ವಿದೇಶೀ ಬಂಡವಾಳ ಹೂಡಿಕೆಯಲ್ಲಿ ಕರ್ನಾಟಕ ನಂ.1: ಮುರುಗೇಶ್ ನಿರಾಣಿ karnataka No.1 in FDI: murugesh nirani
ವಿದೇಶೀ ಬಂಡವಾಳ ಹೂಡಿಕೆಯಲ್ಲಿ ಕರ್ನಾಟಕ ನಂ.1: ಮುರುಗೇಶ್ ನಿರಾಣಿ
ಜಾಗತಿಕ ಮಟ್ಟಕ್ಕೆ ಹೋಲಿಸಿದರೆ ಕರ್ನಾಟಕ ಹಾಗೂ ಬೆಂಗಳೂರು ಅತೀ ಹೆಚ್ಚು ಮೂಲಸೌಕರ್ಯ ಹೊಂದಿದೆ. ಇದರಿಂದ ವಿದೇಶೀ ಬಂಡವಾಳ ಹೂಡಿಕೆಯಲ್ಲಿ ಕರ್ನಾಟಕ ನಂ.1 ಆಗಿದೆ ಎಂದು ಬೃಹತ್ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ಹೇಳಿದರು.
ಬೆಂಗಳೂರಿನಲ್ಲಿ ಮಂಗಳವಾರ ನಡೆದ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶ ಇನ್ವೆಸ್ಟ್ ಕರ್ನಾಟಕ-2022 ಅನಾವರಣಗೊಳಿಸಿ ಮಾತನಾಡಿದ ಅವರು, ಕರ್ನಾಟಕ ಮತ್ತು ಬೆಂಗಳೂರಿನಲ್ಲಿ ವಿದ್ಯುತ್, ನೀರು, ಪರಿಸರ ಸೇರಿದಂತೆ ಎಲ್ಲಾ ರೀತಿಯ ಉತ್ತಮ ವಾತಾವರಣ ಇದೆ ಎಂದರು.
“ಇನ್ವೆಸ್ಟ್ ಕರ್ನಾಟಕ 2022” ನವೆಂಬರ್ 2 ರಿಂದ 4 ರವರೆಗೆ ಬೆಂಗಳೂರು ಅರಮನೆಯಲ್ಲಿ ನಡೆಯಲಿದೆ. ಬಂಡವಾಳ ಹೂಡಿಕೆದಾರರ ಸಮಾವೇಶದಿಂದ ರಾಜ್ಯಕ್ಕೆ ದೇಶ-ವಿದೇಶದಿಂದ ಹೆಚ್ಚಿನ ಬಂಡವಾಳ ಹರಿದು ಬರಲಿದೆ. ಈ ಕ್ರಾಂತಿಯಿಂದ ಬೃಹತ್ ಪ್ರಮಾಣದಲ್ಲಿ ಉದ್ಯೋಗ ಸೃಷ್ಟಿಯಾಗಲಿದೆ,”ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವರಾದ ಮುರುಗೇಶ್ ಆರ್ ನಿರಾಣಿ ಅವರು ತಿಳಿಸಿದರು.