ಏಪ್ರಿಲ್ 5ರ ಪ್ರಧಾನಿ ಮೋದಿ ಕರ್ನಾಟಕ ಪ್ರವಾಸ ರದ್ದು! pm modi visit karnataka cancel

ಏಪ್ರಿಲ್ 5ರ ಪ್ರಧಾನಿ ಮೋದಿ ಕರ್ನಾಟಕ ಪ್ರವಾಸ ರದ್ದು!

0

ಪ್ರಧಾನಿ ನರೇಂದ್ರ ಮೋದಿ ಏಪ್ರಿಲ್ 5ರಂದು ಕೈಗೊಳ್ಳಬೇಕಿದ್ದ ಕರ್ನಾಟಕ ಪ್ರವಾಸ ದಿಢೀರನೆ ರದ್ದುಗೊಳಿಸಲಾಗಿದೆ.

ಏಪ್ರಿಲ್ 5ರಂದು ಇಸ್ರೇಲ್ ಪ್ರಧಾನಿ ನಫ್ತಾಲಿ ಬೆನೆಟ್ ಜೊತೆ ಪ್ರಧಾನಿ ಮೋದಿ ರಾಜ್ಯಕ್ಕೆ ಭೇಟಿ ನೀಡಬೇಕಿತ್ತು. ಆದರೆ ನಫ್ತಾಲಿ ಬೆನೆಟ್ ಗೆ ಕೊರೊನಾ ಸೋಂಕು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಕರ್ನಾಟಕ ಪ್ರವಾಸ ರದ್ದುಗೊಳಿಸಲಾಗಿದೆ.

ಅಂಬೇಡ್ಕರ್ ಸ್ಕೂಲ್ ಆಫ್ ಎಕನಾಮಿಕ್ಸ್ ಲೋಕಾರ್ಪಣೆ, ಮೇಲ್ದರ್ಜೆಗೇರಿಸಿದ 150 ಐಟಿಐ ಉದ್ಘಾಟನೆ ಮತ್ತು ಬೆಂಗಳೂರು ಸಬರ್ಬನ್ ರೈಲು ಯೋಜನೆಗೆ ಶಂಕುಸ್ಥಾಪನೆ ಸೇರಿದಂತೆ ಮೂರು ಕಾರ್ಯಕ್ರಮಗಳಿಗೆ ಚಾಲನೆ ನೀಡಬೇಕಿತ್ತು.

Spread the love
Leave A Reply

Your email address will not be published.

Flash News