ಜೂನ್ 16ರಿಂದ ಸಿಇಟಿ: ವೇಳಾಪಟ್ಟಿ ಪ್ರಕಟ CET eaxm from june 16th
ಜೂನ್ 16ರಿಂದ ಸಿಇಟಿ: ವೇಳಾಪಟ್ಟಿ ಪ್ರಕಟ
ಜೂನ್ 16ರಿಂದ ಮೂರು ದಿನಗಳ ಕಾಲ ಪ್ರಸಕ್ತ ಸಾಲಿನ ಸಿಇಟಿ ಪರೀಕ್ಷೆ ನಡೆಯಲಿದೆ ಎಂದು ಉನ್ನತ ಶಿಕ್ಷಣ ಸಚಿವ ಅಶ್ವಥ್ ನಾರಾಯಣ ಪ್ರಕಟಿಸಿದ್ದಾರೆ.
ಸೋಮವಾರ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಜೂನ್ 16, 17, 18ರಂದು ಸಿಇಟಿ ಪರೀಕ್ಷೆ ನಡೆಯಲಿದೆ. ಏಪ್ರಿಲ್ 5ರಿಂದ ಆನ್ಲೈನ್ ಮೂಲಕ ವಿದ್ಯಾರ್ಥಿಗಳು ಅರ್ಜಿ ಸಲ್ಲಿಕೆ ಮಾಡಬಹುದಾಗಿದ್ದು, ಏಪ್ರಿಲ್ 20ರವರೆಗೆ ಅರ್ಜಿ ಸಲ್ಲಿಕೆಗೆ ಅವಕಾಶ ನೀಡಲಾಗಿದೆ. ಏಪ್ರಿಲ್ 22ವರೆಗೆ ಶುಲ್ಕ ಪಾವತಿಗೆ ಕೊನೆದಿನ ನಿಗದಿ ಮಾಡಲಾಗಿದೆ ಎಂದು ತಿಳಿಸಿದ್ದಾರೆ.
ಜೂನ್ 16 ರಂದು ಜೀವಶಾಸ್ತ್ರ ಹಾಗೂ ಗಣಿತ ವಿಷಯಗಳ ಪರೀಕ್ಷೆ ನಡೆಯಲಿದೆ. ಜೂನ್ 17 ರಂದು ಭೌತಶಾಸ್ತ್ರ ಮತ್ತು ರಸಾಯನಶಾಸ್ತ್ರ ಪರೀಕ್ಷೆ ನಡೆಯಲಿವೆ. ಜೂನ್ 18ರಂದು ಗಡಿನಾಡು ಮತ್ತು ಹೊರನಾಡು ಕನ್ನಡಿಗರಿಗೆ ಕನ್ನಡ ಪರೀಕ್ಷೆ ನಡೆಯಲಿದೆ ಎಂದರು.
ಮೇ 2ರಿಂದ 6ರವರೆಗೂ ವಿದ್ಯಾರ್ಥಿಗಳು ಅರ್ಜಿಯಲ್ಲಿನ ಲೋಪ ಸರಿಪಡಿಸಲು ಅವಕಾಶ ನೀಡಲಾಗಿದೆ. ಮೇ 30ರಿಂದ ಪರೀಕ್ಷೆ ಪ್ರವೇಶ ಪತ್ರ ಡೌನ್ಲೋಡ್ ಮಾಡಿಕೊಳ್ಳಲು ಅವಕಾಶ ನೀಡಲಾಗಿದೆ ಎಂದು ಮಾಹಿತಿ ನೀಡಿದರು.