್ತು ವೆಂಕಟೇಶ್ ಅಯ್ಯರ್ ಮೊದಲ ವಿಕೆಟ್ ಗೆ 43 ರನ್ ಜೊತೆಯಾಟ ನಿಭಾಯಿಸಿ ಉತ್ತಮ ಆರಂಭ ನೀಡಿದರು. ರಹಾನೆ 34 ಎಸೆತಗಳಲ್ಲಿ 6 ಬೌಂಡರಿ ಮತ್ತು 1 ಸಿಕ್ಸರ್ ಒಳಗೊಂಡ 44 ರನ್ ಬಾರಿಸಿದರೆ, ಅಯ್ಯರ್ (16) ಬೇಗನೇ ನಿರ್ಗಮಿಸಿದರು.

ನಾಯಕ ಶ್ರೇಯಸ್ ಅಯ್ಯರ್ 20, ನಿತಿನ್ ರಾಣಾ (21) ಮತ್ತು ಬಿಲ್ಲಿಂಗ್ಸ್‍ 25 ರನ್ ಗಳಿಸಿ ತಂಡಕ್ಕೆ ಸುಲಭ ಗೆಲುವು ತಂದುಕೊಟ್ಟರು. ಸಿಎಸ್ ಕೆ ಪರ ಡ್ವೈನ್ ಬ್ರಾವೊ 3 ವಿಕೆಟ್ ಗಳಿಸಿದರು.

Spread the love

Related Articles

Leave a Reply

Your email address will not be published.

Back to top button
Flash News